ಕರ್ನಾಟಕ

ರಾಜ್ಯದಲ್ಲಿ ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ

Pinterest LinkedIn Tumblr

ಬೆಂಗಳೂರು: ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ.

ಕೋವಿಡ್-19 ಅನ್‍ಲಾಕ್ ಹಂತ 2ಕ್ಕೆ ಸಂಬಂಧಿಸಿದಂತೆ ಕೇಂದ್ರ ಸರಕಾರದ ಗೃಹ ಸಚಿವಾಲಯವು ಮಾರ್ಗಸೂಚಿಗಳನ್ನು ಪ್ರಕಟಿಸಿದೆ. ಈ ಬಗ್ಗೆ ರಾಜ್ಯ ಸರಕಾರದ ಮುಖ್ಯಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಮುಖ್ಯಸ್ಥ ಟಿ.ಎಂ.ವಿಜಯಭಾಸ್ಕರ್ ಆದೇಶ ಹೊರಡಿಸಿದ್ದು, ಕಂಟೈನ್ಮೆಂಟ್ ಝೋನ್‍ಗಳಲ್ಲಿ ಜು.31 ರವರೆಗೆ ಲಾಕ್‍ಡೌನ್ ವಿಸ್ತರಣೆ ಮಾಡಲಾಗಿದೆ.

ನೂತನ ಮಾರ್ಗಸೂಚಿಗಳು ತಕ್ಷಣದಿಂದ ಜಾರಿಗೆ ಬಂದಿದ್ದು, ಜು.31ರವರೆಗೆ ಚಾಲ್ತಿಯಲ್ಲಿ ಇರಲಿವೆ. ಬಿಬಿಎಂಪಿ ಆಯುಕ್ತರು, ಎಲ್ಲ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ವರಿಷ್ಠಾಧಿಕಾರಿಗಳು, ನಗರ ಪೊಲೀಸ್ ಆಯುಕ್ತರು ಹಾಗೂ ಇತರ ಇಲಾಖಾ ಮುಖ್ಯಸ್ಥರು ಇವುಗಳ ಅನುಷ್ಠಾನಕ್ಕೆ ಶ್ರಮಿಸುವಂತೆ ಅವರು ಸೂಚಿಸಿದ್ದಾರೆ.

ಅನ್‍ಲಾಕ್-2 ಕಂಟೈನ್ಮೆಂಟ್ ಝೋನ್‍ಗಳ ಹೊರಗೆ ಎಲ್ಲ ಬಗೆಯ ಚಟುವಟಿಕೆಗಳಿಗೆ ಅವಕಾಶ ಕಲ್ಪಿಸಲಾಗಿದೆ. ಜು.31ರವರೆಗೆ ಶಾಲೆಗಳು, ಕಾಲೇಜುಗಳು, ಶೈಕ್ಷಣಿಕ ಸಂಸ್ಥೆಗಳು, ತರಬೇತಿ ಕೇಂದ್ರಗಳು ಮುಚ್ಚಲ್ಪಟ್ಟಿರುತ್ತವೆ. ಆನ್‍ಲೈನ್ ಹಾಗೂ ದೂರಶಿಕ್ಷಣ ಮುಂದುವರೆಯಲಿದೆ. ರಾಜ್ಯ ಹಾಗೂ ಕೇಂದ್ರ ಸರಕಾರದ ತರಬೇತಿ ಸಂಸ್ಥೆಗಳು ಡಿಓಪಿಟಿ ಹಾಗೂ ಡಿಪಿಎಆರ್ ಸೂಚನೆಗಳನ್ವಯ ಜು.15ರಿಂದ ಕಾರ್ಯಾರಂಭ ಮಾಡಬಹುದಾಗಿದೆ.

Comments are closed.