ಕರ್ನಾಟಕ

ದಾವಣಗೆರೆ: ಪಿಯುಸಿ ಫೇಲಾದ ವಿದ್ಯಾರ್ಥಿ ಆತ್ಮಹತ್ಯೆ

Pinterest LinkedIn Tumblr


ದಾವಣಗೆರೆ(ಜು.14): ಇಂದು ದ್ವಿತೀಯ ಪಿಯುಸಿ ಪರೀಕ್ಷೆಯ ಫಲಿತಾಂಶ ಹೊರಬಿದ್ದಿದೆ. ಒಂದೆಡೆ ಪರೀಕ್ಷೆಯಲ್ಲಿ ಪಾಸಾದ ವಿದ್ಯಾರ್ಥಿಗಳು ಸಂಭ್ರಮಿಸುತ್ತಿದ್ದರೆ, ಇನ್ನೊಂದೆಡೆ ಫೇಲಾದ ವಿದ್ಯಾರ್ಥಿಗಳು ಆತ್ಮಸ್ಥೈರ್ಯ ಕಳೆದುಕೊಂಡಿದ್ದಾರೆ. ದಾವಣಗೆರೆಯಲ್ಲಿ ಫೇಲಾದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆಯ ದಾರಿ ಹಿಡಿದಿದ್ದಾನೆ.

ಹೌದು, ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಫೇಲಾದೆ ಮನನೊಂದ ವಿದ್ಯಾರ್ಥಿ ಆತ್ಮಹತ್ಯೆಗೆ ಶರಣಾಗಿದ್ದಾನೆ. ಜಯರಾಮ್(18) ಸಾವನ್ನಪ್ಪಿದ ವಿದ್ಯಾರ್ಥಿ. ರಿಸಲ್ಟ್​ ಬಂದ ಕೂಡಲೇ ತಾನು ಫೇಲಾಗಿರುವ ವಿಷಯ ತಿಳಿದು ಮನೆಯಲ್ಲೇ ನೇಣಿಗೆ ಶರಣಾಗಿದ್ದಾನೆ. ಮನೆಯಲ್ಲಿ ಯಾರೂ ಇಲ್ಲದ ವೇಳೆ ಈ ಘಟನೆ ನಡೆದಿದೆ ಎಂದು ತಿಳಿದು ಬಂದಿದೆ.

ದಾವಣಗೆರೆ ಜಿಲ್ಲೆಯ ಹರಿಹರದ ಪಕ್ಕೀರಸ್ವಾಮಿ ಬಳಿ ಈ ಘಟನೆ ನಡೆದಿದೆ. ಪರೀಕ್ಷೆಯಲ್ಲಿ ಫೇಲಾದ ಕಾರಣಕ್ಕೆ ಮನನೊಂದು, ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಪೊಲೀಸರು ಶಂಕಿಸಿದ್ದಾರೆ.

ಮೃತ ವಿದ್ಯಾರ್ಥಿ ಜಯರಾಮು ಎಂಕೆಇಟಿ ಪಿಯು ಕಾಲೇಜಿನ ವಿಜ್ಞಾನ ವಿಭಾಗದ‌ ವಿದ್ಯಾರ್ಥಿ ಎಂದು ತಿಳಿದು ಬಂದಿದೆ. ಕೊಟ್ರೇ ಶ್-ಗೀತಾ ದಂಪತಿಯ ಮಗನಾಗಿದ್ದ. ತಂದೆ ಕೊಟ್ರೇಶ್ ಜೀವನ ನಡೆಸಲಿ ಆಟೋ ಓಡಿಸುತ್ತಿದ್ದರು ಎನ್ನಲಾಗಿದೆ.

ಜಯರಾಮ್​ ಎಲ್ಲಾ ವಿಷಯಗಳಲ್ಲೂ ಪಾಸಾಗಿದ್ದು, ಭೌತಶಾಸ್ತ್ರ ವಿಷಯದಲ್ಲಿ ಮಾತ್ರ ಅನುತ್ತೀರ್ಣಗೊಂಡಿದ್ದಾನೆ. ಆತ ಒಟ್ಟು 388 ಅಂಕಗಳನ್ನು ಗಳಿಸಿದ್ದಾನೆ. ಕನ್ನಡದಲ್ಲಿ 70, ಇಂಗ್ಲಿಷ್​ನಲ್ಲಿ 75, ಭೌತಶಾಸ್ತ್ರದಲ್ಲಿ 37, ರಸಾಯನಶಾಸ್ತ್ರದಲ್ಲಿ 59, ಗಣಿತದಲ್ಲಿ 68, ಕಂಪ್ಯೂಟರ್ ಸೈನ್ಸ್​​ನಲ್ಲಿ 79 ಅಂಕಗಳನ್ನು ಪಡೆದಿದ್ದಾನೆ.

ವಿಷಯ ತಿಳಿದ ಕೂಡಲೇ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ಹರಿಹರ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಪರೀಕ್ಷೆಯಲ್ಲಿ ಉತ್ತೀರ್ಣರಾದ ವಿದ್ಯಾರ್ಥಿಗಳ ಯಶಸ್ಸನ್ನು ಸಂಭ್ರಮಿಸುವ ಜೊತೆಗೆ, ಅನುತ್ತೀರ್ಣರಾದ ವಿದ್ಯಾರ್ಥಿಗಳಿಗೆ ಆತ್ಮಸ್ಥೈರ್ಯ ತುಂಬಿ ಬೆಂಬಲ ಕೊಡುವುದು ಸಹ ಅಷ್ಟೇ ಮುಖ್ಯವಾಗಿದೆ. ಇಲ್ಲವಾದಲ್ಲಿ ಫೇಲಾದ ವಿದ್ಯಾರ್ಥಿಗಳು ಕುಗ್ಗಿ ಇಂತಹ ಆತ್ಮಹತ್ಯೆಯ ದಾರಿ ಹಿಡಿಯುವುದರಲ್ಲಿ ಅನುಮಾನವೇ ಇಲ್ಲ.

Comments are closed.