ಕರ್ನಾಟಕ

ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷನಿಗೆ ಕೊರೊನಾ; ಸಿ.ಟಿ. ರವಿಗೆ ಆತಂಕ..!

Pinterest LinkedIn Tumblr


ಚಿಕ್ಕಮಗಳೂರು: ಕೊರೊನಾ ವೈರಸ್ ದಿನದಿಂದ ದಿನಕ್ಕೆ ಉಲ್ಬಣವಾಗುತ್ತಿದ್ದು, ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೂ ಕೊರೊನಾ ಪಾಸಿಟಿವ್ ಕಾಣಿಸಿಕೊಂಡಿದೆ.

ಜಿಲ್ಲೆಯ ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಕೊರನಾ ಪಾಸಿಟಿವ್ ಕಾಣಿಸಿಕೊಂಡಿತ್ತು. ಅವರ ಸಂಪರ್ಕದಲ್ಲಿದ್ದ ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೂ ಈಗ ಕೊರೊನಾ ಸೋಂಕು ತಗುಲಿದೆ.

ಇನ್ನು ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷರಿಗೆ ಕೊರೊನಾ ಪಾಸಿಟಿವ್ ಕಾಣಿಸಿಕೊಂಡ ಹಿನ್ನೆಲೆ ಚಿಕ್ಕಮಗಳೂರು ನಗರಾಭಿವೃದ್ಧಿ ಪ್ರಾಧಿಕಾರದ ಕಚೇರಿಯನ್ನು ಸೀಲ್‌ಡೌನ್‌ ಮಾಡಲಾಗಿದೆ.ಕಲ್ಯಾಣನಗರದಲ್ಲಿರೋ ಪ್ರಾಧಿಕಾರದ ಕಚೇರಿಗೆ ದಿನನಿತ್ಯ ಹತ್ತಾರು ಜನ ಬರುತ್ತಿದ್ದರು. ಹೀಗಾಗಿ ಪ್ರಾಧಿಕಾರದ ಕಚೇರಿ ಸುತ್ತಮುತ್ತ ಅಧಿಕಾರಿಗಳು ಕೊರೊನಾ ಹರಡದಂತೆ ಮುಂಜಾಗ್ರತಾ ಕ್ರಮಗಳನ್ನು ಕೈಗೊಂಡು ಜನರು ಆ ಭಾಗದಲ್ಲಿ ಓಡಾಡದಂತೆ ನೋಡಿಕೊಳ್ಳುತ್ತಿದ್ದಾರೆ.

ಕೊರೊನಾ ಪಾಸಿಟಿವ್ ಪ್ರಕರಣಗಳ ಸಂಖ್ಯೆ ಪ್ರತಿದಿನ ಹೆಚ್ಚಳವಾಗುತ್ತಿದ್ದು, ಜನರಲ್ಲಿ ಮತ್ತು ಸರ್ಕಾರದಲ್ಲಿ ಆತಂಕವನ್ನು ಸೃಷ್ಟಿಸಿದೆ. ಸರ್ಕಾರ ಅದೆಷ್ಟೇ ಪ್ರಯತ್ನ ಪಟ್ಟರೂ ಕೊರೊನಾ ನಿಯಂತ್ರಣ ಸಾಧ್ಯವಾಗುತ್ತಿಲ್ಲ. ಈಗಂತೂ ರಾಜಕಾರಣಿಗಳಲ್ಲೂ ಕೂಡ ಕೊರೊನಾ ಕಾಣಿಸಿಕೊಳ್ಳುತ್ತಿರುವುದು ಸರ್ಕಾರಕ್ಕೆ ನಿದ್ದೆಗೆಡಿಸುವಂತೆ ಮಾಡಿದೆ.

Comments are closed.