
ಬೆಂಗಳೂರು: ಕಾಲೇಜು ವಿದ್ಯಾರ್ಥಿನಿಯರ ಅಶ್ಲೀಲ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್ಲೋಡ್ ಮಾಡುತ್ತಿದ್ದ ಆರೋಪಿಗಳನ್ನು ಸೈಬರ್ ಕ್ರೈಂ ಪೊಲೀಸರು ಬಂಧಿಸಿದ್ದಾರೆ.
ಅಜಯ್ ತನಿಕಾಚಲಂ ಹಾಗೂ ವಿಶ್ವಕ್ ಬಂಧಿತ ಟೆಕ್ಕಿಗಳು. ಪ್ರಸಿದ್ಧ ಕಾಲೇಜು ಒಂದರ ಉಪನ್ಯಾಸಕಿಯರು, ಹಳೆಯ ವಿದ್ಯಾರ್ಥಿನಿಯರು ಹಾಗೂ ಪ್ರಸ್ತುತ ವ್ಯಾಸಾಂಗ ಮಾಡುತ್ತಿರುವ ವಿದ್ಯಾರ್ಥಿನಿಯರ ಫೋಟೋಗಳನ್ನ ಆರೋಪಿಗಳು ನಕಲಿ ಖಾತೆ ಸೃಷ್ಟಿಸಿ ಸಾಮಾಜಿಕ ಜಾಲತಾಣಗಳಲ್ಲಿ ಅಪ್ಲೋಡ್ ಮಾಡುತ್ತಿದ್ದರು.
ಈ ಸಂಬಂಧ ಸಿಇಎನ್ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಬಳಿಕ ಕಾರ್ಯಾಚರಣೆಗೆ ಇಳಿದ ಸಿಸಿಬಿ ಸೈಬರ್ ಕ್ರೈಂ ಪೊಲೀಸರು ಬಂಧಿತರಿಂದ ಲ್ಯಾಪ್ ಟಾಪ್ ಹಾಗೂ ಮೊಬೈಲ್ ಫೋನ್ ಜಪ್ತಿ ಮಾಡಿದ್ದಾರೆ.
Comments are closed.