ಕರ್ನಾಟಕ

ಬೆಂಗಳೂರಿನ 210 ಪೊಲೀಸರಿಗೆ ಕೊರೋನಾ ಸೋಂಕು

Pinterest LinkedIn Tumblr


ಬೆಂಗಳೂರು (ಜು. 2): ಬೆಂಗಳೂರಿನಲ್ಲಿ ಈಗಾಗಲೇ ಕೊರೋನಾ ಸೋಂಕು ಮಿತಿಮೀರುತ್ತಿದೆ. ಕೊರೋನಾದ ಹಾಟ್​ಸ್ಪಾಟ್​ ಆಗಿ ಬದಲಾಗುತ್ತಿರುವ ಸಿಲಿಕಾನ್ ಸಿಟಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಪೊಲೀಸರಿಗೂ ಕೊರೋನಾ ಕಂಟಕವಾಗುತ್ತಿದೆ. ಬೆಂಗಳೂರಿನಲ್ಲಿ ಇದುವರೆಗೂ 210 ಪೊಲೀಸರಿಗೆ ಕೊರೋನಾ ಸೋಂಕು ತಗುಲಿದೆ. ಈ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯಲ್ಲಿ ಆತಂಕ ಹೆಚ್ಚಾಗಿದೆ.

ಇಂದು ಬೆಂಗಳೂರಿನಲ್ಲಿ 10 ಪೊಲೀಸರಿಗೆ ಕೊರೋನಾ ಸೋಂಕು ತಗುಲಿರುವುದು ದೃಢಪಟ್ಟಿದೆ. ಇದರಿಂದ ಖಾಕಿ ವಲಯದಲ್ಲಿ ಮತ್ತಷ್ಟು ಆತಂಕ ಹೆಚ್ಚಾಗಿದೆ. ಸುದ್ದಗುಂಟೆಪಾಳ್ಯ ಪೊಲೀಸ್ ಠಾಣೆಯಲ್ಲಿ 7 ಮಂದಿ ಪೊಲೀಸರಿಗೆ ಪಾಸಿಟಿವ್ ಬಂದಿದೆ. ಕುಮಾರಸ್ವಾಮಿ ಲೇಔಟ್ ಟ್ರಾಫಿಕ್ ಠಾಣೆಯಲ್ಲಿ ಓರ್ವ ಪೇದೆಗೆ ಪಾಸಿಟಿವ್ ಬಂದಿದೆ. ಸಿಟಿ ಮಾರ್ಕೆಟ್ ಸ್ಟೇಷನ್ ನಲ್ಲಿ ಒಂದು ಪಾಸಿಟಿವ್, ಅನ್ನಪೂರ್ಣೇಶ್ವರಿ ನಗರ ಠಾಣೆಯಲ್ಲಿ ಓರ್ವ ಪೊಲೀಸ್​ಗೆ ಕೊರೋನಾ ಪಾಸಿಟಿವ್ ಬಂದಿದೆ.

ಬೆಂಗಳೂರಿನ ಒಟ್ಟು 20ಕ್ಕೂ ಹೆಚ್ಚು ಪೊಲೀಸ್ ಠಾಣೆಗಳು ಸೀಲ್ ಡೌನ್ ಆಗಿವೆ. ಬೆಂಗಳೂರಿನಲ್ಲಿ ಈವರೆಗೆ 210 ಪೊಲೀಸರಿಗೆ ಸೋಂಕು ದೃಢಪಟ್ಟಿವೆ. 69 ಪೊಲೀಸರು ಗುಣಮುಖರಾಗಿ ಡಿಸ್ಚಾರ್ಜ್‌ ಆಗಿದ್ದಾರೆ. 136 ಪೊಲೀಸರಿಗೆ ಚಿಕಿತ್ಸೆ ಮುಂದುವರಿಕೆಯಾಗಿದೆ. 5 ಪೊಲೀಸರು ಕೊರೋನಾದಿಂದ ಸಾವನ್ನಪ್ಪಿದ್ದಾರೆ. ಸೋಂಕಿತರ ಸಂಪರ್ಕದಲ್ಲಿದ್ದ 550 ಪೊಲೀಸರು ಕ್ವಾರಂಟೈನ್​ನಲ್ಲಿದ್ದಾರೆ. 217 ಪೊಲೀಸರು ಸಾಂಸ್ಥಿಕ ಕ್ವಾರಂಟೈನ್ ಹಾಗೂ 279 ಪೊಲೀಸರು ಹೋಂ ಕ್ವಾರಂಟೈನ್​ನಲ್ಲಿದ್ದಾರೆ.

Comments are closed.