ಕರ್ನಾಟಕ

ಬೆಂಗಳೂರಿನಲ್ಲಿ ಆತ್ಮಹತ್ಯೆಗೆ ಶರಣಾದ ಕೋವಿಡ್‌ ಸೋಂಕಿತ ವೃದ್ಧೆ !

Pinterest LinkedIn Tumblr

ಬೆಂಗಳೂರು: ಬೆಂಗಳೂರು ನಗರದಲ್ಲಿ ಕೋವಿಡ್‌ ಸೋಂಕಿತ ವೃದ್ಧೆಯೊಬ್ಬರು ಆತ್ಮಹತ್ಯೆಗೆ ಶರಣಾಗಿದ್ದಾರೆ.

60 ವರ್ಷದ ಮರಿಯಪ್ಪನ ಪಾಳ್ಯದ ಸಾವಿತ್ರಮ್ಮ ಎಂಬ ಮಹಿಳೆ ಆಸ್ಪತ್ರೆಯಲ್ಲಿಯೇ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಇವರನ್ನು ಅನಾರೋಗ್ಯದ ಹಿನ್ನೆಲೆಯಲ್ಲಿ ಕೆಸಿಜಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಕೆಲ ದಿನಗಳ ಹಿಂದಷ್ಟೇ ಇವರ ಪುತ್ರನಿಗೆ ಕೂಡ ಸೋಂಕು ಕಾಣಿಸಿಕೊಂಡಿತ್ತು. ಅವರು ಜು 11ರಂದು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದರು ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಇದರಿಂದ ಬೆಂಗಳೂರು ನಗರದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 509ಕ್ಕೇರಿಕೆಯಾಗಿದೆ.

Comments are closed.