ಕರ್ನಾಟಕ

ಬೀದರ್ ನಲ್ಲಿ ಜುಲೈ 15ರಿಂದ ಜುಲೈ 22ರವೆರಗೂ ಲಾಕ್ಡೌನ್

Pinterest LinkedIn Tumblr


ಬೀದರ್: ಗಡಿ ಜಿಲ್ಲೆ ಬೀದರ್​ನಲ್ಲಿ ಕೊರೋನಾ ಆರ್ಭಟಕ್ಕೆ ಬ್ರೇಕ್ ಹಾಕುವ ನಿಟ್ಟಿನಲ್ಲಿ ಜಿಲ್ಲಾಧಿಕಾರಿ ಆರ್ ರಾಮಚಂದ್ರನ್ ಅವರು, ಇದೇ ಜುಲೈ 15 ರಿಂದ ಜುಲೈ 22ರವರೆಗೂ ಲಾಕ್ಡೌನ್ ಜಾರಿ ಮಾಡುವ ಕುರಿತು ಘೋಷಣೆ ಮಾಡಿದ್ದಾರೆ.

ನಾಳೆ ರಾತ್ರಿ ಎಂಟು ಗಂಟೆಯಿಂದ ಜುಲೈ 22ರವರೆಗೆ ಒಂದು ವಾರ ಲಾಕ್​ಡೌನ್ ಜಾರಿ ಮಾಡಲಾಗುತ್ತಿದೆ. ಈ ಬಗ್ಗೆ ಅಧಿಕೃತ ಆದೇಶ ಬಿಡುಗಡೆ ಮಾಡಿರುವ ‘ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಜಿಲ್ಲಾ ಉಸ್ತುವಾರಿ ಸಚಿವ ಪ್ರಭು ಚೌಹ್ವಾಣ್ ಅವರು, ಜಿಲ್ಲೆಯಲ್ಲಿ ಈಗಾಗಲೇ 1103 ಪಾಸಿಟಿವ್ ಕೇಸ್ ಪತ್ತೆಯಾಗಿದ್ದು, 53 ಜನ ಮೃತರಾಗಿದ್ದಾರೆ. ಮಹಾರಾಷ್ಟ್ರ ಲಿಂಕ್ ಜಿಲ್ಲೆಯನ್ನು ಬಿಡದೆ ಕಾಡುತ್ತಿದ್ದು, ಕೊರೋನಾ ಮಹಾಮಾರಿಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಲಾಕ್ಡೌನ್ ಹೇರಲಾಗುತ್ತಿದೆ ಎಂದು ಹೇಳಿದರು.

ಈ ಬಗ್ಗೆ ನಿನ್ನೆಯೇ ಸಿಎಂ ಬಿ.ಎಸ್ ಯಡಿಯೂರಪ್ಪ ಅವರು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹಾಗೂ ಪ್ರಭು ಚೌಹಾಣ್ ಅವರ ಜೊತೆಗೆ ಸಭೆ ನಡೆಸಿದ್ದರು.‌ ಸಭೆಯಲ್ಲಿ ಲಾಕ್ ಡೌನ್ ಜಿಲ್ಲಾಡಳಿತದ ವಿವೇಚನೆಗೆ ಬಿಟ್ಟ ವಿಚಾರ. ಜಿಲ್ಲೆಯ ಎಲ್ಲ ಶಾಸಕರನ್ನು ವಿಶ್ವಾಸಕ್ಕೆ ತೆಗೆದುಕೊಂಡು ಮುಂದುವರೆಯಿರಿ ಎಂದು ಸೂಚಿಸಿದ್ದರು. ಅದರಂತೆ ನಿನ್ನೆಯೇ ಸಭೆ ನಡೆಸಿದ್ದ ಸಚಿವ ಚೌಹಾಣ್, ಇಂದು ನಿರ್ಧಾರ ಪ್ರಕಟಿಸುವುದಾಗಿ ತಿಳಿಸಿದ್ದರು.

ಇನ್ನು ಕಂಟೈನ್ಮೆಂಟ್ ಜೋನ್ ಗಳಲ್ಲಿ ಆಸ್ಪತ್ರೆ ಹಾಗೂ ಔಷಧ ಅಂಗಡಿಗಳಿಗೆ ವಿನಾಯಿತಿ ನೀಡಲಾಗಿದೆ. ಒಂದು ವಾರ ಕಾಲ ಜಿಲ್ಲೆಯಲ್ಲಿ ಜಾತ್ರೆ, ಉತ್ಸವ, ಸಮಾವೇಶ, ಸಮಾರಂಭ ಸೇರಿದಂತೆ ಇತರೆ ಜನ ಚಟುವಟಿಕೆ ಮೇಲೆ ನಿಷೇಧ ಹೇರಲಾಗಿದೆ. ಸರಕಾರಿ ಸಾರಿಗೆ ಸೇರಿದಂತೆ ಖಾಸಗಿ ವಾಹನ ಸಂಚಾರವೂ ಬಂದ್ ಇರಲಿದ್ದು, ತುರ್ತು ಇದ್ದರಷ್ಟೇ ವಿನಾಯಿತಿ ಇರುತ್ತದೆ ಎಂದು ಜಿಲ್ಲಾಧಿಕಾರಿ ಆರ್.ರಾಮಚಂದ್ರನ್ ಹೇಳಿದರು.

Comments are closed.