ಕರ್ನಾಟಕ

ಸೆಪ್ಟಂಬರ್​ನಲ್ಲಿ ಶಾಲೆ ಪ್ರಾರಂಭಿಸುವ ಕುರಿತು ಸಚಿವ ಸುರೇಶ್‌ಕುಮಾರ್ ಹೇಳಿದ್ದೇನು?

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಶಾಲೆಗಳ ಆರಂಭಕ್ಕೆ ಯಾವುದೇ ನಿರ್ಣಯ ಕೈಗೊಂಡಿಲ್ಲ ಎಂದು ಪ್ರಾಥಮಿಕ ಹಾಗೂ ಪ್ರೌಢ ಶಿಕ್ಷಣ ಸಚಿವ ಸುರೇಶ್​ಕುಮಾರ್​ ಸ್ಪಷ್ಟಪಡಿಸಿದ್ದಾರೆ.

ಕೇಂದ್ರ ಮಾನವ ಸಂಪನ್ಮೂಲ ಅಭಿವೃದ್ಧಿ ಸಚಿವಾಲಯದ ಅಪೇಕ್ಷೆಯಂತೆ ರಾಜ್ಯದಲ್ಲಿ ಸೆಪ್ಟೆಂಬರ್​ನಲ್ಲಿ ಶಾಲೆಗಳ ಪುನರಾರಂಭವಾಗಲಿದೆ ಸರ್ಕಾರ ಅಭಿಪ್ರಾಯ ವ್ಯಕ್ತಪಡಿಸಿದೆ ಎಂದು ವರದಿಯಾಗಿದೆ. ಆದರೆ, ಇದು ಸರ್ಕಾರದ ನಿರ್ಣಯವಾಗಿರುವುದಿಲ್ಲ. ಶಿಕ್ಷಣ ಇಲಾಖೆ ಅಧಿಕಾರಿಗಳು ಸಭೆಯೊಂದರಲ್ಲಿ ಭಾಗವಹಿಸಿದಾಗ ವ್ಯಕ್ತಪಡಿಸಿರಬಹುದಾದ ಸಾಮಾನ್ಯ ಅಭಿಪ್ರಾಯವನ್ನು ಈ ರೀತಿ ಪ್ರತಿಬಿಂಬಿಸಲಾಗಿದೆಯಷ್ಟೆ ಎಂದು ಸಚಿವ ಎಸ್.ಸುರೇಶ್‌ಕುಮಾರ್ ಹೇಳಿದ್ದಾರೆ.

ಕರೊನಾ ಸಂದರ್ಭದಲ್ಲಿನ ಶಿಕ್ಷಣ ಕ್ಷೇತ್ರದ ಆದ್ಯತೆಗಳು‌ ಬೇರೆಯಿದ್ದು, ಅವನ್ನು ಸಮರ್ಥವಾಗಿ ನಿರ್ವಹಿಸುವಲ್ಲಿ‌ ರಾಜ್ಯ ಸರ್ಕಾರ ತನ್ನನ್ನು ತೊಡಗಿಸಿಕೊಂಡಿದೆ. ವಿದ್ಯಾರ್ಥಿಗಳು ಯಾವುದೇ ತೊಂದರೆಯಿಲ್ಲದ ಮುಕ್ತ ವಾತಾವರಣದ ಸೃಷ್ಟಿಯಾದ ಮೇಲೆ ಮಾತ್ರ ಶಾಲೆಗಳಿಗೆ ಹಾಜರಾಗುತ್ತಾರೆ ಎಂದು ತಿಳಿಸಿದ್ದಾರೆ.

ಸದ್ಯಕ್ಕೆ ಶಾಲೆಗಳನ್ನು ತೆರೆಯುವ ಬಗ್ಗೆ ನಾವು ಯಾವುದೇ ಯೋಚನೆ, ನಿರ್ಣಯ ಕೈಗೊಂಡಿಲ್ಲ. ಬೇರಾವ ಅನವಶ್ಯಕ ಆತಂಕ ಬೇಡ ಎಂದು ಅವರು ಸ್ಪಷ್ಟ ಪಡಿಸಿದ್ದಾರೆ.

Comments are closed.