ಕರ್ನಾಟಕ

ರಾಜ್ಯದಲ್ಲಿಂದು (ಶುಕ್ರವಾರ) ದಾಖಲೆಯ 337 ಕೊರೋನಾ ಪ್ರಕರಣಗಳು ಪತ್ತೆ; 10 ಸಾವು!

Pinterest LinkedIn Tumblr


ಬೆಂಗಳೂರು; ಪ್ರತಿದಿನ ಇನ್ನೂರರ ಸರಾಸರಿಯಲ್ಲಿ ಏರುತ್ತಿದ್ದ ರಾಜ್ಯದ ಕೊರೋನಾ ಪೀಡಿತರ ಸಂಖ್ಯೆ ಇಂದು(ಶುಕ್ರವಾರ) ದಾಖಲೆಯ ಮುನ್ನೂರರ ಗಡಿ ದಾಟಿದೆ. ರಾಜ್ಯದಲ್ಲಿ ಇಂದು 337 ಹೊಸ ಕೊರೋನಾ ಸೋಂಕು ಪ್ರಕರಣಗಳು ದಾಖಲಾಗಿದ್ದರೆ, ರಾಜಧಾನಿ ಬೆಂಗಳೂರಿನಲ್ಲಿ ಮಾತ್ರ ದಾಖಲೆಯ 138 ಸೋಂಕು ಪ್ರಕರಣಗಳು ಪತ್ತೆಯಾಗಿವೆ. ಈ ಮೂಲಕ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 8281ಕ್ಕೆ ಏರಿಕೆಯಾದಂತಾಗಿದೆ ಎಂದು ರಾಜ್ಯ ಆರೋಗ್ಯ ಇಲಾಖೆ ಇಂದು ಬಿಡುಗಡೆಗೊಳಿಸಿರುವ ಹೆಲ್ತ್‌ ಬುಲೆಟಿನ್‌ನಲ್ಲಿ ತಿಳಿಸಿದೆ.

ಈ ಮೂಲಕ ರಾಜ್ಯದಲ್ಲಿ ಮುಂಬರುವ ದಿನಗಳಲ್ಲಿ ಮಾರಣಾಂತಿಕ ಕೊರೋನಾ ಸೋಂಕಿತರ ಸಂಖ್ಯೆ ಗಣನೀಯ ಪ್ರಮಾಣದಲ್ಲಿ ಮತ್ತಷ್ಟು ಏರಿಕೆಯಾಗುವ ಸಾಧ್ಯತೆಯನ್ನು ಇಂದಿನ ಅಂಕಿಅಂಶಗಳು ತೆರೆದಿಟ್ಟಿದೆ.

ಬೆಂಗಳೂರು ನಗರದಲ್ಲಿ 138, ಕಲಬುರಗಿಯಲ್ಲಿ 52, ಬಳ್ಳಾರಿಯಲ್ಲಿ 37, ಹಾಸನದಲ್ಲಿ 18, ದಕ್ಷಿಣ ಕನ್ನಡದಲ್ಲಿ 13, ದಾವಣಗೆರೆಯಲ್ಲಿ 12, ಉಡುಪಿಯಲ್ಲಿ 11, ಬೀದರ್ ನಲ್ಲಿ 10, ಮೈಸೂರು, ಕೊಪ್ಪಳದಲ್ಲಿ ತಲಾ 6, ಯಾದಗಿರಿ, ಕೋಲಾರ, ಬೆಂಗಳೂರು ಗ್ರಾಮಾಂತರದಲ್ಲಿ ತಲಾ 4, ಮಂಡ್ಯ, ಧಾರವಾಡ,ಚಿಕ್ಕಬಳ್ಳಾಪುರ, ಬಾಗಲಕೋಟೆ, ರಾಮನಗರದಲ್ಲಿ ತಲಾ 3, ಚಿಕ್ಕಮಗಳೂರು, ತುಮಕೂರಿನಲ್ಲಿ 2, ಬೆಳಗಾವಿ, ಉತ್ತರಕನ್ನಡ, ಶಿವಮೊಗ್ಗದಲ್ಲಿ ತಲಾ 1 ಪ್ರಕರಣಗಳು ವರದಿಯಾಗಿವೆ.

ನಿನ್ನೆ ಮಾರಣಾಂತಿಕ ಕೊರೋನಾ ಸೋಂಕಿಗೆ ರಾಜ್ಯದಲ್ಲಿ 12 ಜನ ಬಲಿಯಾಗಿದ್ದರು. ಇಂದು ಸಹ ಈ ಸೋಂಕಿಗೆ 10 ಜನ ಬಲಿಯಾಗಿದ್ದು ಸಾವಿನ ಸಂಖ್ಯೆ ಸಹ 112ಕ್ಕೆ ಏರಿಕೆಯಾಗಿದೆ. ಇನ್ನೂ ರಾಜ್ಯದ ವಿವಿಧ ಆಸ್ಪತ್ರೆಗಳಲ್ಲಿ ಕೊರೋನಾ ತುರ್ತು ನಿಗಾ ಘಟಕದಲ್ಲಿ 78 ರೋಗಿಗಳು ಚಿಕಿತ್ಸೆ ಪಡೆಯುತ್ತಿದ್ದು, ಸಾವಿನ ಸಂಖ್ಯೆ ಮತ್ತಷ್ಟು ಏರಿಕೆಯಾಗುವ ಸಾಧ್ಯತೆ ಇದೆ ಎನ್ನಲಾಗುತ್ತಿದೆ. ಅಲ್ಲದೆ, 230 ಜನ ಇಂದು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಜಾರ್ಚ್‌ ಆಗಿದ್ದಾರೆ.

Comments are closed.