ಕರ್ನಾಟಕ

ಎಸ್​ಎಸ್​ಎಲ್​ಸಿ ಪರೀಕ್ಷೆ: ಸುರೇಶ್ ಕುಮಾರ್ ವಿರುದ್ಧ ದೂರು ದಾಖಲು

Pinterest LinkedIn Tumblr


ಬೆಂಗಳೂರು: ಕೊರೋನಾ ಸಂಕಷ್ಟದ ನಡುವೆಯೇ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸಲು ಮುಂದಾಗಿರುವ ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರ ವಿರುದ್ಧ ಬೆಂಗಳೂರು ಹಲಸೂರು ಗೇಟ್ ಪೋಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

ಕೊರೋನಾ ಸೋಂಕಿಒತರ ಸಂಖ್ಯೆ ರಾಜ್ಯದಲ್ಲಿ ದಿನದಿನಕ್ಕೆಬೆಳೆಯುತ್ತಿದ್ದರೂ ಶಿಕ್ಷಣ ಸಚಿವರು ವಿದ್ಯಾರ್ಥಿಗಳ ಜೀವನದಲ್ಲಿ ಆಟವಾಡುತ್ತಿದ್ದಾರೆ. ಈ ಸಮಯದಲ್ಲಿ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುವುದು ವಿದ್ಯಾರ್ಥಿಗಳ ಜೀವಕ್ಕೆ ಕಂಟಕ ಎಂದು ಆರೋಪಿಸಿ ಶಿಕ್ಷಣ ಸಚಿವ ಸುರೇಶ್ ಕುಮಾರ್ ಅವರ ವಿರುದ್ಧ ಜನಾಧಿಕಾರ ಸಂಘರ್ಷ ಪರಿಷತ್ ದೂರು ದಾಖಲಿಸಿದೆ.

ಜನಾಧಿಕಾರ ಸಂಘರ್ಷ ಪರಿಷತ್ ಮುಖ್ಯಸ್ಥ ಹಾಗೂ ಸಾಮಾಜಿಕ ಕಾರ್ಯಕರ್ತ ಆದರ್ಶ ಅಯ್ಯರ್ ಸಚಿವ ಸುರೇಶ್ ಕುಮಾರ್ ಅವರ ವಿರುದ್ಧ ದೂರು ದಾಖಲು ಮಾಡಿದ್ದು “ಕೊರೋನಾ ಸಂಕಟದ ಕಾಲದಲ್ಲಿಯೂ ವಿದ್ಯಾರ್ಥಿಗಳ ಜೀವನದಲ್ಲಿ ಚೆಲ್ಲಾಟವಾಡುವಂತೆ ಎಸ್​ಎಸ್​ಎಲ್​ಸಿ ಪರೀಕ್ಷೆ ನಡೆಸುತ್ತಿರುವುದರಿಂದ ಸಚಿವರ ವಿರುದ್ಧ ಐಪಿಸಿ ಸೆಕ್ಷನ್ 107, 304( ಉದ್ದೇಶಿತವಲ್ಲದ ಕೊಲೆ) ಪ್ರಕರಣ ದಾಖಲಿಸಬೇಕೆಂದು ದೂರು ನೀಡಿದ್ದಾರೆ.

ಕರ್ನಾಟಕ ಶಿಕ್ಷಣ ಕಾಯ್ದೆ 22 ನೇ ಸೆಕ್ಷನ್ ಪ್ರಕಾರ ಇಂಟರ್ನಲ್‌ ಅಸೆಸ್‌ಮೆಂಟ್‌ ಮಾರ್ಕ್‌ ನೋಡಿ ವಿದ್ಯಾರ್ಥಿಗಳನ್ನು ಪಾಸ್‌ ಮಾಡಬಹುದು ಅನ್ನುವ ಕಾನೂನಿದೆ. ಮಾಡೆಲ್‌ ಮಾಡ್ತೀವಿ ಎಂದು ಆ ಕಾನೂನನ್ನು ಬದಿಗಿಟ್ಟು ಮಕ್ಕಳ ಬದುಕನ್ನು ಅಪಾಯಕ್ಕೆ ತಳ್ಳುವುದು ಸರಿಯಲ್ಲ ಎಂದು ಅವರು ಅಭಿಪ್ರಾಯಪಟ್ಟರು. ಇನ್ನೆರಡು ದಿನಗಳಲ್ಲಿ ಪ್ರಕರಣ ದಾಖಲಾಗದೆ ಹೋದರೆ ಕೋರ್ಟ್ ಮೊರೆ ಹೋಗುವುದಾಗಿಯೂ ಆದರ್ಶ ಅಯ್ಯರ್ ಹೇಳಿದ್ದಾರೆ.

Comments are closed.