ಕರ್ನಾಟಕ

ಪದವಿ‌‌, ಸ್ನಾತಕೋತ್ತರ ಪದವಿ ಕೋರ್ಸ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ50 ರಷ್ಟು ರಿಯಾಯಿತಿ

Pinterest LinkedIn Tumblr

ಬೆಂಗಳೂರು: ಪದವಿ‌‌, ಸ್ನಾತಕೋತ್ತರ ಪದವಿ ಹಾಗೂ ಡಿಪ್ಲೊಮಾ ಕೋರ್ಸ್ ಗಳ ಮಧ್ಯಂತರ ಸೆಮಿಸ್ಟರ್ ಗಳ ಪರೀಕ್ಷೆ ಗಳನ್ನು ಕೋವಿಡ್ 19 ಕಾರಣಕ್ಕೆ ರದ್ದು‌ ಮಾಡಿರುವುದರಿಂದ ಮುಂದಿ‌ನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ50 ರಷ್ಟು ರಿಯಾಯಿತಿ ನೀಡಲು ತೀರ್ಮಾನಿಸಲಾಗಿದೆ.

ಈ ವಿಚಾರವನ್ನು ಉನ್ನತ ಶಿಕ್ಷಣ ಸಚಿವರೂ ಆಗಿರುವ ಉಪ ಮುಖ್ಯಮಂತ್ರಿ ಡಾ.ಸಿ.ಎ‌ನ್. ಅಶ್ವತ್ಥನಾರಾಯಣ ಅವರು ಇಂದು ತಿಳಿಸಿದರು.

ಈ ಸಂಬಂಧ ಎಲ್ಲಾ ವಿಶ್ವವಿದ್ಯಾಲಯಗಳಿಗೆ ಸುತ್ತೋಲೆಯನ್ನು ಕಳುಹಿಸಲು ಉನ್ನತ ಶಿಕ್ಷಣ ಇಲಾಖೆ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ರಮಣರೆಡ್ಡಿ ಅವರಿಗೆ ಸಚಿವರು ಸೂಚಿಸಿದರು.

ಕೆಲವು ವಿಶ್ವವಿದ್ಯಾಲಯಗಳು ಈಗಾಗಲೇ ಪರೀಕ್ಷಾ ಶುಲ್ಕವನ್ನು ಸಂಗ್ರಹಿಸಿದ್ದು ಅದನ್ನು ವಾಪಸ್ ಕೊಡಿಸಿ‌ ಎನ್ನುವ ಮನವಿ ವಿದ್ಯಾರ್ಥಿಗಳಿಂದ ಬಂದಿತ್ತು. ಇದಕ್ಕೆ ಸ್ಪಂದಿಸಿದ ಡಿಸಿಎಂ ಅವರು‌ ಪರೀಕ್ಷೆ ರದ್ದಾಗಿದ್ದರೂ ಮೌಲ್ಯಮಾಪನ ಪ್ರಕ್ರಿಯೆ ಇರುತ್ತದೆ. ಹೀಗಾಗಿ ಮುಂದಿ‌ನ ಸೆಮಿಸ್ಟರ್ ಗಳ ಪರೀಕ್ಷಾ ಶುಲ್ಕದಲ್ಲಿ ಶೇ 50 ರಷ್ಟು ರಿಯಾಯಿತಿ ನೀಡಲು ಸೂಚಿಸಲಾಗುವುದು ಎಂದು ತಿಳಿಸಿದ್ದಾರೆ.

Comments are closed.