ಕರ್ನಾಟಕ

ಕೊರೊನಾ ಸೋಂಕಿಗೆ ಬೆಂಗಳೂರು ನಗರದ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಸಾವು

Pinterest LinkedIn Tumblr


ಬೆಂಗಳೂರು: ಕೊರೊನಾ ಸೋಂಕಿಗೆ ಬೆಂಗಳೂರು ನಗರದ ಸಹಾಯಕ ಪೊಲೀಸ್ ಸಬ್ ಇನ್ಸ್ ಪೆಕ್ಟರ್-ಎಎಎಸ್ ಒಬ್ಬರು ಮೃತಪಟ್ಟಿದ್ದಾರೆ. ಇದರೊಂದಿಗೆ ಸೋಂಕಿಗೆ ಮೃತಪಟ್ಟ ಪೊಲೀಸರ ಸಂಖ್ಯೆ 9ಕ್ಕೆ ಏರಿಕೆಯಾಗಿದೆ.

ದಕ್ಷಿಣ ವಿಭಾಗದ ಸಿಟಿ ಆರ್ಮ್ ರಿಸರ್ವ್- ಸಿಎಆರ್ ನಲ್ಲಿ ಕಾರ್ಯನಿರ್ವಹಿಸುತ್ತಿದ್ದ ಎಎಸ್ಐ ಕಳೆದ ರಾತ್ರಿ ಮನೆಯಲ್ಲಿದ್ದಾಗ ಅಸ್ವಸ್ಥಗೊಂಡಿದ್ದು ಕೂಡಲೇ ಅವರನ್ನು ಸೆಂಟ್ ಜಾನ್ ಆಸ್ಪತ್ರೆಗೆ ದಾಖಲಿಸಿಸಲಾಯಿತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮುಂಜಾನೆ ಮೃತಪಟ್ಟಿದ್ದಾರೆ. ಅವರಿಗೆ 56 ವರ್ಷ ವಯಸ್ಸಾಗಿತ್ತು. ಅವರ ಗಂಟಲು ದ್ರವ ಪರೀಕ್ಷಿಸಿದಾಗ ಅವರಿಗೆ ಕೊರೊನಾ ಸೋಂಕು ಇರುವುದು ದೃಢಪಟ್ಟಿದೆ ಎಂದು ತಿಳಿದುಬಂದಿದೆ.

ಕಳೆದ 24 ಗಂಟೆಯಲ್ಲಿ ನಗರದಲ್ಲಿ 33 ಪೊಲೀಸರಿಗೆ ಸೋಂಕು ಕಾಣಿಸಿಕೊಂಡಿದ್ದು, ಒಟ್ಟಾರೆ ಬೆಂಗಳೂರು ನಗರದ 883 ಮಂದಿಗೆ ಸೋಂಕು ತಗುಲಿದೆ.

Comments are closed.