ಕರ್ನಾಟಕ

ಕೊರೊನಾ ಸೋಂಕಿತನಿಂದ ಶಿರಸಿ ಮಾರಿಕಾಂಬಾ ದೇವಸ್ಥಾನ ದರ್ಶನ..!: ದೇವಾಲಯ ಸೀಲ್‌ಡೌನ್‌

Pinterest LinkedIn Tumblr


ಉತ್ತರ ಕನ್ನಡ: ರಾಜ್ಯದ ಪ್ರಸಿದ್ಧ ಶಿರಸಿ ಮಾರಿಕಾಂಬಾ ದೇವಸ್ಥಾನಕ್ಕೆ ಕೊರೊನಾ ಭೀತಿ ಎದುರಾಗಿದೆ. ಕೊರೊನಾ ಸೋಂಕಿತರೊಬ್ಬರು ದೇವಿಯ ದರ್ಶನ ಪಡೆದಿರುವ ಹಿನ್ನೆಲೆ ದೇವಸ್ಥಾನವನ್ನು ಮೂರು ದಿನಗಳ ಕಾಲ ಸೀಲ್‌ಡೌನ್‌ ಮಾಡಲು ನಿರ್ಧರಿಸಲಾಗಿದೆ.

ಸೀಲ್‌ಡೌನ್‌ ಮಾಡಿರುವುದರಿಂದ ಮೂರು ದಿನ ಸಾರ್ವಜನಿಕರಿಗೆ ಮಾರಿಕಾಂಬೆಯ ದರ್ಶನವಿಲ್ಲ ಎಂದು ದೇವಸ್ಥಾನ ಮಂಡಳಿ ತಿಳಿಸಿದೆ. ದೇಗುಲದ ಪಕ್ಕದಲ್ಲಿಯೇ ಇರುವ ಮನೆಯಲ್ಲಿನ ವ್ಯಕ್ತಿಯೊಬ್ಬರಿಗೆ ಕೊರೊನಾ ಸೋಂಕು ಇರುವುದು ದೃಢವಾಗಿದೆ.

ಆತ ದಿನನಿತ್ಯ ಬಂದು ದೇವಿಯ ದರ್ಶನ ಪಡೆದಿರುವ ಬಗ್ಗೆ ಮಾಹಿತಿ ದೊರೆತಿದೆ. ಆದ್ದರಿಂದ ಮುನ್ನೆಚ್ಚರಿಕಾ ಕ್ರಮವಾಗಿ ದೇವಸ್ಥಾನವನ್ನು ಸೀಲ್‌ಡೌನ್‌ ಮಾಡಿ, ಸಾರ್ವಜನಿಕರ ದರ್ಶನಕ್ಕೆ ನಿರ್ಬಂಧ ವಿಧಿಸಲಾಗಿದೆ.

ಕಡ್ಡಾಯ ವೈದ್ಯಕೀಯ ತಪಾಸಣೆಗೆ ಡಿಸಿ ಸೂಚನೆ
ಹೊರ ಜಿಲ್ಲೆಗಳಿಂದ ವಾಸ್ತವ್ಯದ ಉದ್ದೇಶಕ್ಕಾಗಿ ಉತ್ತರ ಕನ್ನಡ ಜಿಲ್ಲೆಗೆ ಆಗಮಿಸುವ ಜನರು ಕಡ್ಡಾಯವಾಗಿ ಜ್ವರ ತಪಾಸಣೆ ಕೇಂದ್ರಕ್ಕೆ ತೆರಳಿ ವೈದ್ಯಕೀಯ ತಪಾಸಣೆಗೆ ಒಳಗಾಗುವಂತೆ ಜಿಲ್ಲಾಧಿಕಾರಿಗಳು ಆದೇಶಿಸಿದ್ದಾರೆ. ಹೊರ ರಾಜ್ಯ ಮತ್ತು ಬೆಂಗಳೂರು ಸೇರಿ ಇತರೆ ಜಿಲ್ಲೆಗಳಿಂದ ಜಿಲ್ಲೆಗೆ ಬರುವ ಜನರ ಸಂಖ್ಯೆ ಹೆಚ್ಚಾಗ್ತಿದೆ. ಆದ್ದರಿಂದ ಕೊರೊನಾ ಮತ್ತಷ್ಟು ಹೆಚ್ಚಬಹುದು ಎಂಬ ಆತಂಕದಲ್ಲಿ ಜನರಿದ್ದಾರೆ.

ನಿಯಮ ಉಲ್ಲಂಘಿಸಿದರೆ ಕಠಿಣ ಕ್ರಮದ ಎಚ್ಚರ
ಆದ್ದರಿಂದ ಇತರೆ ಜಿಲ್ಲೆಗಳಿಂದ ಬರುವ ಪ್ರತಿಯೊಬ್ಬ ವ್ಯಕ್ತಿಯು ಗ್ರಾಮೀಣ ಭಾಗದಲ್ಲಿ ಪಿಡಿಒ, ಆಶಾ ಕಾರ್ಯಕರ್ತೆಯರು, ಗ್ರಾಮ ಲೆಕ್ಕಾಧಿಕಾರಿಗಳಿಗೆ ಮತ್ತು ನಗರ ವ್ಯಾಪ್ತಿಯಲ್ಲಿ ನಗರ ಆರೋಗ್ಯ ಕೇಂದ್ರ ಅಥವಾ ಆಶಾ ಕಾರ್ಯಕರ್ತೆಯರ ಬಳಿ ತಿಳಿಸಿ ಕಡ್ಡಾಯವಾಗಿ ಜ್ವರ ತಪಾಸಣೆಗೆ ಒಳಗಾಗಬೇಕಾಗಿದೆ. ನಿಯಮ ಉಲ್ಲಂಘಿಸಿದಲ್ಲಿ ಶಿಸ್ತು ಕ್ರಮಕ್ಕೆ ಒಳಪಡಿಸಲಾಗುವುದು ಎಂದು ಜಿಲ್ಲಾಡಳಿತ ಎಚ್ಚರ ನೀಡಿದೆ.

Comments are closed.