ಕರ್ನಾಟಕ

ಕೊರೋನಾ ವಾರಿಯರ್ಸ್​ ಸಾವನ್ನಪ್ಪಿದ್ದರೆ 30 ಲಕ್ಷ ರೂ ವಿಮೆ

Pinterest LinkedIn Tumblr


ಬೆಂಗಳೂರು(ಜೂ.22): ಕೋವಿಡ್-19 ನಿಯಂತ್ರಣಕ್ಕಾಗಿ ಹಗಲಿರುಳು ದುಡಿಯುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಅಂಗನವಾಡಿ ಸಹಾಯಕರು, ಪೌರ ಕಾರ್ಮಿಕರು, ಪೊಲೀಸ್ ಸಿಬ್ಬಂದಿ ಸೇರಿದಂತೆ ಕೊರೋನಾ ವಾರಿಯರ್ಸ್​ ಕೋವಿಡ್ ಸೋಂಕಿಗೆ ಒಳಪಟ್ಟು ಮೃತಪಟ್ಟರೆ 30 ಲಕ್ಷ ರೂಪಾಯಿಗಳ ವಿಮೆ ಪರಿಹಾರ ನೀಡಲಾಗುವುದು ಎಂದು ರಾಜ್ಯ ಸರ್ಕಾರ ಪ್ರಕಟಿಸಿದೆ.

ಪ್ರಧಾನ ಮಂತ್ರಿ ಗರೀಬ್ ಕಲ್ಯಾಣ ಯೋಜನೆಯ ಮಾರ್ಗಸೂಚಿಯಂತೆ ಕೋವಿಡ್-19 ಕೆಲಸದಲ್ಲಿ ಪಾಲ್ಗೊಂಡು ಕರ್ತವ್ಯ ನಿರ್ವಹಿಸುತ್ತಿರುವ ಅಂಗನವಾಡಿ ಕಾರ್ಯಕರ್ತೆಯರು, ಸಹಾಯಕಿಯರು, ಪೌರ ಕಾರ್ಮಿಕರು ಹಾಗು ಪೊಲೀಸ್ ಸಿಬ್ಬಂದಿ, ಹೋಮ್​ ಗಾರ್ಡ್​ ಸೇರಿದಂತೆ ಕೊರೋನಾ ವಾರಿಯರ್ಸ್​​ಗಳಾಗಿ ದುಡಿಯುತ್ತಿರುವವರು ಕೋವಿಡ್ ಸೋಂಕಿಗೆ ಮೃತರಾದಲ್ಲಿ ಈ ಕೆಲಸದಲ್ಲಿರುವವರಿಗೆ ಮನೋ ಸ್ಥೈರ್ಯ ಹೆಚ್ಚಿಸಲು 30 ಲಕ್ಷ ರೂಪಾಯಿ ಪರಿಹಾರ ಒದಗಿಸಲು ಸರ್ಕಾರವು ಮಂಜೂರಾತಿ ನೀಡಿದೆ ಎಂದು ರಾಜ್ಯದ ಆರ್ಥಿಕ ಇಲಾಖೆ ಆದೇಶಿಸಿದೆ.

ಸರ್ಕಾರ ಆದೇಶದ ಪ್ರತಿ

ಯಾರಿಗೆಲ್ಲಾ ವಿಮೆ ಸೌಲಭ್ಯ :
ಅಂಗನವಾಡಿ ಕಾರ್ಯಕರ್ತೆಯರು/ಸಹಾಯಕರು
ಪೊಲೀಸ್ ಸಿಬ್ಬಂದಿ
ಹೋಮ್ ಗಾರ್ಡ್​ಗಳುಪೌರರಕ್ಷಣಾ ದಳ
ಅಗ್ನಿಶಾಮಕ ದಳ ಸಿಬ್ಬಂದಿ
ಬಂದೀಖಾನೆ ಸಿಬ್ಬಂದಿ
ಪೌರಕಾರ್ಮಿಕರು
ಸ್ಯಾನಿಟೈಸರ್ ಕಾರ್ಮಿಕರು
ಪೌರಕಾರ್ಮಿಕ ಚಾಲಕರು/ಲೋಡರ್​ಗಳು

ವಿವಿಧೆಡೆ ಜನಪ್ರತಿನಿಧಿಗಳು, ವಿವಿಧ ಸಂಘ ಸಂಸ್ಥೆಗಳು ಕೋವಿಡ್ 19 ವಾರಿಯರ್ ಗಳಿಗೆ ವಿವಿಧ ಸೌಲಭ್ಯಗಳನ್ನು ನೀಡುತ್ತಿದ್ದಾರೆ. ಆದರೆ ನಮಗೆ ಯಾವುದೇ ಸೌಲಭ್ಯ ನೀಡುತ್ತಿಲ್ಲ ಎಂದು ಕಾರ್ಯಕರ್ತರು ಆರೋಪಿಸಿದ್ದರು. ಮೇಲೆ ತಿಳಿಸಿದ ಪೌರಕಾರ್ಮಿಕರು, ಅಂಗನವಾಡಿ ಕಾರ್ಯಕರ್ತೆ ಮೊದಲಾದವರಿಗೆ 50 ಲಕ್ಷ ವಿಮೆ ಸೌಲಭ್ಯ ನೀಡುವ ಪ್ರಸ್ತಾವ ಸರ್ಕಾರದ ಮುಂದಿತ್ತು. ಈಗ 30 ಲಕ್ಷ ವಿಮೆಯನ್ನು ಸರ್ಕಾರ ಮಂಜೂರು ಮಾಡಿದೆ.

ಕೋವಿಡ್ 19 ಸೋಂಕಿನ ವಿರುದ್ಧ ಸೆಣಸುತ್ತಿರುವ ವೈದ್ಯರು, ಆರೋಗ್ಯ ಸಹಾಯಕಿಯರು, ಆಶಾ ಕಾರ್ಯಕರ್ತೆಯರಿಗೆ ಸರಕಾರ ಆರೋಗ್ಯ ವಿಮೆ ಜಾರಿಗೊಳಿಸಿದೆ. ಆದರೆ ಅಂಗನವಾಡಿ ಕಾರ್ಯಕರ್ತರನ್ನು ಮಾತ್ರ ನಿರ್ಲಕ್ಷಿಸಲಾಗಿದೆ. ಕೋವಿಡ್ 19 ತಡೆ ಕಾರ್ಯಾಚರಣೆ ಸಂದರ್ಭದಲ್ಲಿ ಕಾರ್ಯಕರ್ತೆಯರು ಸೋಂಕಿತರಾದರೆ ಅಥವಾ ಅನಾಹುತ ಉಂಟಾದರೆ ಯಾವುದೇ ರಕ್ಷಣೆ ಇಲ್ಲ.

ಅಂಗನವಾಡಿ ಕಾರ್ಯಕರ್ತೆಯರಿಗೂ ಕೂಡ ಸರಕಾರ ವಿಮಾ ಸೌಲಭ್ಯ ಜಾರಿಗೊಳಿಸಬೇಕು ಮತ್ತು ಉಚಿತ ವೈದ್ಯಕೀಯ ಸೌಲಭ್ಯ ಒದಗಿಸಬೇಕು ಎನ್ನುವುದು ಅಂಗನವಾಡಿ ಕಾರ್ಯಕರ್ತೆಯರ ಪ್ರಮುಖ ಬೇಡಿಕೆಯಾಗಿತ್ತು.

Comments are closed.