ಕರ್ನಾಟಕ

ಕೆಪಿಸಿಸಿ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್ ಪ್ರಮಾಣ ವಚನ ಸ್ವೀಕಾರ

Pinterest LinkedIn Tumblr


ಬೆಂಗಳೂರು(ಜು.02): ಇಂದು ನೂತನ ಕರ್ನಾಟಕ ಪ್ರದೇಶ ಕಾಂಗ್ರೆಸ್​ ಸಮಿತಿಯ ಅಧ್ಯಕ್ಷರಾಗಿ ಡಿ.ಕೆ ಶಿವಕುಮಾರ್​ ಪ್ರಮಾಣ ವಚನ ಸ್ವೀಕರಿಸಿದ್ಧಾರೆ. ಮಾಜಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​​ ಇಂದಿನ ಸಮಾರಂಭದಲ್ಲಿ ವೇದಿಕೆ ಮೇಲೆಯೇ ಡಿ.ಕೆ ಶಿವಕುಮಾರ್​​ ಅವರಿಗೆ ತನ್ನ ಅಧಿಕಾರವನ್ನು ಅಧಿಕೃತವಾಗಿ ಹಸ್ತಾಂತರಿಸಿದರು. ಈ ಮೂಲಕ ಕೆಪಿಸಿಸಿ ಸಾರಥ್ಯವನ್ನು ಮುನ್ನಡೆಸುವಂತೆ ಡಿಕೆಶಿಗೆ ಶುಭಾಶಯ ತಿಳಿಸಿದರು.

ಡಿಕೆಶಿ ಪದಗ್ರಹಣ ಸಮಾರಂಭ ರಾಜ್ಯದ 7,800 ಗ್ರಾಮ ಪಂಚಾಯ್ತಿಗಳಲ್ಲಿ ನೇರಪ್ರಸಾರ ಆಗುತ್ತಿದೆ. ಕಾಂಗ್ರೆಸ್​ ಟ್ರಬಲ್​​ ಶೂಟರ್​​ ಕೆಪಿಸಿಸಿ ಅಧ್ಯಕ್ಷರಾಗಿ ಪ್ರಮಾಣ ವಚನ ಸ್ವೀಕರಿಸಿದ ಕೂಡಲೇ ಕಾಂಗ್ರೆಸ್​​​ ಕಾರ್ಯಕರ್ತರು ರಾಜ್ಯಾದ್ಯಂತ ಪಟಾಕಿ ಸಿಡಿಸಿ ಸಂಭ್ರಮಿಸಿದ್ಧಾರೆ. ಇನ್ನು, ಡಿಜಿಟಲ್​​ ಸಮಾರಂಭವನ್ನು ಡಿಕೆಶಿ ಅಭಿಮಾನಿಗಳು ತಮ್ಮ ಊರುಗಳಿಂದಲೇ ಲೈವ್​​ನಲ್ಲಿ ಕಣ್ತುಂಬಿಕೊಳ್ಳುತ್ತಿದ್ದಾರೆ.

ನಗರದ ಕ್ವೀನ್ಸ್​ ರಸ್ತೆಯಲ್ಲಿರುವ ಕೆಪಿಸಿಸಿ ಕಚೇರಿ ಸಭಾಂಗಣದಲ್ಲಿ ಡಿಕೆಶಿ ಪದಗ್ರಹಣ ಸಮಾರಂಭ ನಡೆಯುತ್ತಿದೆ. ಕಚೇರಿ ಮುಂಭಾಗ ಧ್ವಜಾರೋಹಣ ನೆರವೇರಿಸುವ ಮೂಲಕ ಕಾರ್ಯಕ್ರಮ ಆರಂಭಿಸಲಾಗಿದೆ. ಪಕ್ಷದ ಹಿರಿಯ ನಾಯಕ ಎ.ಆರ್ ರೆಹಮಾನ್ ಖಾನ್ ಸಂವಿಧಾನದ ಪೀಠಿಕೆಯನ್ನು ಬೋಧಿಸಿದರು.

ಲಕ್ಷಾಂತರ ಜನ ಜೂಮ್​​, ಫೇಸ್​ಬುಕ್​, ಟ್ವಿಟ್ಟರ್​ ಲೈವ್​ನಲ್ಲಿ ಕಾರ್ಯಕ್ರಮ ವೀಕ್ಷಿಸುತ್ತಿದ್ಧಾರೆ. ಇನ್ನೇನು ಕಾರ್ಯಾಧ್ಯಕ್ಷರಾದ ಸಲೀಂ ಅಹ್ಮದ್​, ಈಶ್ವರ ಖಂಡ್ರೆ, ಸತೀಶ್​ ಜಾರಕಿಹೊಳಿ ಕೂಡ ಪದಗ್ರಹಣ ಸ್ವೀಕರಿಸಬೇಕಿದೆ.

ಕಕರ್ನಾಟಕ ರಾಜ್ಯ ಕಾಂಗ್ರೆಸ್ ಉಸ್ತುವಾರಿ ಕೆ.ಸಿ. ವೇಣುಗೋಪಾಲ್, ಕೇರಳದ ಪ್ರತಿಪಕ್ಷ ನಾಯಕ ರಮೇಶ್ ಚೆನ್ನಿತಾಲ್, ಕೇರಳ ಪಿಸಿಸಿ ಅಧ್ಯಕ್ಷ ಮುಲ್ಲಪಳ್ಳಿ ರಾಮಚಂದ್ರನ್, ಸೀಮಾಂಧ್ರದ ಸಾಕೆ ಶೈಲಜನಾಥ್, ಉತ್ತಮ್ ಕುಮಾರ್ ರೆಡ್ಡಿ, ಮಾಜಿ ಸಿಎಂ ಸಿದ್ದರಾಮಯ್ಯ, ಮಲ್ಲಿಕಾರ್ಜುನ್​ ಖರ್ಗೆ ಮತ್ತಲವು ಹಿರಿಯ ನಾಯಕರು ಕಾರ್ಯಕ್ರಮದಲ್ಲಿ ಭಾಗಿಯಾಗಿದ್ದಾರೆ.

Comments are closed.