ಕರ್ನಾಟಕ

ರಾಜ್ಯದಲ್ಲಿ ಕೊರೋನಾ ಸೋಂಕಿತರ ಪೈಕಿ ಒಟ್ಟಾರೆ ಶೇ 57ರಷ್ಟು ಮಂದಿ ಆಸ್ಪತ್ರೆಯಿಂದ ಬಿಡುಗಡೆ: ಡಾ. ಕೆ. ಸುಧಾಕರ್

Pinterest LinkedIn Tumblr

ಬೆಂಗಳೂರು: ರಾಜ್ಯದಲ್ಲಿ ಕೊರೋನಾ ಸೋಂಕಿತರ ಗುಣಮುಖ ಪ್ರಮಾಣ ಹೆಚ್ಚಾಗುತ್ತಿದೆ. ಒಟ್ಟಾರೆ ಶೇ 57ರಷ್ಟು ಸೋಂಕಿತರು ಆಸ್ಪತ್ರೆಯಿಂದ ಬಿಡುಗಡೆಯಾಗುತ್ತಿದ್ದಾರೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದ್ದಾರೆ.

ರಾಜ್ಯದಲ್ಲಿ ಈವರೆಗೆ 7,507 ಮಂದಿ ಸೋಂಕಿತರು ಗುಣಮುಖರಾಗಿದ್ದು, 5,472 ಮಂದಿ ವಿವಿಧ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. 5,66,542 ಮಂದಿಯ ಗಂಟಲು ದ್ರವ ಮಾದರಿ ಪರೀಕ್ಷೆ ಮಾಡಲಾಗಿದ್ದು, ಶೇಕಡ 2.21 ರಷ್ಟು ಮಂದಿಗೆ ಮಾತ್ರ ಸೋಂಕು ಕಂಡುಬಂದಿದೆ. ರಾಷ್ಟ್ರಮಟ್ಟದಲ್ಲಿ ಶೇಕಡ 3ರಷ್ಟಿರುವ ಮರಣ ಪ್ರಮಾಣ ರಾಜ್ಯದಲ್ಲಿ ಕೇವಲ ಶೇ 1.56ರಷ್ಟಿದೆ ಎಂದು ಟ್ವೀಟ್ ಮೂಲಕ ತಿಳಿಸಿದ್ದಾರೆ.

ಜೂನ್ 23ರಂದು 1556 ಕೋವಿಡ್ ಪ್ರಕರಣಗಳನ್ನು ಹೊಂದಿದ್ದ ಬೆಂಗಳೂರಿನಲ್ಲಿ ಕಳೆದ 5 ದಿನಗಳಲ್ಲಿ ಪ್ರಕರಣಗಳು ದ್ವಿಗುಣಗೊಂಡು ನೆನ್ನೆಯ ವೇಳೆಗೆ 3419 ಪ್ರಕರಣಗಳನ್ನು ಹೊಂದಿದೆ. ರಾಜ್ಯದ ಒಟ್ಟು ಸೋಂಕಿತರ ಪೈಕಿ 25.92% ಪ್ರಕರಣಗಳು ಬೆಂಗಳೂರಿನಲ್ಲಿವೆ. ನಗರದಲ್ಲಿ ಹೆಚ್ಚುತ್ತಿರುವ ಸೋಂಕಿತರಿಗೆ ಸೂಕ್ತ ಚಿಕಿತ್ಸೆ ನೀಡಲು ರಾಜ್ಯ ಸರ್ಕಾರ ಸಜ್ಜಾಗಿದೆ ಎಂದು ಟ್ಟೀಟ್ ಮಾಡಿದ್ದಾರೆ.

Comments are closed.