ಕರ್ನಾಟಕ

ಇನ್ನೂ 3 ದಿನವೂ ರಾಜ್ಯಾದ್ಯಂತ ಮಳೆ: ಹವಾಮಾನ ಮುನ್ಸೂಚನೆ

Pinterest LinkedIn Tumblr


ಬೆಂಗಳೂರು(ಜುಲೈ 20): ರಾಜ್ಯಾದ್ಯಂತ ಮಳೆಯ ಆರ್ಭಟ ಮುಂದುವರಿಯಲಿದೆ. ಇವತ್ತೂ ಸೇರಿ ಇನ್ನೂ 4 ದಿನ ಮಳೆಯ ನರ್ತನ ಮುಂದುವರಿಯಲಿದೆ. ಜುಲೈ 23ರವರೆಗೂ ಐಎಂಡಿಬಿಯ ಹವಾಮಾನ ಮುನ್ಸೂಚನೆಯ ಪ್ರಕಾರ ಬಹುತೇಕ ಎಲ್ಲಾ ಜಿಲ್ಲೆಗಳಲ್ಲೂ ಮಳೆಯಾಗಲಿದೆ.

ಹಲವು ದಿನಗಳಿಂದಲೂ ರಾಜ್ಯಾದ್ಯಂತ ಮಳೆಯಾಗುತ್ತಿದೆ. ಅದರಲ್ಲೂ ಕರಾವಳಿ ಮತ್ತು ಮಲೆನಾಡು ಭಾಗದಲ್ಲಿ ಭಾರೀ ಮಳೆಯಾಗಿದೆ. ಇಲ್ಲಿ ಮುಂದಿನ ಮೂರು ದಿನಗಳೂ ಭರ್ಜರಿ ಮಳೆ ಮುಂದುವರಿಯಲಿದೆ.

ಬೆಂಗಳೂರು ಗ್ರಾಮಾಂತರ, ಚಿಕ್ಕಮಗಳೂರು, ಹಾಸನ, ಕೊಡಗು ಮತ್ತು ಕೋಲಾರ ಜಿಲ್ಲೆಗಳಲ್ಲಿ ಇವತ್ತು ದೊಡ್ಡ ಪ್ರಮಾಣದಲ್ಲಿ ಮಳೆಯಾಗಲಿದೆ. ಮುಂದಿನ ಮೂರು ದಿನ ಇಲ್ಲಿ ಮಧ್ಯಮ ಪ್ರಮಾಣದಲ್ಲಿ ಮಳೆ ಮುಂದುವರಿಯಲಿದೆ.

ಬೆಂಗಳೂರು ನಗರ, ಬೆಳಗಾವಿ, ಧಾರವಾಡ, ಗದಗ, ಕಲಬುರ್ಗಿ, ಚಾಮರಾಜನಗರ, ಚಿಕ್ಕಬಳ್ಳಾಪುರ, ಮಂಡ್ಯ, ಮೈಸೂರು, ಕೊಡಗು, ರಾಮನಗರ, ಶಿವಮೊಗ್ಗ ಮತ್ತು ತುಮಕೂರು ಜಿಲ್ಲೆಗಳಲ್ಲೂ ಮಧ್ಯಮ ಪ್ರಮಾಣದಲ್ಲಿ ಮಳೆಯಾಗಲಿದೆ. ನಾಳೆ, ಮಂಗಳವಾರ ಈ ಭಾಗಗಳಲ್ಲಿ ಭಾರೀ ಮಳೆಯಾಗುವ ನಿರೀಕ್ಷೆ ಇದೆ.

ಬೀದರ್, ಹಾವೇರಿ, ಕೊಪ್ಪಳ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಚಿತ್ರದುರ್ಗ ಮತ್ತು ದಾವಣಗೆರೆ ಜಿಲ್ಲೆಗಳಲ್ಲಿ ಜುಲೈ 23ರವರೆಗೆ ಸಾಧಾರಣ ಮಳೆಯಾಗಲಿದೆ ಎಂದು ಐಎಂಡಿಬಿ ಮುನ್ಸೂಚನೆ ನೀಡಿದೆ.

Comments are closed.