ಕರ್ನಾಟಕ

ವಿಜಯಪುರದ ಎಸ್ಎಸ್ಎಲ್‌ಸಿ ವಿದ್ಯಾರ್ಥಿನಿಗೆ ಕೊರೋನಾ ಸೋಂಕು ದೃಢ

Pinterest LinkedIn Tumblr


ವಿಜಯಪುರ/ಬೆಂಗಳೂರು: ವಿಜಯಪುರ ಜಿಲ್ಲೆಯ ಖ್ವಾಜಾ ನಗರದ ಅಂಜುಮನ್ ಶಾಲೆಯಲ್ಲಿ ಓದುತ್ತಿದ್ದ ಎಸ್.ಎಸ್.ಎಲ್.ಸಿ ವಿದ್ಯಾರ್ಥಿನಿಗೆ ಮಂಗಳವಾರ ಕೋವಿಡ್-19 ಸೋಂಕು ದೃಡಪಟ್ಟಿದೆ.

ವಿದ್ಯಾರ್ಥಿನಿಯನ್ನು ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ. ಸೋಂಕಿನ ಹಿನ್ನೆಲೆಯಲ್ಲಿ ವಿದ್ಯಾರ್ಥಿನಿಗೆ ಪ್ರಸಕ್ತ ಸಾಲಿನ ಎಸ್ಎಸ್ಎಲ್ಸಿ ಪರೀಕ್ಷೆಗೆ ಅವಕಾಶ ನೀಡದೆ, ಮುಂದಿ ಎಸ್.ಎಸ್.ಎಲ್.ಸಿ ಪರೀಕ್ಷೆಯನ್ನು ಪ್ರಥಮ ಪರೀಕ್ಷೆ ಎಂದು ಪರಿಗಣಿಸಿ ಅವಕಾಶ ಕಲ್ಪಿಸಲಾಗುವುದು ಎಂದು ಜಿಲ್ಲಾಧಿಕಾರಿ ವೈ.ಎಸ್.ಪಾಟೀಲ ಮಾಹಿತಿ ನೀಡಿದ್ದಾರೆ.

Comments are closed.