ಕರ್ನಾಟಕ

ಕೊರೋನಾ ಸೋಂಕಿತರ ಸಂಖ್ಯೆ ರಾಜ್ಯದಲ್ಲಿ ಮುಂದಿನ 15 ರಿಂದ 30 ದಿನದಲ್ಲಿ ಡಬಲ್: ಶ್ರೀರಾಮುಲು

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಮುಂದಿನ 15 ರಿಂದ 30 ದಿನದಲ್ಲಿ ಸೋಂಕಿತರ ಸಂಖ್ಯೆ ಡಬಲ್ ಆಗಲಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಬಿ ಶ್ರೀರಾಮುಲು ಅವರು ಹೇಳಿದ್ದಾರೆ.

ಈ ಸಂಬಂಧ ಟ್ವೀಟ್ ಮಾಡಿರುವ ಆರೋಗ್ಯ ಸಚಿವರು, ಮಂಗಳವಾರ ರಾತ್ರಿ 8 ಗಂಟೆಯಿಂದ 7 ದಿನಗಳ ಕಾಲ ಬೆಂಗಳೂರಿನಲ್ಲಿ ಲಾಕ್ಡೌನ್ ಘೋಷಣೆ ಮಾಡಲಾಗಿದೆ.

ಎಲ್ಲರೂ ನಿಯಮಗಳನ್ನು ಪಾಲಿಸಿ. ರಾಜ್ಯದಲ್ಲಿ ಈಗ ದಿನವೊದಕ್ಕೆ 2000ಕ್ಕೂ ಅಧಿಕ ಪ್ರಕರಣಗಳು ಪತ್ತೆಯಾಗುತ್ತಿವೆ. ಮುಂದಿನ 15 ರಿಂದ 30 ದಿನಗಳಲ್ಲಿ ಇದು ದ್ವಿಗುಣವಾಗಬಹುದು. ಮುಂದಿನ 2 ತಿಂಗಳು ನಮಗೆ ಅತಿ ದೊಡ್ಡ ಸವಾಲಾಗಲಿದೆ ಎಂದು ಶ್ರೀರಾಮುಲು ಹೇಳಿದ್ದಾರೆ.

ಆದರೂ ಇದರಿಂದ ಯಾರೂ ವಿಚಲಿತರಾಗುವ ಅಗತ್ಯವಿಲ್ಲ. ಭಯ ಪಡುವ ಅಗತ್ಯ ಇಲ್ಲ. ಸರ್ಕಾರ ಸೋಂಕು ತಡೆಯುವ ನಿಟ್ಟಿನಲ್ಲಿ ಎಲ್ಲಾ ಕ್ರಮಗಳನ್ನು ಕೈಗೊಳ್ಳುತ್ತಿದೆ ಎಂದು ಮತ್ತೊಂದು ಟ್ವೀಟ್ ನಲ್ಲಿ ಭರವಸೆ ನೀಡಿದ್ದಾರೆ.

Comments are closed.