ಕರ್ನಾಟಕ

ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ಕಮಲ್ ಪಂಥ್ ನೇಮಕ

Pinterest LinkedIn Tumblr


ಬೆಂಗಳೂರು (ಜು. 31): ಕರ್ನಾಟಕ ಸರ್ಕಾರ ಬೆಂಗಳೂರು ಪೊಲೀಸ್ ಆಯುಕ್ತ ಭಾಸ್ಕರ್ ರಾವ್ ಅವರ ಜಾಗಕ್ಕೆ ಕಮಲ್ ಪಂಥ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ. 1990ನೇ ಬ್ಯಾಚ್​ನ ಐಪಿಎಸ್​ ಅಧಿಕಾರಿಯಾಗಿರುವ ಕಮಲ್ ಪಂಥ್ ಇಂದಿನಿಂದ ಬೆಂಗಳೂರು ನೂತನ ಪೊಲೀಸ್ ಕಮಿಷನರ್ ಆಗಿ ನೇಮಕಗೊಂಡಿದ್ದಾರೆ.

ಬೆಂಗಳೂರಲ್ಲಿ ದಿನದಿಂದ ದಿನಕ್ಕೆ ಕೊರೋನಾ ಕೇಸ್​ಗಳು ಹೆಚ್ಚುತ್ತಿದೆ. ಪ್ರತಿದಿನ 2 ಸಾವಿರಕ್ಕೂ ಹೆಚ್ಚು ಕೊರೋನಾ ಕೇಸ್​ಗಳು ಪತ್ತೆಯಾಗುತ್ತಿದೆ. ಇದರ ನಡುವೆ ರಾಜ್ಯ ಸರ್ಕಾರ ಪೊಲೀಸ್ ಇಲಾಖೆಗೆ ಮೇಜರ್ ಸರ್ಜರಿ ಮಾಡಿದ್ದು, ಬೆಂಗಳೂರು ಪೊಲೀಸ್ ಆಯುಕ್ತರಾಗಿದ್ದ ಭಾಸ್ಕರ್ ರಾವ್ ಅವರನ್ನು ಎತ್ತಂಗಡಿ ಮಾಡಿದೆ. ಭಾಸ್ಕರ್ ರಾವ್ ಅವರನ್ನು ಆಂತರಿಕ ಭದ್ರತಾ ವಿಭಾಗದ ಎಡಿಜಿಪಿ ಆಗಿ ವರ್ಗಾವಣೆ ಮಾಡಲಾಗಿದೆ. ನೂತನ ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ಅಧಿಕಾರ ವಹಿಸಿಕೊಳ್ಳಲಿದ್ದಾರೆ.

ಗುಪ್ತಚರ ಇಲಾಖೆಯ ಮುಖ್ಯಸ್ಥರಾಗಿದ್ದ ಕಮಲ್ ಪಂಥ್ ಜಾಗಕ್ಕೆ 1994ನೇ ಬ್ಯಾಚ್​ನ ಐಪಿಎಸ್ ಅಧಿಕಾರಿ ಬಿ. ದಯಾನಂದ ಅವರನ್ನು ನೇಮಕ ಮಾಡಲಾಗಿದೆ. ಆ. 1ಕ್ಕೆ ಭಾಸ್ಕರ್ ರಾವ್​ ಬೆಂಗಳೂರು ಪೊಲೀಸ್ ಕಮಿಷನರ್ ಆಗಿ ಒಂದು ವರ್ಷ ಪೂರ್ಣವಾಗುತ್ತಿತ್ತು. ಅವರ ಒಂದು ವರ್ಷದ ಅವಧಿ ಪೂರ್ಣಗೊಂಡಿರುವ ಹಿನ್ನೆಲೆಯಲ್ಲಿ ನೂತನ ಕಮಿಷನರ್ ಆಗಿ ಕಮಲ್ ಪಂಥ್ ಅವರನ್ನು ನೇಮಕ ಮಾಡಲಾಗಿದೆ ಎನ್ನಲಾಗುತ್ತಿದೆ. ಬೆಂಗಳೂರು ಪೊಲೀಸ್ ಕಮಿಷನರ್ ಹುದ್ದೆಗಾಗಿ ಕಮಲ್ ಪಂಥ್ ಮತ್ತು ಸುನಿಲ್ ಅಗರ್​ವಾಲ್ ಅವರ ನಡುವೆ ಪೈಪೋಟಿ ನಡೆದಿತ್ತು. ಕೊನೆಗೂ ಬೆಂಗಳೂರು ಪೊಲೀಸ್ ಆಯುಕ್ತರಾಗಿ ಕಮಲ್ ಪಂಥ್ ನೇಮಕಗೊಂಡಿದ್ದಾರೆ.

Comments are closed.