ಕರ್ನಾಟಕ

ರಾಜ್ಯದಲ್ಲಿ ಇಂದು 5536 ಕೊರೋನಾ ಪ್ರಕರಣಗಳು ಪತ್ತೆ: 102 ಮಂದಿ ಬಲಿ

Pinterest LinkedIn Tumblr


ಬೆಂಗಳೂರು: ರಾಜ್ಯದಲ್ಲಿ ಮಹಾಮಾರಿ ಕೊರೋನಾ ವೈರಸ್ ಆರ್ಭಟ ಮುಂದುವರಿದಿದೆ. ಕಳೆದ ಐದು ದಿನಗಳಿಂದ ದಿನವೊಂದರಲ್ಲಿ ಐದು ಸಾವಿರಕ್ಕೂ ಹೆಚ್ಚು ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 1,07,001ಕ್ಕೆ ಏರಿಕೆಯಾಗಿದೆ.

ಸೋಮವಾರ ರಾಜ್ಯದಲ್ಲಿ ಒಟ್ಟು 5538 ಪಾಸಿಟಿವ್ ಪ್ರಕರಣಗಳು ವರದಿಯಾಗಿದ್ದು, ಇದರಿಂದ ರಾಜ್ಯದಲ್ಲಿ ಒಟ್ಟು ಸೋಂಕಿತರ ಸಂಖ್ಯೆ 1,07001ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ರಾಜ್ಯದಲ್ಲಿ ಮಹಾಮಾರಿಗೆ ಇಂದು 102 ಮಂದಿ ಬಲಿಯಾಗಿದ್ಧಾರೆ. ಈ ಮೂಲಕ ಇದುವರೆಗೂ ರಾಜ್ಯದಲ್ಲಿ ಕೊರೋನಾದಿಂದ ಮೃತಪಟ್ಟವರ ಸಂಖ್ಯೆ 2055ಕ್ಕೆ ಏರಿಕೆಯಾಗಿದೆ.

ಇಂದು ರಾಜಧಾನಿ ಬೆಂಗಳೂರು ನಗರದಲ್ಲಿ 1898 ಪ್ರಕರಣಗಳು ಪತ್ತೆಯಾಗಿದ್ದು, 40 ಮಂದಿ ಕೊರೋನಾಗೆ ಬಲಿಯಾಗಿದ್ದಾರೆ.

ಈ ನಡುವೆ, ಕಳೆದ 24 ಗಂಟೆಗಳಲ್ಲಿ 2,819 ಮಂದಿ ಸಂಪೂರ್ಣ ಗುಣಮುಖರಾಗಿ, ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಒಟ್ಟು 40,504 ಮಂದಿ ಚೇತರಿಸಿಕೊಂಡಂತಾಗಿದೆ. ಸದ್ಯ ರಾಜ್ಯದಲ್ಲಿ ಒಟ್ಟು 64,434 ಸಕ್ರಿಯ ಪ್ರಕರಣಗಳಿವೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.

ಇಂದು ರಾಜ್ಯದಲ್ಲಿ 37,720 ಕೋವಿಡ್ ಪರೀಕ್ಷೆ ನಡೆಸಲಾಗಿದ್ದು ಈವರೆಗೂ ಒಟ್ಟು 12,42,771 ಟೆಸ್ಟ್ ನಡೆಸಲಾಗಿದೆ.

Comments are closed.