ಕರ್ನಾಟಕ

ಖಾಸಗಿ ಆಸ್ಪತ್ರೆಗಳಲ್ಲಿ ಶೇ.50 ರಷ್ಟು ಬೆಡ್ ಗಳು ಕೊರೋನಾ ಸೋಂಕಿತರಿಗೆ ಮೀಸಲಿಡಲು ಸರ್ಕಾರ ಆದೇಶ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಕೋವಿಡ್-19 ಸೋಂಕಿತ ವ್ಯಕ್ತಿಗಳ ಸಂಖ್ಯೆ ದಿನದಿಂದ ದಿನಕ್ಕೆ ಭಾರೀ ಪ್ರಮಾಣದಲ್ಲಿ ಹೆಚ್ಚಾಗುತ್ತಿದ್ದು, ಎಲ್ಲರಿಗೂ ಚಿಕಿತ್ಸೆ ನೀಡುವ ಅಗತ್ಯವಿದೆ. ಹೀಗಾಗಿ ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಬೆಡ್ ಗಳನ್ನು ಕೋವಿಡ್-19 ಸೋಂಕಿತ ವ್ಯಕ್ತಿಗಳಿಗೆ ಮೀಸಲಿಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ.

ಪ್ರಸ್ತುತ ಸಾರ್ವಜನಿಕ ಆರೋಗ್ಯ ಸಂಸ್ಥೆಗಳಲ್ಲಿ ಮಾತ್ರ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್-19 ಚಿಕಿತ್ಸೆ ನೀಡಲು ಖಾಸಗಿ, ಕಾರ್ಪೊರೇಟ್ ಆಸ್ಪತ್ರೆಗಳು, ನರ್ಸಿಂಗ್ ಹೋಂ, ಇತ್ಯಾದಿಗಳನ್ನು ಒಳಗೊಳ್ಳುವುದು ಕಡ್ಡಾಯವಾಗಿದೆ.
ಕೆ.ಪಿ.ಎಂ.ಇ ಕಾಯ್ದೆಯಡಿ ನೋಂದಾಯಿಸಲಾದ ಖಾಸಗಿ ಆರೋಗ್ಯ ಪೂರೈಕೆದಾರರು(ಪಿಹೆಚ್‍ಪಿ) ಕೊವಿಡ್-19 ವ್ಯಾಪ್ತಿಗೆ ಒಳಗೊಳ್ಳುವುದು ಅಗತ್ಯವಾಗಿದೆ. ಹೀಗಾಗಿ ಕೋವಿಡ್-19 ರೋಗಿಗಳಿಗೆ ಚಿಕಿತ್ಸೆ ನೀಡಲು ಸಾಮರ್ಥ್ಯ, ಸೌಲಭ್ಯ ಹೊಂದಿರುವ ಎಲ್ಲಾ ಖಾಸಗಿ ಆಸ್ಪತ್ರೆಗಳ ಶೇ.50 ರಷ್ಟು ಹಾಸಿಗೆಗಳನ್ನು ಸಾರ್ವಜನಿಕ ಆರೋಗ್ಯ ಸಂಸ್ಥೆಗಳಿಂದ ರೆಫರ್ ಆದ ಕೋವಿಡ್ ರೋಗಿಗಳಿಗೆ ಮೀಸಲಿಡುವಂತೆ ಸರ್ಕಾರ ಆದೇಶ ಹೊರಡಿಸಿದೆ.

ವೈದ್ಯಕೀಯ ಕಾಲೇಜ್ ಆಸ್ಪತ್ರೆಗಳು ಮತ್ತು ಖಾಸಗಿ ಆಸ್ಪತ್ರೆಗಳು ಶೇ.50 ರಷ್ಟು ಬೆಡ್ ಗಳನ್ನು ಕೊರೋನಾ ಸೋಂಕಿತರಿಗೆ ಮೀಸಲಿಟ್ಟು, ಸರ್ಕಾರ ನಿಗದಿಪಡಿಸಿದ ದರದಲ್ಲಿ ಚಿಕಿತ್ಸೆ ನೀಡುವಂತೆ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ಅವರು ಆದೇಶ ಹೊರಡಿಸಿದ್ದಾರೆ.

Comments are closed.