ಕರ್ನಾಟಕ

ವೈದ್ಯಕೀಯ ಶಿಕ್ಷಣ ಸಚಿವ ಸುಧಾಕರ್ ತಂದೆ, ಮಾಗಡಿ ಮಾಜಿ ಶಾಸಕನ ಪುತ್ರಿಗೆ ಕೊರೋನಾ ಸೋಂಕು

Pinterest LinkedIn Tumblr


ಬೆಂಗಳೂರು; ವೈದ್ಯಕೀಯ ಶಿಕ್ಷಣ ಸಚಿವ ಡಾ.ಕೆ.ಸುಧಾಕರ್ ಅವರ ತಂದೆ ಮತ್ತು ಅಡುಗೆ ಕೆಲಸದ ವ್ಯಕ್ತಿಗೆ ಹಾಗೂ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಮಗಳಿಗೆ ಕೊರೋನಾ ಸೋಂಕು ದೃಢಪಟ್ಟಿರುವುದನ್ನು ಸ್ವತಃ ಅವರೇ ಸ್ಪಷ್ಟಪಡಿಸಿದ್ದಾರೆ.

ಈ ವಿಷಯವಾಗಿ ಇಂದು ಟ್ವೀಟ್ ಮಾಡಿರುವ ಸಚಿವ ಸುಧಾಕರ್ ಅವರು, ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ. ನಮ್ಮ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರೂ ಕೂಡ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ, ಎಂದು ತಿಳಿಸಿದ್ದಾರೆ. ಹಾಗೆಯೇ ಸಚಿವರ ಪತ್ನಿ, ಮಕ್ಕಳು ಮತ್ತು ಎಲ್ಲ ಮನೆ ಕೆಲಸದವರನ್ನು ಹೋಂ ಕ್ವಾರಂಟೈನ್​ಗೆ ಒಳಪಡಿಸಲಾಗಿದೆ.

ನನ್ನ ತಂದೆಯವರ ಕೋವಿಡ್ ಪರೀಕ್ಷಾ ವರದಿ ಯಲ್ಲಿ ಸೋಂಕು ದೃಢಪಟ್ಟಿದೆ. ಕುಟುಂಬದ ಇತರೆ ಸದಸ್ಯರ ವರದಿಗಾಗಿ ಆತಂಕದಿಂದ ಕಾಯುತ್ತಿದ್ದೇನೆ. ನಿಮ್ಮೆಲ್ಲರ ಹಾರೈಕೆ ಇರಲಿ.
My father’s COVID19 test has come out positive. Anxiously waiting for reports of other family members. Praying for speedy recovery of my father.
— Dr Sudhakar K (@mla_sudhakar) June 22, 2020

ನಮ್ಮ ಮನೆಯಲ್ಲಿ ಸಹಾಯಕರಾಗಿ ಕೆಲಸ ನಿರ್ವಹಿಸುತ್ತಿದ್ದ ವ್ಯಕ್ತಿಗೂ ಕೊರೋನಾ ಸೋಂಕು ಇರುವುದು ದೃಢಪಟ್ಟಿದ್ದು, ಅವರೂ ಕೂಡ ನಿಗದಿತ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
ಅವರೂ ಬೇಗ ಗುಣಮುಖರಾಗಲಿ ಎಂದು ನಮ್ಮ ಪ್ರಾರ್ಥನೆ.
— Dr Sudhakar K (@mla_sudhakar) June 22, 2020

ಹಾಗೆಯೇ ವೃತ್ತಿಯಲ್ಲಿ ವೈದ್ಯರಾಗಿರುವ ಮಾಗಡಿ ಕ್ಷೇತ್ರದ ಮಾಜಿ ಶಾಸಕ ಎಚ್.ಸಿ.ಬಾಲಕೃಷ್ಣ ಅವರ ಮಗಳಿಗೂ ಕೊರೋನಾ ಸೋಂಕು ದೃಢಪಟ್ಟಿರುವುದನ್ನು ಅವರೇ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ. ನನ್ನ ಮಗಳಾದ ಡಾಕ್ಟರ್ ರಚನಾ ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನೆಲೆಯಲ್ಲಿ, ಕೊರೋನಾ (Covid-19) ಪರೀಕ್ಷೆ ಮಾಡಿಸಿದಾಗ, ಪರೀಕ್ಷಾ ವರದಿಯಲ್ಲಿ ಕೊರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ ಎಂದು ತಿಳಿಸಿದ್ದಾರೆ.

ಎಲ್ಲರಿಗೂ ನನ್ನ ನಮಸ್ಕಾರ,
ಮಾಗಡಿ ಬಾಲಕೃಷ್ಣ ಆದ ನಾನು ನನ್ನ ಮಗಳಾದ ಡಾಕ್ಟರ್ ರಚನ ,ಅವಳು ಕಿಮ್ಸ್ ಆಸ್ಪತ್ರೆಯಲ್ಲಿ ವೈದ್ಯ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ, ಕಳೆದ ಎರಡು ದಿನಗಳ ಹಿಂದೆ ಜ್ವರ ಕಾಣಿಸಿಕೊಂಡ ಹಿನ್ನಲೆಯಲ್ಲಿ, ಕೋರೋನಾ (Covid-19) ಪರೀಕ್ಷೆ ಮಾಡಿಸಿದಾಗ, ಪರೀಕ್ಷಾ ವರದಿಯಲ್ಲಿ ಕರೋನಾ ಪಾಸಿಟಿವ್ ಎಂದು ದೃಢಪಟ್ಟಿದೆ,
— HC Balakrishna (@HCBalakrishna1) June 22, 2020

Comments are closed.