ಕರ್ನಾಟಕ

ಬೆಂಗಳೂರಿನಲ್ಲಿ ಒಟ್ಟು 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ

Pinterest LinkedIn Tumblr

ಬೆಂಗಳೂರು: ರಾಜಧಾನಿ ಬೆಂಗಳೂರಿನಲ್ಲಿ ಕೋವಿಡ್ ಸೋಂಕಿತರಿಗೆ ಬೆಡ್ ಗಳ ಕೊರತೆ ಎದುರಾಗಿರುವಂತೆಯೇ ಈ ವಿಚಾರವಾಗಿ ಸ್ಪಷ್ಟನೆ ನೀಡಿರುವ ಸಚಿವ ಸುಧಾಕರ್ ಅವರು, 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳಿವೆ ಎಂದು ಹೇಳಿದ್ದಾರೆ.

ಈ ಬಗ್ಗೆ ಟ್ವೀಟ್ ಮಾಡಿರುವ ಸುಧಾಕರ್ ಅವರು, ‘ಬೆಂಗಳೂರು ನಗರದಾದ್ಯಂತ ಇರುವ ಒಟ್ಟು 72 ಖಾಸಗಿ ಆಸ್ಪತ್ರೆಗಳಲ್ಲಿ 3331 ಹಾಸಿಗೆಗಳನ್ನು ಕೋವಿಡ್ ಸೋಂಕಿತರ ಚಿಕಿತ್ಸೆಗೆ ಮೀಸಲಿಡಲಾಗಿದೆ. ಶನಿವಾರ ಸಂಜೆಯ ವೇಳೆಗೆ ಇವುಗಳಲ್ಲಿ 733 ಹಾಸಿಗೆಗಳು ಭರ್ತಿಯಾಗಿದ್ದು 2598 ಹಾಸಿಗೆಗಳು ಅಂದರೆ ಸುಮಾರು ಶೇ.78% ಹಾಸಿಗೆಗಳು ಖಾಲಿಯಿವೆ ಎಂದು ಹೇಳಿದ್ದಾರೆ.

ಇನ್ನು ಸಿಲಿಕಾನ್ ಸಿಟಿ ಬೆಂಗಳೂರಿನಲ್ಲಿ ಕೋವಿಡ್ ರೋಗಿಗಳಿಗೆ ಬೆಡ್ ಗಳ ತೀವ್ರ ಕೊರತೆ ಎದುರಾಗಿದ್ದು, ರೋಗಿಗಳು ಚಿಕಿತ್ಸೆ ಸಿಗದೆ ಪರದಾಡುವ ಪರಿಸ್ಥಿತಿ ಎದುರಾಗಿದೆ. ಸರಿಯಾದ ಸಮಯಕ್ಕೆ ಚಿಕಿತ್ಸೆ ಸಿಗದೇ ಕೋವಿಡ್-19 ರೋಗಿಗಳು ಮಾತ್ರರಲ್ಲದೇ ಇತರೆ ರೋಗಿಗಳೂ ಕೂಡ ಸಾವನ್ನಪ್ಪುತ್ತಿದ್ದಾರೆ. ಹೀಗಾಗಿ ರಾಜ್ಯ ಸರ್ಕಾರ ಸೋಂಕಿತರಿಗಾಗಿ ಬೆಡ್ ಗಳ ಒದಗಿಸಲು ಸರ್ಕಾರ ಖಾಸಗಿ ಆಸ್ಪತ್ರೆಗಳ ಮೊರೆ ಹೋಗಿದೆ. ಅಲ್ಲದೆ ಕಂಠೀರವ ಒಳಾಂಗಣ ಕ್ರೀಡಾಂಗಣದಲ್ಲೂ ನೂರಾರು ಬೆಡ್ ಗಳ ವಿಶೇಷ ಕೋವಿಡ್ ಸೆಂಟರ್ ವ್ಯವಸ್ಥೆ ಮಾಡಲಾಗುತ್ತಿದೆ.

Comments are closed.