ಕೋಲಾರ: ಗುರುವಾರದಿಂದ ರಾಜ್ಯಾದ್ಯಂತ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಆರಂಭವಾಗಲಿದೆ. ಇದರ ಬೆನ್ನಲ್ಲೇ ಕೆಲವು ವಿದ್ಯಾರ್ಥಿಗಳಿಗೆ ಕೊರೊನಾ ಪಾಸಿಟಿವ್ ದೃಢಪಟ್ಟಿರುವುದು ತೀವ್ರ ಆತಂಕ ಉಂಟು ಮಾಡಿದೆ.
ಕೋಲಾರದಲ್ಲಿ ಈಗ ವಿದ್ಯಾರ್ಥಿನಿಗೆ ಕೊರೊನಾ ಪಾಸಿಟಿವ್ ಕಂಡುಬಂದಿದೆ. ಇದು ಕೋಲಾರ ಶಿಕ್ಷಣ ಇಲಾಖೆಗೆ ತಲೆನೋವು ತಂದಿದೆ.
ಕೋಲಾರದ ಕೆಜಿಎಫ್ ತಾಲೂಕಿನ ಎನ್.ಜಿ ಹುಲ್ಕೂರು ಗ್ರಾಮದ ವಿದ್ಯಾರ್ಥಿನಿಯಲ್ಲಿ ಕೊರೋನಾ ದೃಢಪಟ್ಟಿದೆ.
ಈ ವಿದ್ಯಾರ್ಥಿನಿ ಕೆಜಿಎಫ್ ತಾಲೂಕಿನ ಸುಂದರಪಾಳ್ಯ ಪ್ರೌಢಶಾಲೆಯ ಪರೀಕ್ಷಾ ಕೇಂದ್ರದಲ್ಲಿ ಪರೀಕ್ಷೆ ಬರೆಯಬೇಕಾಗಿತ್ತು. ವಿದ್ಯಾರ್ಥಿನಿ ಜೊತೆ ನಾಲ್ವರು ವಿದ್ಯಾರ್ಥಿನಿಯರು ಪ್ರಾಥಮಿಕ ಸಂಪರ್ಕ ಹೊಂದಿರುವ ಸಾಧ್ಯತೆ ಇದೆ.
ಕೊರೋನಾ ಸೋಂಕು ತಗುಲಿರುವುದರಿಂದ ವಿದ್ಯಾರ್ಥಿನಿ ಪರೀಕ್ಷೆ ಬರೆಯಲು ಅವಕಾಶ ಕೊಡದಿರಲು ನಿರ್ಧಾರ ಮಾಡಲಾಗಿದೆ. ಪೂರಕ ಪರೀಕ್ಷೆಯಲ್ಲಿ ಬರೆಯಲು ಅವಕಾಶ ಕಲ್ಪಿಸಲಾಗುವುದು ಎಂದು ಡಿಡಿಪಿಐ ರತ್ನಯ್ಯ ಮಾಹಿತಿ ನೀಡಿದ್ದಾರೆ.
ಇದರೊಂದಿಗೆ ಕೋಲಾರ ಜಿಲ್ಲೆಯಲ್ಲಿ ಕೊರೊನಾ ಸೋಂಕಿತರ ಸಂಖ್ಯೆ 81ಕ್ಕೆ ಏರಿದೆ. 36 ಮಂದಿ ಸೋಂಕಿತರು ಬಿಡುಗಡೆಯಾಗಿದ್ದಾರೆ. 45 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ.
Comments are closed.