ಕರ್ನಾಟಕ

ಪಿಯುಸಿ ವಿದ್ಯಾರ್ಥಿಗಳ ಪೂರಕ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಜುಲೈ 31 ಕೊನೆಯ ದಿನ

Pinterest LinkedIn Tumblr


ಬೆಂಗಳೂರು(ಜುಲೈ. 14): ಮರು ಮೌಲ್ಯಮಾಪನ ಬಯಸುವ ಅಭ್ಯರ್ಥಿಗಳಿಗೆ ಪರೀಕ್ಷಾ ಶುಲ್ಕ ಪಾವತಿಸಲು ಹಾಗೂ ಆನ್‌ಲೈನ್​​ಲ್ಲಿ ಅಪ್‌ಡೇಟ್‌ ಮಾಡಲು ಜುಲೈ 31 ಕಡೆಯ ದಿನಾಂಕವಾಗಿದ್ದು, ಅಭ್ಯರ್ಥಿಗಳಿಗೆ ಪ್ರತಿ ವಿಷಯಕ್ಕೆ 1,670 ರೂಪಾಯಿ ನಿಗದಿಪಡಿಸಲಾಗಿದೆ.

ಅಂಕಗಳ ಮರುಎಣಿಕೆಗೆ ಪ್ರತ್ಯೇಕ ಶುಲ್ಕವಿಲ್ಲ. ಅನುತ್ತೀರ್ಣಗೊಂಡ ಅಭ್ಯರ್ಥಿಗಳು ಮುಂದಿನ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಮರುಮೌಲ್ಯಮಾಪನ ಫಲಿತಾಂಶಕ್ಕಾಗಿ ಕಾಯಬಾರದು ಎಂದು ಪಿಯು ಇಲಾಖೆ ತಿಳಿಸಿದೆ.

ಮರುಮೌಲ್ಯಮಾಪನದಲ್ಲಿ ನಿಗದಿಪಡಿಸಿರುವ ಅಂಕಗಳಿಗಿಂತ ಹೆಚ್ಚಿನ ಅಂಕಗಳು ಅಥವಾ ಕಡಿಮೆ ಅಂಕಗಳು ಬಂದಲ್ಲಿ ಅಂಕಗಳೊಂದಿಗೆ ಪರಿಷ್ಕರಿಸಿ ಪ್ರಕಟಿಸಲಿದೆ. ವಿದ್ಯಾರ್ಥಿಗಳಿಗೆ ಈ ಮೊದಲು ಪಡೆದ ಅಂಕಗಳನ್ನು ಮರು ಸ್ಥಾಪಿಸಲು ಅವಕಾಶವಿಲ್ಲ.

ಪೂರಕ ಪರೀಕ್ಷೆಗೆ ಅನುತ್ತೀರ್ಣ ವಿದ್ಯಾರ್ಥಿಗಳು ಪಾವತಿಸಬೇಕಾದ ಶುಲ್ಕಗಳ ವಿವರ

ಒಂದು ವಿಷಯಕ್ಕೆ ರೂ. 140
ಎರಡು ವಿಷಯಕ್ಕೆ ರೂ. 270
ಮೂರು ಅಥವಾ ಹೆಚ್ಚಿನ ವಿಷಯಗಳಿಗೆ ರೂ. 400
ಎಸ್‌ಸಿ/ಎಸ್‌ಟಿ ವರ್ಗ ಹಾಗೂ ಪ್ರವರ್ಗ-1ರ ವಿದ್ಯಾರ್ಥಿಗಳನ್ನು ಹೊರತು ಪಡಿಸಿದ ಶುಲ್ಕವಾಗಿದೆ.
ಎಲ್ಲಾ ವಿದ್ಯಾರ್ಥಿ/ವಿದ್ಯಾರ್ಥಿನಿಯರಿಂದ ಕಡ್ಡಾಯವಾಗಿ ಸಲ್ಲಿಸಬೇಕಾದ ಅಂಕಪಟ್ಟಿ ಶುಲ್ಕ ರೂ. 50

Comments are closed.