ಬೇರೆ ರಾಜ್ಯಗಳಿಗೆ ಹೋಲಿಸಿದರೆ ಕರ್ನಾಟಕದಲ್ಲಿ ಮರಣ ದರ ಕಡಿಮೆ: ಸುಧಾಕರ್
”ಕರ್ನಾಟಕದಲ್ಲಿ ಕೋವಿಡ್ ಮರಣ ಪ್ರಮಾಣ ಇತರ ರಾಜ್ಯಗಳಿಗಿಂತ ಸಮಾಧಾನಕರವಾಗಿದೆ. ಪ್ರತಿ 10 ಲಕ್ಷ ಜನಸಂಖ್ಯೆಗೆ ಕೊರೊನಾ ವೈರಸ್ನಿಂದ ಮರಣ ಹೊಂದುತ್ತಿರುವವರ ಸಂಖ್ಯೆ ಕರ್ನಾಟಕಕ್ಕಿಂತ ದಿಲ್ಲಿಯಲ್ಲಿ 5 ಪಟ್ಟು ಮತ್ತು ಮಹಾರಾಷ್ಟ್ರದಲ್ಲಿ 3 ಪಟ್ಟು ಹೆಚ್ಚಿದೆ. ಬೆಂಗಳೂರಿನಲ್ಲಿ ಮರಣ ಪ್ರಮಾಣವು ಇತರೆ ಮಹಾನಗರಗಳಿಗಿಂತ ಕಡಿಮೆ ಇದೆ. 10 ಲಕ್ಷ ಜನಸಂಖ್ಯೆಗೆ ರಾಜ್ಯದಲ್ಲಿ 39 ಮತ್ತು ಬೆಂಗಳೂರಿನಲ್ಲಿ 115 ಮರಣ ದರವಿದೆ,” ಎಂದು ತಿಳಿಸಿದ್ದಾರೆ.
ಅಧಿಕಾರಿಗಳಿಗೆ ಎಚ್ಚರಿಕೆ
ಆಸ್ಪತ್ರೆಗಳಲ್ಲಿರೋಗಿಗಳ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸುವ ವೈದ್ಯಾಧಿಕಾರಿಗಳ ವಿರುದ್ಧ ಕ್ರಮ ಜರುಗಿಸುವುದಾಗಿ ಸಚಿವ ಡಾ.ಕೆ.ಸುಧಾಕರ್ ಎಚ್ಚರಿಕೆ ನೀಡಿದ್ದಾರೆ
ಬೆಂಗಳೂರಿನ ಕೆ.ಸಿ.ಜನರಲ್ ಆಸ್ಪತ್ರೆಯಲ್ಲಿ ಮೃತದೇಹವನ್ನು ತೆಗೆದುಕೊಂಡು ಹೋಗಲು ವಿಳಂಬ ಮಾಡಲಾಗಿತ್ತು. ಇದನ್ನು ಕೂಡಲೇ ಸರಿಪಡಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಿದ್ದೇನೆ. ಈ ರೀತಿ ನಿರ್ಲಕ್ಷ್ಯ ತೋರುವ ವೈದ್ಯಾಧಿಕಾರಿಗಳ ವಿರುದ್ಧ ಕಾನೂನು ಕ್ರಮ ಕೈಗೊಳ್ಳಲಾಗುವುದು,” ಎಂದು ಎಚ್ಚರಿಕೆ ನೀಡಿದ್ದಾರೆ.
Comments are closed.