ಕರ್ನಾಟಕ

ಮೈಸೂರಿನಲ್ಲಿ ಕೊರೋನಾ ಸಮುದಾಯಕ್ಕೆ ಹರಡುವ ಸಾಧ್ಯತೆ ಇದೆ; ಜಿಲ್ಲಾಧಿಕಾರಿ

Pinterest LinkedIn Tumblr


ಮೈಸೂರು; ಮೊದಲ ಹಂತದಲ್ಲಿ ಕೊರೋನಾವನ್ನು ಸಂಪೂರ್ಣವಾಗಿ ನಿಯಂತ್ರಿಸಿ ಇಡೀ ದೇಶಕ್ಕೆ ಮಾದರಿಯಾಗಿದ್ದ ಮೈಸೂರು ಜಿಲ್ಲೆ ಇದೀಗ ಎರಡನೆ ಹಂತದಲ್ಲಿ ಕೊರೋನಾ ನಿಯಂತ್ರಿಸಲು ಹರಸಾಹಸ ಪಡುವಂತಾಗಿದೆ. ಸ್ವತಃ ಜಿಲ್ಲಾಧಿಕಾರಿಗಳೇ ಕೊರೋನಾ ಈ ಬಾರಿ ಸಮಯುದಾಯಕ್ಕೆ ಹರಡುವ ಸಾಧ್ಯತೆ ಇದೆ ಎಂದು ಹೇಳಿರುವುದು ಮತ್ತಷ್ಟು ಆತಂಕಕ್ಕೆ ಕಾರಣವಾಗಿದೆ. ಆದರೂ, ಮೈಸೂರು ಸಂಸದ ಪ್ರತಾಪ್‌ಸಿಂಹ ಮಾತ್ರ ಮತ್ತೆ ಲಾಕ್‌ಡೌನ್‌ ಅವಶ್ಯಕತೆ ಇಲ್ಲ ಎನ್ನುತ್ತಿದ್ದಾರೆ.

ಮೈಸೂರಿನಲ್ಲಿ ಕೊರೋನಾ ಸಾಮೂದಾಯಿಕವಾಗಿ ಹರಡುವ ಸಾಧ್ಯತೆ ಇದೆ ಎಂದು ಮೈಸೂರು ಜಿಲ್ಲಾಧಿಕಾರಿ ಅಭಿರಾಂ.ಜಿ.ಶಂಕರ್ ಕಳವಳ ವ್ಯಕ್ತಪಡಿಸಿದ್ದಾರೆ. ಸುದ್ದಿಗೋಷ್ಠಿಯಲ್ಲಿ ಮಾತನಾಡಿರುವ ಅವರು, “ಮಾರಣಾಂತಿಕ ಸೋಂಕು ಸಾಮೂದಾಯಿಕವಾಗಿ ಹರಡುವ ಕುರಿತು ಒಬ್ಬೊಬ್ಬರು ಒಂದೊಂದು ರೀತಿಯಲ್ಲಿ ಹೇಳುತ್ತಿದ್ದಾರೆ. ಕೆಲವರು ಸಾಮೂದಾಯಿಕವಾಗಿ ಹಬ್ಬಿಲ್ಲ ಎನ್ನುತ್ತಿದ್ದಾರೆ. ಕೆಲವರು ಆಗಿದೆ ಎಂಬ ವಾದವನ್ನು ಮುಂದಿಡುತ್ತಿದ್ದಾರೆ.

ಹೀಗಾಗಿ ಈ ಕುರಿತು ಯಾವುದೇ ರೀತಿಯ ನಿಖರ ಖಚಿತತೆ ಸಿಗುತ್ತಿಲ್ಲ. ಆ ಒಂದು ಪದವನ್ನ ನಾವು ಬಳಕೆ ಮಾಡಲ್ಲ. ಆದರೆ, ಮೈಸೂರಿನಲ್ಲಿ ಕೊರೋನಾ ಸಮುದಾಯಕ್ಕೆ ಹರಡುವ ಸಾಧ್ಯತೆ ಹೆಚ್ಚಾಗಿದೆ ಸರ್ಕಾರದ‌ ಮುಖ್ಯ ಕಾರ್ಯದರ್ಶಿಗಳ ಜೊತೆ ವಿಡಿಯೋ ಕಾನ್ಫರೆನ್ಸ್ ಇದೆ. ಆ ನಂತರ ಈ ಬಗ್ಗೆ ಇನ್ನಷ್ಟು ಮಾಹಿತಿ ಸಿಗಲಿದೆ” ಎಂದು ಅವರು ಮಾಹಿತಿ ನೀಡಿದ್ದಾರೆ.

ಮೈಸೂರಿನ ಪರಿಸ್ಥಿತಿ ಇಷ್ಟು ಗಂಭೀರವಾಗಿರುವಾಗಿದೆ. ಆದರೆ, ಮೈಸೂರಿನ ಸಂಸದ ಪ್ರತಾಪ್‌ಸಿಂಹ ಮಾತ್ರ ಮತ್ತೆ ಲಾಕ್‌ಡೌನ್ ಬೇಡ ಅಂತಿದ್ದಾರೆ. ಈ ಕುರಿತು ಮೈಸೂರಿನಲ್ಲಿ ಮಾತನಾಡಿದ ಪ್ರತಾಪ್‌ಸಿಂಹ, “ಎಷ್ಟು ದಿನ ಅಂತ ಜನರನ್ನ ಮನೆಯಲ್ಲಿ ಕೂರಿಸುತ್ತೀರಾ? ಜೀವ ಉಳಿಸೋಕೆ ಹೋಗಿ ಜೀವನ ಹಾಳಾಗಬಾರದು ಅಲ್ಲವೇ?” ಎಂದು ಪ್ರಶ್ನಿಸಿದ್ದಾರೆ.

“ಮತ್ತೆ ಲಾಕ್‌ಡೌನ್ ಅವಶ್ಯಕತೆ ಇಲ್ಲ ಅಂತ ನನಗೆ ಅನ್ನಿಸುತ್ತದೆ. ಸುಮ್ಮನೆ ಪ್ಯಾನಿಕ್ ಕ್ರಿಯೇಟ್ ಮಾಡುವ ಅಗತ್ಯವಿಲ್ಲ. ಪರಿಸ್ಥಿತಿ ಸರ್ಕಾರದ ನಿಯಂತ್ರಣದಲ್ಲಿದೆ. ಸರ್ಕಾರ ಅಂದ ಮೇಲೆ ಜೀವ ಜೀವನ ಎರಡನ್ನು ಉಳಿಸಬೇಕು. ತಜ್ಞರು ಭಾರತದಲ್ಲಿ ಲಕ್ಷಗಟ್ಟಲೆ ಜನ ಸಾಯ್ತಾರೆ ಅಂದಿದ್ರು, ಹಾಗೇನಾದ್ರು ಆಯ್ತಾ.? ಈಗಲೂ ಅಷ್ಟೇ ಏನೂ ಆಗೋಲ್ಲ ಕೊರೋನಾ ನಿಯಂತ್ರಣಕ್ಕೆ ಬೇಕಾದ ಎಲ್ಲ ಮುಂಜಾಗ್ರತಾ ಕ್ರಮಗಳನ್ನೂ ಸರ್ಕಾರ ತೆಗೆದುಕೊಂಡಿದೆ.

Comments are closed.