ಬೆಂಗಳೂರು: ಮಾರಕ ಕೊರೋನಾ ವೈರಸ್ ಗೆ ಕರ್ನಾಟಕದಲ್ಲಿ ಇಂದು ಮತ್ತೆ 87 ಮಂದಿ ಸಾವನ್ನಪ್ಪಿದ್ದು, ಕಳೆದ 24 ಗಂಟೆಗಳ ಅವಧಿಯಲ್ಲಿ 2496 ಹೊಸ ಪ್ರಕರಣಗಳು ಪತ್ತೆಯಾಗಿವೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಕರ್ನಾಟಕ ಆರೋಗ್ಯ ಇಲಾಖೆ ಮಾಹಿತಿ ನೀಡಿದ್ದು, ಕರ್ನಾಟಕದಲ್ಲಿ ಇಂದು 2496 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದ್ದು, ಆ ಮೂಲಕ ರಾಜ್ಯಾದ್ಯಂತ ಒಟ್ಟಾರೆ ಸೋಂಕಿತರ ಸಂಖ್ಯೆ 44,077ಕ್ಕೆ ಏರಿಕೆಯಾಗಿದೆ.
ಇನ್ನು ಇಂದೂ ಕೂಡ ರಾಜ್ಯಾದ್ಯಂತ 87 ಮಂದಿ ಸೋಂಕಿತರು ಬಲಿಯಾಗಿದ್ದು, ಆ ಮೂಲಕ ರಾಜ್ಯದಲ್ಲಿ ಒಟ್ಟಾರೆ ಕೊರೋನಾ ವೈರಸ್ ಗೆ ಬಲಿಯಾದವರ ಸಂಖ್ಯೆ 844ಕ್ಕೆ ಏರಿಕೆಯಾಗಿದೆ. ಆತಂಕಕಾರಿ ವಿಚಾರವೆಂದರೆ ರಾಜಧಾನಿ ಬೆಂಗಳೂರು ನಗರವೊಂದರಲ್ಲಿಯೇ 56 ಮಂದಿ ಸೋಂಕಿತರು ಸಾವನ್ನಪ್ಪಿದ್ದಾರೆ.
ಅಷ್ಟು ಮಾತ್ರವಲ್ಲದೆ ಬೆಂಗಳೂರಿನಲ್ಲಿ ಇಂದೂ ಕೂಡ ಮತ್ತೆ ಹೊಸ ಸೋಂಕಿತರ ಸಂಖ್ಯೆ ಸಾವಿರ ಗಡಿ ದಾಟಿದ್ದು, ಇಂದು 1267 ಹೊಸ ಸೋಂಕು ಪ್ರಕರಣಗಳು ಪತ್ತೆಯಾಗಿದೆ. ಅಂತೆಯೇ ಇಂದು ರಾಜ್ಯಾದ್ಯಂತ 844 ಮಂದಿ ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.
Comments are closed.