
ಹಾಸನ: ಚನ್ನರಾಯಪಟ್ಟಣ ನಗರ ಠಾಣೆ ಪಿಎಸ್ಐ ಆತ್ಮಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ಸಚಿವ ಹೆಚ್.ಡಿ.ರೇವಣ್ಣ ಸ್ಪೋಟಕ ಹೇಳಿಕೆಯನ್ನು ನೀಡಿದ್ದು, ಅನುಮಾನ ವ್ಯಕ್ತಪಡಿಸಿದ್ದಾರೆ.
ಮಾಧ್ಯಮದೊಂದಿಗೆ ಮಾತನಾಡಿ, ಮೇಲಾಧಿಕಾರಿ ಒತ್ತಡದಿಂದ ಪಿಎಸ್ಐ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂಬ ಮಾಹಿತಿ ನನಗೆ ತಿಳಿದಿದೆ. ಪಿಎಸ್ಐ ಕಿರಣ್ ಮೊಬೈಲ್ ಅನ್ನು ಐಜಿ ವಶಪಡಿಸಿಕೊಂಡಿದ್ದಾರೆ. ಅವರ ಮನೆಯವ ಸಮ್ಮುಖದಲ್ಲಿ ಮೊಬೈಲ್ ಮಾಹಿತಿ ಮಹಜರ್ ತೆಗೆದಿಲ್ಲ. ಅದನ್ನು ತೆಗೆಯಬೇಕಿತ್ತು ಎಂದಿದ್ದಾರೆ.
ಜಿಲ್ಲೆಯಲ್ಲಿ ಪೊಲೀಸ್ ವರ್ಗಾವಣೆ ದಂಧೆ ಕೇವಲ ಒಬ್ಬ ಶಾಸಕ ಹಾಗೂ ಓರ್ವ ಸರ್ಕಲ್ ಇನ್ಸ್ಪೆಕ್ಟರ್ ಕೈಯಲ್ಲಿದೆ. ಈ ಪ್ರಕರಣವನ್ನು ಸಿಬಿಐ ತನಿಖೆಗೆ ಒಪ್ಪಿಸಬೇಕು. ಪ್ರಮಾಣಿಕ ಅಧಿಕಾರಿಗೆ ಎಲ್ಲಿ ಬೆಲೆ ಇದೆ ಎಂದು ವಾಗ್ದಾಳಿ ನಡೆಸಿದರು.
Comments are closed.