ಕರ್ನಾಟಕ

ಶಿವಮೊಗ್ಗ: ರಾಂಪುರದ ಮಠಾಧೀಶ ಹಾಲಸ್ವಾಮಿ ಕೊರೊನಾದಿಂದ ಸಾವು

Pinterest LinkedIn Tumblr


ಶಿವಮೊಗ್ಗ: ಕೊರೊನಾ ಸೋಂಕಿನಿಂದಾಗಿ ಹೊನ್ನಾಳಿ ತಾಲೂಕಿನ ರಾಂಪುರ ಮಠದ ಮಠಾಧೀಶ ಹಾಲಸ್ವಾಮಿ(54)ಯವರು ಸಾವನ್ನಪ್ಪಿದ್ದಾರೆ.

ಶಿವಮೊಗ್ಗದ ಕೋವಿಡ್-19 ಮೆಗ್ಗಾನ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಸ್ವಾಮೀಜಿ ಸಾವನ್ನಪ್ಪಿದ್ದಾರೆ. ಸ್ವಾಮೀಜಿ ಕಳೆದ 10 ದಿನಗಳಿಂದ ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದರು. ಈ ಹಿನ್ನೆಲೆ ಭಕ್ತರು ಆಸ್ಪತ್ರೆಗೆ ದಾಖಲಾಗುವಂತೆ ಹಲವು ಬಾರಿ ಮನವಿ ಮಾಡಿಕೊಂಡಿದ್ದರು. ಆದರೂ ಸ್ವಾಮೀಜಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯಲು ಒಪ್ಪಿರಲಿಲ್ಲ ಎನ್ನಲಾಗಿದೆ.

ಕಳೆದ 4 ದಿನಗಳ ಹಿಂದೆ ಉಸಿರಾಟದ ಸಮಸ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಶಿವಮೊಗ್ಗದ ಮೆಗ್ಗಾನ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಈ ವೇಳೆ ಸ್ವಾಮೀಜಿಗೆ ಕೊರೊನಾ ಸೋಂಕು ತಗುಲಿರುವುದು ಪತ್ತೆಯಾಗಿತ್ತು. ಅಂದಿನಿಂದ ಮೆಗ್ಗಾನ್ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಸ್ವಾಮೀಜಿ, ಚಿಕಿತ್ಸೆ ಫಲಕಾರಿಯಾಗದೇ ಇಂದು ಆಸ್ಪತ್ರೆಯಲ್ಲಿಯೇ ಕೊನೆಯುಸಿರೆಳೆದಿದ್ದಾರೆ. ಸ್ವಾಮೀಜಿ ಸಾವಿಗೆ ಭಕ್ತರು ಕಂಬನಿ ಮಿಡಿದಿದ್ದಾರೆ.

Comments are closed.