ಕರ್ನಾಟಕ

ಮಾಜಿ ಸಚಿವ ಹಾಗೂ ಜೆಡಿಎಸ್ ಶಾಸಕ ಸತ್ಯನಾರಾಯಣ್​ ನಿಧನ

Pinterest LinkedIn Tumblr

ಬೆಂಗಳೂರು (ಆ.4): ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದ ಜೆಡಿಎಸ್​ ಶಾಸಕ ಸತ್ಯನಾರಾಯಣ ಅವರು ಇಂದು ಮಣಿಪಾ್​ ಆಸ್ಪತ್ರೆಯಲ್ಲಿ ಸಾವನಪ್ಪಿದ್ದಾರೆ. ಅವರು ಶಿರಾದ ಶಾಸಕರಾಗಿದ್ದರು.

ಸತ್ಯನಾರಾಯಣ ಅವರು ಕಳೆದ ಕೆಲ ವರ್ಷಗಳಿಂದ ಬಹು ಅಂಗಾಂಗ ವೈಫಲ್ಯದಿಂದ ಬಳಲುತ್ತಿದ್ದರು. ಆರೋಗ್ಯ ಸ್ಥಿತಿ ಗಂಭೀರಗೊಂಡ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಮಣಿಪಾಲ್ ಆಸ್ಪತ್ರೆಗೆ ದಾಖಲು ಮಾಡಲಾಗಿತ್ತು. ಆದರೆ, ಚಿಕಿತ್ಸೆ ಫಲಕಾರಿಯಾಗದೆ ಇಂದು ಮಧ್ಯಾಹ್ನ 12.20ಕ್ಕೆ ಕೊನೆಯುಸಿರೆಳೆದಿದ್ದಾರೆ.

ಅವರ ಸಾವಿಗೆ ಮಾಜಿ ಪ್ರಧಾನಿ ಹಾಗೂ ಜೆಡಿಎಸ್​ ವರಿಷ್ಠ ಎಚ್​ಡಿ ದೇವೇಗೌಡ ಅವರು ಸಂತಾಪ ಸೂಚಿಸಿದ್ದಾರೆ. “ಮಾಜಿ ಸಚಿವರು ಮತ್ತು ಶಾಸಕರು ಹಾಗೂ ನನ್ನ ಸನ್ಮಿತ್ರರು ಆದ ಶ್ರೀ ಬಿ. ಸತ್ಯನಾರಾಯಣ್ ಅವರ ನಿಧನದ ಸುದ್ದಿ ಕೇಳಿ ತೀವ್ರ ಆಘಾತವಾಗಿದೆ. ಸತ್ಯನಾರಾಯಣ್ ಮತ್ತು ನನ್ನ ಸ್ನೇಹ ಸುಮಾರು 3 ದಶಕಗಳದ್ದು ಅವರಿಲ್ಲದ ದಿನಗಳನ್ನು ನೆನೆಯಲು ನನ್ನಿಂದ ಸಾಧ್ಯವೇಇಲ್ಲ. ಸತ್ಯನಾರಾಯಣ್ ಅವರು ತುಂಬಾ ಮೃದು ಸ್ವಭಾವದವರು ಅವರ ಅಗಲಿಕೆಯಿಂದ ನಮ್ಮ ನಾಡಿಗೆ ತುಂಬಲಾಗದ ನಷ್ಟ ಉಂಟಾಗಿದೆ. ಮೃತರ ಆತ್ಮಕೆ ಶಾಂತಿ ಸಿಗಲಿ ಮತ್ತು ಅವರ ಕುಟುಂಬದವರಿಗೆ ಹಾಗೂ ಅಭಿಮಾನಿಗಳಿಗೆ ದುಃಖ ಭರಿಸುವ ಶಕ್ತಿ ತುಂಬಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೀನಿ, ಎಂದು ದೇವೇಗೌಡ ಅವರು ಹೇಳಿದ್ದಾರೆ.

Comments are closed.