ಕರ್ನಾಟಕ

ಜೆಡಿಎಸ್ ರಾಜ್ಯಾಧ್ಯಕ್ಷರ ಪತ್ನಿ ಚಂಚಲಾ ಕುಮಾರಸ್ವಾಮಿ ಮತ್ತು ಪುತ್ರಿಗೂ ಕೊರೋನಾ

Pinterest LinkedIn Tumblr


ಹಾಸನ(ಜುಲೈ.14): ಜೆಡಿಎಸ್ ರಾಜ್ಯಾಧ್ಯಕ್ಷ ಹಾಗೂ ಸಕಲೇಶಪುರ ಶಾಸಕ ಹೆಚ್.ಕೆ ಕುಮಾರಸ್ವಾಮಿಯವರ ಹೆಂಡತಿ, ಜಿಲ್ಲಾ ಪಂಚಾಯತ್​ ಸದಸ್ಯೆ ಚಂಚಲಾ ಕುಮಾರಸ್ವಾಮಿ ಹಾಗೂ ಮಗಳಿಗೆ ಕೊರೋನಾ ಪಾಸಿಟಿವ್ ಬಂದಿದೆ. ಕಳೆದ ವಾರ ಆಲೂರಿನಲ್ಲಿ ಶಾಸಕರು ಹಾಗೂ ಅವರ ಆಪ್ತ ಸಹಾಯಕ, ಗನ್ ಮ್ಯಾನ್ ಸೇರಿದಂತೆ ಒಟ್ಟು 11 ಜನರ ಗಂಟಲು ದ್ರವ ತೆಗೆದು‌ ಹಾಸನದ ಟೆಸ್ಟಿಂಗ್ ಕೇಂದ್ರಕ್ಕೆ ರವಾನೆ ಮಾಡಲಾಗಿತ್ತು. ಬೆಳಗೋಡು ಜಿಲ್ಲಾ ಪಂಚಾಯತಿ ಕ್ಷೇತ್ರದ ಸದಸ್ಯೆಯಾಗಿರುವ ಚಂಚಲ ಕುಮಾರಸ್ವಾಮಿ, ಅವರ ಮಗಳು ಹಾಗೂ ಕಾರಿನ ಡ್ರೈವರ್ ಗೆ ಕೊರೋನಾ ಧೃಢವಾಗಿದ್ದು, ಪಾಸಿಟಿವ್ ವರದಿ ಬಂದಿದೆ.

ಸದ್ಯ ಚಂಚಲಾ ಕುಮಾರಸ್ವಾಮಿಯವರು ಮಂಡ್ಯ ಜಿಲ್ಲೆಯ ತಮ್ಮ ಮಗಳ ಮನೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಕಾರಿನ ಚಾಲಕ ಹಾಸನ ಜಿಲ್ಲಾ ಕೋವಿಡ್ ಚಿಕಿತ್ಸಾ ಕೇಂದ್ರಕ್ಕೆ ದಾಖಲಾಗಿದ್ದಾರೆ. ಚಂಚಲಾ ಕುಮಾರಸ್ವಾಮಿಯವರ ಪ್ರಾಥಮಿಕ ಸಂಪರ್ಕದಲ್ಲಿದ್ದ ಶಾಸಕರು ಸೇರಿದಂತೆ ಅವರ ಎಲ್ಲ ಸಿಬ್ಬಂದಿ ವರ್ಗದವರು ಪ್ರತ್ಯೇಕವಾದ ಮನೆಯಲ್ಲಿ ಕ್ವಾರಂಟೈನ್ ನಲ್ಲಿದ್ದಾರೆ.

ಮೊದಲ ವರದಿಯಲ್ಲಿ ನನಗೆ ಪಾಸಿಟಿವ್ ಕಂಡು ಬಂದಿಲ್ಲ ಮುನ್ನೆಚ್ಚರಿಕೆಯಾಗಿ ಬೇರೆ ಮನೆಗೆ ಸ್ಥಳಂತಾರಗೊಂಡಿದ್ದೇವೆ. ಒಂದು ವಾರ ಸಾರ್ವಜನಿಕ ಸಂಪರ್ಕದಿಂದ ದೂರವಿದ್ದು ಹೋಂ ಕ್ವಾರಂಟೈನ್ ನಲ್ಲಿ ಇರಲು ತೀರ್ಮಾನ ಮಾಡಿದ್ದೇನೆ. ಸಾರ್ವಜನಿಕರು ಪಕ್ಷದ ಕಾರ್ಯಕರ್ತರು ಅಗತ್ಯವಿದ್ದಲ್ಲಿ ದೂರವಾಣಿ ಮೂಲಕ ಸಂಪರ್ಕಿಸುವಂತೆ ಶಾಸಕ ಹೆಚ್.ಕೆ ಕುಮಾರಸ್ವಾಮಿ ಮನವಿ ಮಾಡಿದ್ದಾರೆ.

ಶಾಸಕ ಹೆಚ್.ಕೆ ಕುಮಾರಸ್ವಾಮಿ ಹೆಂಡತಿ ಜಿಲ್ಲಾ ಪಂಚಾಯತ್​ ಸದಸ್ಯೆ ಚಂಚಲಾ ಯಾವುದೇ ಸಮಸ್ಯೆ ಇಲ್ಲಾ ಚೆನ್ನಾಗಿದ್ದೇವೆ. ನನ್ನ ಮಗಳು ವೈದ್ಯೆಯಾಗಿದ್ದು, ಪ್ರತಿನಿತ್ಯ ಎಂದಿನಂತೆ ಆಸ್ಪತ್ರೆಗೆ ಕರ್ತವ್ಯಕ್ಕೆ ಹೋಗುತ್ತಿದ್ದರು. ಆಸ್ಪತ್ರೆಯಿಂದಲೇ ಕೊರೋನಾ ಸೋಂಕು ತಗುಲಿರುವ ಸಾಧ್ಯತೆ ಇದೆ. ನಾನು ಮಗಳ ಜೊತೆ ಪ್ರಾಥಮಿಕ ಸಂಪರ್ಕದಲ್ಲಿದ್ದೆ ಆದ್ದರಿಂದ ಕೊರೋನಾ ಪಾಸಿಟಿವ್ ಬಂದಿದೆ ಎಂದು ಹೇಳಿದ್ದಾರೆ.

ಯಾರೂ ಭಯಪಡುವ ಅವಶ್ಯಕತೆ ಇಲ್ಲಾ ನಾನು ಚೆನ್ನಾಗಿದ್ದೇನೆ. ಸಕಲೇಶಪುರದ ಜನರು ಮತ್ತು ನಮ್ಮ ಜಿಲ್ಲಾ ಪಂಚಾಯತ್ ಕ್ಷೇತ್ರದ ಜನರು ಯಾವುದಾದರೂ ಸಮಸ್ಯೆಗಳಿದ್ದರೆ ದೂರವಾಣಿ ಮೂಲಕ ಸಂಪರ್ಕಿಸಿ ದೂರವಾಣಿ ಮೂಲಕವೇ ತಮ್ಮ ಸಮಸ್ಯೆ ಬಗೆಹರಿಸುವ ಪ್ರಾಮಾಣಿಕ ಪ್ರಯತ್ನ ಮಾಡುತ್ತೇನೆ ಎಂದು ಚಂಚಲಾ ಕುಮಾರಸ್ವಾಮಿ ಸಾರ್ವಜನಿಕರಿಗೆ ಮನವಿ ಮಾಡಿದ್ದಾರೆ.

Comments are closed.