ಕರ್ನಾಟಕ

ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ ಕೊರೋನಾಗೆ ಬಲಿ

Pinterest LinkedIn Tumblr


ಕಲಬುರಗಿ: ಮಾಜಿ ಸಚಿವ ರಾಜಾ ಮದನಗೋಪಾಲ ನಾಯಕ(70) ಅವರು ಕೊರೋನಾ ಸೋಂಕಿಗೆ ಬಲಿಯಾಗಿದ್ದಾರೆ.

ಕೊರೋನಾ ಸೋಂಕಿನಿಂದ ಬಳಲುತ್ತಿದ್ದ ಮದನ ಗೋಪಾಲ ನಾಯಕ ಅವರು ಚಿಕಿತ್ಸೆಗೆ ಸ್ಪಂದಿಸದ ಅವರು ಕಲಬುರಗಿ ನಗರದ ಇಎಸ್ಐ ಆಸ್ಪತ್ರೆಯಲ್ಲಿ ಸೋಮವಾರ ನಿಧನ ಹೊಂದಿದರು.

ಅವರು ನ್ಯುಮೋನಿಯಾ, ಬಿಪಿ, ಸಕ್ಕರೆ ಕಾಯಿಲೆ ಸೇರಿ ಹೃದಯ ಸಂಬಂಧಿ ಸಮಸ್ಯೆಯಿಂದ ಬಳಲುತ್ತಿದ್ದರು. ಕಳೆದ ಐದು ದಿನಗಳ ಹಿಂದೆ ಅವರಿಗೆ ಕೊರೋನಾ ಸೋಂಕು ಇರುವುದು ದೃಢಪಟ್ಟಿತ್ತು. ಹೀಗಾಗಿ ಕಲಬುರಗಿ ನಗರದ ಇಎಸ್ಐ ಆಸ್ಪತ್ರೆಗೆ ಅವರನ್ನು ದಾಖಲಿಸಲಾಗಿತ್ತು.

1974ರಿಂದಲೇ ರಾಜಕೀಯ ಅಖಾಡದಲ್ಲಿ ಸಕ್ರಿಯವಾಗಿದ್ದ ಅವರು, 1992-94 ರಲ್ಲಿ ಕಾಂಗ್ರೆಸ್ ಸರ್ಕಾರದಲ್ಲಿ ಸಚಿವರಾಗಿದ್ದರು.

ಸುರಪುರ ವಿಧಾನಸಭೆ ಕ್ಷೇತ್ರದಿಂದ ಮೂರು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದ ಅವರು, ಕೃಷಿ ಉತ್ಪನ್ನ ಮಾರುಕಟ್ಟೆಯಲ್ಲಿ ಹಲವು ಮಹತ್ವದ ಬದಲಾವಣೆ ತಂದಿದ್ದರು.

2014ರಲ್ಲಿ ಬಿಜೆಪಿಯಿಂದ ವಿಧಾನಸಭೆ ಚುನಾವಣೆಗೆ ಸ್ಪರ್ಧಿಸಿ ಸೋತಿದ್ದ ಅವರು, ಕಳೆದ 2018ರ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ನ ಮಾಜಿ ಶಾಸಕ ರಾಜಾ ವೆಂಕಟಪ್ಪ ನಾಯಕ ಅವರಿಗೆ ಬೆಂಬಲ ನೀಡಿದ್ದರು. ಇವರು ರಾಯಚೂರು ಸಂಸದ ರಾಜಾ ಅಮರೇಶ್ವರ ನಾಯಕ್ ಅವರ ಸಹೋದರಿಯ ಪತಿ.

Comments are closed.