ಕರ್ನಾಟಕ

ಕೊರೋನಾ ಸೋಂಕಿತರಿಗೆ ಖಾಸಗಿ ಆಸ್ಪತ್ರೆಗಳು ಚಿಕಿತ್ಸೆ ನಿರಾಕರಿಸುವಂತಿಲ್ಲ: ಮುಖ್ಯ ಕಾರ್ಯದರ್ಶಿ

Pinterest LinkedIn Tumblr


ಬೆಂಗಳೂರು: ಖಾಸಗಿ ಆಸ್ಪತ್ರೆಗಳು ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವಂತಿಲ್ಲ ಎಂದು ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಎಚ್ಚರಿಕೆ ನೀಡಿದ್ದಾರೆ.

ಕೋವಿಡ್ ಸೋಂಕಿತರಿಗೆ‌ ಚಿಕಿತ್ಸೆ ನಿರಾಕರಿಸುತ್ತಿರುವ ಖಾಸಗಿ ಆಸ್ಪತ್ರೆಗಳಿಗೆ ರಾಜ್ಯದ ಮುಖ್ಯ ಕಾರ್ಯದರ್ಶಿ ವಿಜಯ್​ ಭಾಸ್ಕರ್​ ಖಡಕ್ ವಾರ್ನಿಂಗ್ ನೀಡಿದ್ದು, ಕೊರೋನಾ ಸೋಂಕಿತರಿಗೆ ಚಿಕಿತ್ಸೆ ನಿರಾಕರಿಸುವ ಆಸ್ಪತ್ರೆಗಳ ವಿರುದ್ಧ ಕಠಿಣ ಕ್ರಮ ಜರುಗಿಸಲಾಗುತ್ತದೆ ಎಂದು ಎಚ್ಚರಿಕೆ ನೀಡಿದ್ದಾರೆ.

ಈ ಕುರಿತಂತೆ ಸರ್ಕಾರದ ಆದೇಶ ಹೊರಡಿಸಲಾಗಿದೆ. ರಾಜ್ಯದ ಖಾಸಗಿ ಆಸ್ಪತ್ರೆಗಳಿಗೆ ಆದೇಶ ಹೊರಡಿಸಿರುವ ವಿಜಯ್​ ಭಾಸ್ಕರ್ ಅವರು,​ ‘ಕೋವಿಡ್ ರೀತಿಯ ಲಕ್ಷಣ ಇರುವವರಿಗೂ ಪರೀಕ್ಷೆ ಹಾಗೂ ಚಿಕಿತ್ಸೆ ನಿರಾಕರಿಸುವಂತಿಲ್ಲ. ಜೊತೆಗೆ ಚಿಕಿತ್ಸೆ ಮತ್ತು ಪರೀಕ್ಷೆ ನಿರಾಕರಿಸುವ ಖಾಸಗಿ ಆಸ್ಪತ್ರೆಗಳ ವಿರುದ್ಧ ಕರ್ನಾಟಕ ಖಾಸಗಿ ವೈದ್ಯಕೀಯ ಸಂಸ್ಥೆಗಳ ಕಾಯ್ದೆ ಅನ್ವಯ ಕೇಸ್ ದಾಖಲಿಸಿ ಕ್ರಮ ಜರುಗಿಸಲು ನಿರ್ಧರಿಸಿದ್ದಾರೆ. ಇದಲ್ಲದೆ ವಿಪತ್ತು ನಿರ್ವಹಣಾ ಕಾಯ್ದೆ ಅನ್ವಯವೂ ಕೇಸ್ ದಾಖಲಿಸಲು ಮುಖ್ಯ ಕಾರ್ಯದರ್ಶಿಗಳು ಸೂಚನೆ ನೀಡಿದ್ದಾರೆ.

Comments are closed.