ಕರ್ನಾಟಕ

ರಾಜ್ಯದಲ್ಲಿ ಮತ್ತೊಮ್ಮೆ ಲಾಕ್‌ಡೌನ್‌ ಕುರಿತು ಜುಲೈ 9ಕ್ಕೆ ಫೈನಲ್‌ ಡಿಸಿಷನ್!

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿನ ಭಯ ಹೆಚ್ಚುತ್ತಲೇ ಇದೆ. ರಾಜಧಾನಿ ಬೆಂಗಳೂರಿನಲ್ಲಂತೂ ಸೋಂಕಿನ ಪ್ರಮಾಣ ಅಪಾಯದ ಹಂತ ಮೀರಿದೆ. ಈ ಬೆನ್ನಲ್ಲೇ ಮತ್ತೆ ಲಾಕ್‌ಡೌನ್‌ ಮಾಡುವಂತೆ ವ್ಯಾಪಕ ಒತ್ತಾಯ ಹೆಚ್ಚುತ್ತಿವೆ.

ಈ ನಡುವೆ ರಾಜ್ಯದಲ್ಲಿ ಕೊರೊನಾ ಸೋಂಕು ನಿಯಂತ್ರಣ ಮಾಡುವ ಕುರಿತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಗುರುವಾರ ಅಧಿಕಾರ ಜತೆ ಗಂಭೀರ ಚರ್ಚೆ ನಡೆಸಿದ್ದಾರೆ.

ಮತ್ತೆ ಲಾಕ್‌ಡೌನ್‌ ಜಾರಿಯಾಗಲಿದೆಯೇ?
ರಾಜ್ಯದಲ್ಲಿ ಆರ್ಥಿಕತೆಯ ದೃಷ್ಟಿಯಿಂದ ಮತ್ತೆ ಲಾಕ್‌ಡೌನ್‌ ಮಾಡುವುವದು ಕಷ್ಟಸಾಧ್ಯ. ಆದರೆ, ಸೋಂಕು ಹೆಚ್ಚಳವಾಗುತ್ತಿರುವ ಪ್ರಮಾಣವನ್ನು ಗಮನಿಸಿದರೆ, ಕಠಿಣ ನಿರ್ಬಂಧಗಳನ್ನು ಕೈಗೊಳ್ಳಲೇಬೇಕಿದೆ. ಸಂಪೂರ್ಣ ಲಾಕ್ಡೌನ್ ಬದಲಿಗೆ ಕೆಲವು ಕಠಿಣ ನಿರ್ಬಂಧಗಳನ್ನು ಹೇರುವ ಮೂಲಕ ಸೋಂಕನ್ನು ನಿಯಂತ್ರಿಸುವ ಕುರಿತು ಚರ್ಚೆಯಾಗುತ್ತಿದೆ. ರಾತ್ರಿ ಕರ್ಫ್ಯೂ ಮತ್ತಷ್ಟು ಬಿಗಿಗೊಳಿಸು ಯೋಚನೆ ಮಾಡಲಾಗುತ್ತಿದೆ.

ಎಸ್ಸೆಸ್ಸೆಲ್ಸಿ ಪರೀಕ್ಷೆ ನಂತರ ಕಠಿಣ ಕ್ರಮ:
ಎಸ್ಸೆಸ್ಸೆಲ್ಸಿ ಪರೀಕ್ಷೆ ನಂತರ ಕೊರೊನಾ ನಿಯಂತ್ರಣದ ನಿಟ್ಟಿನಲ್ಲಿ ನಿರ್ದಿಷ್ಟ ನಿಯಮಗಳನ್ನು ಬಿಡುಗಡೆ ಮಾಡುವ ಸಾಧ್ಯತೆಯಿದೆ. ಟೆಸ್ಟಿಂಗ್‌ ಮತ್ತು ಟ್ರೀಟ್ಮೆಂಟ್‌ ಪ್ರೊಟೋಕಾಲ್‌ ಅನ್ನು ಮತ್ತಷ್ಟು ಕಠಿಣಗೊಳಿಸಲು ಕೂಡ ಚರ್ಚೆ ನಡೆಯುತ್ತಿದೆ.

ರಾಜ್ಯವ್ಯಾಪಿ ಹಬ್ಬುತ್ತಿದೆ ಸೋಂಕು
ರಾಜ್ಯದ ಶಕ್ತಿಕೇಂದ್ರಗಳಾದ ವಿಧಾನಸೌಧ, ವಿಕಾಸಸೌಧಕ್ಕೂ ಕೊರೊನಾ ಸೋಂಕು ಕಾಲಿಟ್ಟಿದೆ. ಪೊಲೀಸ್‌ ಠಾಣೆಗಳು, ಕಂದಾಯ ಅಧಿಕಾರಿಗಳ ಕಚೇರಿಗೂ ಸೋಂಕು ಹಬ್ಬಿದೆ. ಹೀಗಾಗಿ ಸೋಂಕು ಮಮಟ್ಟ ಹೆಚ್ಚುತ್ತಿದ್ದು, ಎಚ್ಚರಿಕೆಯ ಗಂಟೆ ಬಾರಿಸುತ್ತಿದೆ. ಈ ಸಂದರ್ಭದಲ್ಲಿ ಇದನ್ನು ನಿಯಂತ್ರಿಸಲು ಕ್ರಮ ಕೈಗೊಳ್ಳದೆ ಸುಮ್ಮನಾಗಿಬಿಟ್ಟರೆ, ಅಪಾಯ ಕಟ್ಟಿಟ್ಟ ಬುತ್ತಿ ಎನ್ನಬಹುದು.

ಜುಲೈ 9ಕ್ಕೆ ಫೈನಲ್‌ ಡಿಸಿಷನ್:
ರಾಜ್ಯದ ಆರ್ಥಿಕ ಯಂತ್ರವನ್ನು ಚಾಲನೆಯಲ್ಲಿಟ್ಟು, ಕೊರೊನಾ ಸೋಂಕು ನಿಯಂತ್ರಿಸುವುದು ಮುಖ್ಯಮಂತ್ರಿ ಯಡಿಯೂರಪ್ಪ ಅವರಿಗೆ ಸವಾಲಿನ ಕೆಲಸವಾಗಿದೆ. ಹೀಗಾಗಿ ಅಧಿಕಾರಿಗಳೊಂದಿಗೆ, ಸಚಿವರಂದಿಗೆ ಚರ್ಚೆ ನಡೆಸುತ್ತಿದ್ದಾರೆ.
ಜುಲೈ 9ರಂದು ನಡೆಯುವ ಸಚಿವ ಸಂಪುಟ ಸಭೆಯಲ್ಲಿ ಲಾಕ್‌ಡೌನ್‌ ಜಾರಿ ಮಾಡಬೇಕೋ? ಬೇಡವೋ? ಎಂಬ ಕುರಿತಂತೆ ಫೈನಲ್‌ ಡಿಸಿಷನ್ ತೆಗೆದುಕೊಳ್ಳಲಾಗುತ್ತದೆ. ಆರೋಗ್ಯ ಸೌಲಭ್ಯ ಮತ್ತು ಮೂಲ ಸೌಕರ್ಯಗಳನ್ನು ಹೊರತುಪಡಿಸಿ, ಉಳಿದಂತೆ ಆಡಳಿತಾತ್ಮಕ ಕ್ರಮ ಕೈಗೊಳ್ಳುವ ಸಾಧ್ಯತೆ ಇದೆ.

Comments are closed.