ಕರ್ನಾಟಕ

ಯಡಿಯೂರಪ್ಪ, ಅಮಿತ್‌ ಷಾಗೆ ಕರೊನಾ ಬಂದಿರುವ ವಿಷಯ ಕೇಳಿ ನೋವುಂಟಾಗಿದೆ- ಎಚ್.ಡಿ.ಕುಮಾರಸ್ವಾಮಿ

Pinterest LinkedIn Tumblr


ಬೆಂಗಳೂರು: ಮುಖ್ಯಮಂತ್ರಿ ಬಿ.ಎಸ್ ಯಡಿಯೂಪ್ಪ ಹಾಗೂ ಕೇಂದ್ರ ಗೃಹ ಸಚಿವ ಅಮಿತ್ ಷಾ ಅವರಿಗೆ ಕರೊನಾ ಸೋಂಕು ದೃಢಪಟ್ಟಿರುವುದಕ್ಕೆ ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಸಂತಾಪ ವ್ಯಕ್ತಪಡಿಸಿದ್ದಾರೆ.

ಈ ಕುರಿತು ಪ್ರತ್ಯೇಕ ಟ್ವೀಟ್‌ ಮಾಡಿರುವ ಕುಮಾರಸ್ವಾಮಿ, ಈ ವಿಚಾರ ತಿಳಿದು ಮನಸ್ಸಿಗೆ ತೀವ್ರ ನೋವುಂಟಾಗಿದೆ. ಬಿಎಸ್ ಹಾಗೂ ಅಮಿತ್ ಷಾ ಸೋಂಕಿನಿಂದ ಶೀಘ್ರ ಗುಣಮುಖರಾಗಲಿ ಎಂದು ಹಾರೈಸಿದ್ದಾರೆ.

ಜನ ಸೇವೆಯಲ್ಲಿ ತೊಡಗಿರುವ ಜನಪ್ರತಿನಿಧಿಗಳು ಅತ್ಯಂತ ಎಚ್ಚರಿಕೆಯಿಂದ ಆರೋಗ್ಯದ ಬಗ್ಗೆ ಕಾಳಜಿ ವಹಿಸುವಂತೆ ಈ ಮೂಲಕ ಮನವಿ ಮಾಡಿಕೊಳ್ಳುವುದಾಗಿ ಅವರು ತಿಳಿಸಿದರು.

ಮುಖ್ಯಮಂತ್ರಿ, ಸಚಿವರು ಹಾಗೂ ಈ ಮಾರಕ ಸೋಂಕು ತಗುಲಿರುವ ಜನತೆ ಶೀಘ್ರ ಚೇತರಿಸಿಕೊಂಡು, ಈ ಸೋಂಕು ಮೆಟ್ಟಿನಿಲ್ಲುವ ಶಕ್ತಿ ದಯಪಾಲಿಸುವಂತೆ ಭಗವಂತನಲ್ಲಿ ಪ್ರಾರ್ಥನೆ ಮಾಡುತ್ತೇನೆ. ಎಲ್ಲರ ಪ್ರಾರ್ಥನೆ, ಆಶೀರ್ವಾದ, ಸದಾಶಯ ನಿಮ್ಮೊಂದಿಗೆ ಇದೆ ಎಂದು ಕುಮಾರಸ್ವಾಮಿ ಟ್ವೀಟ್‌ನಲ್ಲಿ ಬರೆದಿದ್ದಾರೆ.

Comments are closed.