ಕರ್ನಾಟಕ

ಬೆಂಗಳೂರಿನಲ್ಲಿ ಗುಡುಗು ಸಹಿತ ಭಾರೀ ಮಳೆ

Pinterest LinkedIn Tumblr


ಬೆಂಗಳೂರು(ಜು.23): ಮಾರಕ ಕೊರೋನಾ ಆರ್ಭಟದ ನಡುವೆ ಬೆಂಗಳೂರಿನಲ್ಲಿ ಭಾರೀ ಮಳೆ ಸುರಿಯುತ್ತಿದೆ. ನಗರದ ಮಲ್ಲೇಶ್ವರಂ, ಕೆ.ಆರ್​​ ಮಾರ್ಕೆಟ್​, ಮೆಜೆಸ್ಟಿಕ್​​​, ಸುಂಕದಕಟ್ಟೆ, ಬ್ಯಾಡರಹಳ್ಳಿ, ನಾಗರಬಾವಿ, ಬನಶಂಕರಿ ಮತ್ತು ಟೌನ್​​ಹಾಲ್​​ ಸೇರಿದಂತೆ ಹಲವೆಡೆ ಧಾರಾಕಾರ ಮಳೆಯಾಗುತ್ತಿದೆ. ಗುಡುಗು ಸಹಿತ ರಭಸವಾಗಿ ಸುರಿಯುತ್ತಿರುವ ಮಳೆಯ ಹಿನ್ನೆಲೆಯಲ್ಲಿ ಸಾರ್ವಜನಿಕರು ಪರದಾಡುವಂತಾಗಿದೆ.

ಇನ್ನು, ಕಳೆದ ಎರಡು ವಾರಗಳಿಂದ ಬೆಂಗಳೂರು ಜತೆಗೆ ರಾಜ್ಯದ ವಿವಿಧೆಡೆ ಗುಡುಗು ಸಹಿತ ಭಾರೀ ಮಳೆಯಾಗುತ್ತಿದೆ. ಎಂದಿನಂತೆಯೇ ಇಂದು ಮಳೆ ಆರ್ಭಟ ಮುಂದುವರಿದಿದೆ. ಹೀಗಾಗಿ ಕೊರೊನಾ ರೋಗ ಹರಡುವ ಭಯದಲ್ಲಿ ಜನ ಕಾಲ ಕಳೆಯುವಂತಾಗಿದೆ. ಶಿವಮೊಗ್ಗ, ಮಂಗಳೂರು, ಬೆಂಗಳೂರು, ಚಿಕ್ಕಮಗಳೂರು, ಕೋಲಾರ, ಮೈಸೂರು ಸೇರಿದಂತೆ ಹಲವೆಡೆ ಜೋರು ಮಳೆ ಸುರಿಯುತ್ತಿದೆ.

ಇನ್ನು, ರಾಜ್ಯದಲ್ಲಿ ಒಂದಷ್ಟು ದಿನಗಳ ಕಾಲ ಸಾಧಾರಣ ಮಳೆಯಾಗಲಿದೆ. ಇದು ಮಳೆಗಾಲವಾಗಿದ್ದು, ಮುಂಗಾರು ನಂತರ ಬರುವ ಮಳೆಯಾಗಿದೆ. ಈ ಮಳೆ ಹೆಚ್ಚಿರುವ ತಾಪಮಾನವನ್ನು ಈ ಮಳೆ ಕಡಿಮೆ ಮಾಡುತ್ತದೆ.

ಮುಂದಿನ ಒಂದು ವಾರ ಬೆಂಗಳೂರಿನಲ್ಲಿ ಮಳೆ ಆಗಲಿದೆ ಎಂದು ಹವಾಮಾನ ಇಲಾಖೆ ಹೇಳಿದೆ. ಹೀಗಾಗಿ ನೀವು ಸೂಕ್ತ ಮುನ್ನೆಚ್ಚರಿಕೆಯೊಂದಿಗೆ ತೆರಳುವುದು ಒಳಿತು. ಈ ಸಮಯದಲ್ಲಿ ಮಳೆಯಲ್ಲಿ ನೆನೆಯುವುದು ಅಷ್ಟು ಸೂಕ್ತವಲ್ಲ. ನಿಮಗೆ ಸಾಮಾನ್ಯ ಜ್ವರ ಕಾಣಿಸಿಕೊಂಡರೂ ಅದು ಕೊರೋನಾ ಇರಬಹುದೇ ಎನ್ನುವ ಆಲೋಚನೆ ಕಾಡುತ್ತದೆ. ಹೀಗಾಗಿ, ಆ ಬಗ್ಗೆ ಎಚ್ಚರಿಕೆಯಿಂದ ಇರುವುದು ಉತ್ತಮ.

Comments are closed.