ಕರ್ನಾಟಕ

ಸತತ ದರ ಇಳಿಕೆ ಬೆನ್ನಲ್ಲೇ ಭಾರೀ ಜಿಗಿತ ಕಂಡ ಚಿನ್ನ

Pinterest LinkedIn Tumblr

ಬೆಂಗಳೂರು (ಜೂ. 28): ಕೇಂದ್ರ ಸರ್ಕಾರ ಜಾರಿಗೆ ತಂದಿದ್ದ ಲಾಕ್​ಡೌನ್​ ಅವಧಿಯಲ್ಲಿ ಚಿನ್ನದ ಮಾರಾಟ ಸಂಪೂರ್ಣವಾಗಿ ನಿಂತಿತ್ತು. ಪರಿಣಾಮ 80 ದಿನಗಳ ಕಾಲ ಚಿನ್ನದ ಮಾರಾಟ ಸಂಪೂರ್ಣ ಸ್ತಬ್ಧವಾಗಿತ್ತು. ಈಗ ಚಿನ್ನಕ್ಕೆ ಭಾರೀ ಬೇಡಿಕೆ ಬಂದಿದೆ. ಆದಾಗ್ಯೂ ಚಿನ್ನದ ದರದಲ್ಲಿ ಕುಸಿತ ಕಂಡಿತ್ತು. ಬೆಂಗಳೂರಿನಲ್ಲಿ ಶನಿವಾರ 22 ಕ್ಯಾರೆಟ್​ನ 10 ಗ್ರಾಂ ಚಿನ್ನ 470 ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ ಬೆಲೆ 45,7250 ರೂಪಾಯಿ ಆಗಿದೆ. ಇನ್ನು, 24 ಕ್ಯಾರೆಟ್​ನ 10 ಗ್ರಾಂ ಚಿನ್ನದ ದರ 470 ರೂಪಾಯಿ ಏರಿಕೆ ಕಂಡಿದ್ದು, 49,870 ರೂಪಾಯಿ ಆಗಿದೆ.

ಅನ್​ಲಾಕ್​ ಘೋಷಣೆ ಆದ ನಂತರ ಚಿನ್ನ ಖರೀದಿಗೆ ಜನರು ಮುಗಿಬಿದ್ದಿದ್ದರು. ಹೀಗಾಗಿ, ಚಿನ್ನದ ದರದಲ್ಲಿ ಭಾರೀ ಏರಿಳಿತ ಕಾಣುತ್ತಿದೆ. ಇನ್ನು, ಬೆಳ್ಳಿ ಬೆಲೆಯಲ್ಲೂ ಭಾರೀ ಏರಿಕೆ ಕಂಡಿದೆ. ಕೆಜಿ ಬೆಳ್ಳಿಗೆ 400 ರೂಪಾಯಿ ಏರಿಕೆ ಕಂಡಿದೆ. ಈ ಮೂಲಕ ಬೆಳ್ಳಿ ದರ 48,100 ರೂಪಾಯಿ ಆಗಿದೆ.

ಅನೇಕ ವಿಚಾರಗಳು ಚಿನ್ನದ ಬೆಲೆಯನ್ನು ನಿರ್ಧರಿಸುತ್ತವೆ. ಹಣ ದುಬ್ಬರ, ಅಂತಾರಾಷ್ಟ್ರೀಯ ಮಾರುಕಟ್ಟೆ ಬೆಲೆ, ಬಡ್ಡಿ ದರ, ಜ್ಯುವೆಲರಿ ಮಾರುಕಟ್ಟೆ ಮತ್ತು ವ್ಯಾಪಾರ ಯುದ್ಧಗಳು ಚಿನ್ನದ ಬೆಲೆ ಏರಿಳಿತಕ್ಕೆ ನೇರ ಕಾರಣವಾಗುತ್ತವೆ.

ಈ ವರ್ಷಾಂತ್ಯಕ್ಕೆ ಚಿನ್ನದ ಬೆಲೆ 50-55 ಸಾವಿರ ರೂಪಾಯಿ ಆಗಲಿದೆ ಎಂದು ತಜ್ಞರು ಅಭಿಪ್ರಾಯಪಟ್ಟಿರುವುದಾಗಿ moneycontrol ವೆಬ್ಸೈಟ್ ವರದಿಮಾಡಿದೆ. ಸದ್ಯ, ಲಾಕ್ಡೌನ್ ಪೂರ್ಣಗೊಂಡಿದೆ. ಆದರೆ, ಕೊರೋನಾ ಸೋಂಕು ಹರಡುವಿಕೆ ಹೆಚ್ಚುತ್ತಲೇ ಇದೆ. ಇದರಿಂದ ಆರ್ಥಿಕತೆ ಮೇಲೆ ಭಾರೀ ಹೊಡೆತ ಉಂಟಾಗಲಿದೆ. ಹೀಗಾಗಿ ಚಿನ್ನದ ಬೆಲೆಯಲ್ಲಿ ಭಾರೀ ಏರಿಕೆ ಕಾಣಲಿದೆ ಎನ್ನುವುದು ತಜ್ಞರ ಅಭಿಪ್ರಾಯ.

Comments are closed.