ಕರ್ನಾಟಕ

ರಾಜ್ಯದಲ್ಲಿ ಇಂದು (ಶನಿವಾರ) 1,839 ಕೊರೋನಾ ಪ್ರಕರಣಗಳು ದಾಖಲು: 42 ಸಾವು

Pinterest LinkedIn Tumblr


ಬೆಂಗಳೂರು(ಜುಲೈ 04): ಇಂದು ರಾಜ್ಯದಲ್ಲಿ ಕೊರೋನಾ ಆರ್ಭಟ ತಾರಕಕ್ಕೇರಿದೆ. ಕಳೆದ 24 ಗಂಟೆ ಅವಧಿಯಲ್ಲಿ 42 ಮಂದಿ ಸಾವನ್ನಪ್ಪಿದ್ದಾರೆ. 1,839 ಪ್ರಕರಣಗಳು ದಾಖಲಾಗಿವೆ. ರಾಜ್ಯಾದ್ಯಂತ ದಾಖಲಾದ ಒಟ್ಟು ಪ್ರಕರಣಗಳ ಸಂಖ್ಯೆ 21,549 ತಲುಪಿದೆ. ಸಾವಿನ ಸಂಖ್ಯೆ 335 ಮುಟ್ಟಿದೆ.

ಬೆಂಗಳೂರು ಕೊರೋನಾ ಹಾಟ್​​ಸ್ಪಾಟ್ ಆಗಿ ಮುಂದುವರಿದಿದೆ. ನಗರದಲ್ಲಿ ಹೊಸ ದಾಖಲೆಯ ಪ್ರಮಾಣದಲ್ಲಿ ಪ್ರಕರಣಗಳು ಬೆಳಕಿಗೆ ಬಂದಿವೆ. ಒಂದೇ ದಿನ 1,172 ಪ್ರಕರಣಗಳು ದಾಖಲಾಗಿವೆ. ನಗರದಲ್ಲಿನ ಒಟ್ಟು ಪ್ರಕರಣಗಳು ಬರೋಬ್ಬರಿ 8345 ಮುಟ್ಟಿದೆ.

ದಕ್ಷಿಣ ಕನ್ನಡ, ಬಳ್ಳಾರಿ, ಬೀದರ್, ಧಾರವಾಡ ಮೊದಲಾದ ಜಿಲ್ಲೆಗಳಲ್ಲೂ ಹೆಚ್ಚು ಪ್ರಕರಣಗಳು ದಾಖಲಾಗಿವೆ. ಆದರೆ, ಬೆಂಗಳೂರಿನಲ್ಲಿ ಕೊರೋನಾ ಅಕ್ಷರಶಃ ರುದ್ರತಾಂಡವವಾಡುತ್ತಿದೆ. ಗಲ್ಲಿಗಲ್ಲಿಗಳಲ್ಲೂ ಈಗ ಕೊರೋನಾ ಹೊಕ್ಕಿದೆ.

ರಾಜ್ಯಾದ್ಯಂತ ಇವತ್ತು 439 ರೋಗಿಗಳು ಗುಣಮುಖಗೊಂಡಿದ್ದಾರೆ. ಈವರೆಗೆ 9244 ಮಂದಿ ಆಸ್ಪತ್ರೆಯಿಂದ ಡಿಸ್​ಚಾರ್ಜ್ ಆದಂತಾಗಿದೆ. ಇದರೊಂದಿಗೆ ರಾಜ್ಯದಲ್ಲಿ ಆಕ್ಟಿವ್ ಕೊರೊನಾ ಕೇಸ್​ಗಳ ಸಂಖ್ಯೆ 11,966 ಇದೆ.

Comments are closed.