
ಬೆಂಗಳೂರು: ಕೊರೋನಾ ಮಹಾಮಾರಿಗೆ ತುತ್ತಾಗಿದ್ದ ಸತತ 9 ದಿನಗಳ ಕಾಲ ಮಣಿಪಾಲ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದಿದ್ದ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪನವರು ಇಂದು ಸಂಜೆ ಡಿಸ್ಚಾರ್ಜ್ ಆಗಿದ್ದಾರೆ.
ಕೊರೋನಾ ಟೆಸ್ಟ್ ನಲ್ಲಿ ನೆಗೆಟಿವ್ ಬಂದಿದ್ದರಿಂದ ಯಡಿಯೂರಪ್ಪನವರನ್ನು ಡಿಸ್ಚಾರ್ಜ್ ಮಾಡಲಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ.
ಪೊಲೀಸರ ಬಿಗಿ ಭದ್ರತೆಯಲ್ಲಿ ಬಿಎಸ್ ಯಡಿಯೂರಪ್ಪನವರನ್ನು ಆಸ್ಪತ್ರೆಯಿಂದ ಮನೆಗೆ ಕರೆದೊಯ್ಯಲಾಗಿದ್ದು ಅವರು ಸಾಗುವ ಮಾರ್ಗದ ಸುತ್ತಮುತ್ತ ಭದ್ರತೆ ಒದಗಿಸಲಾಗಿದೆ.
ಆಗಸ್ಟ್ 2ರಂದು ಬಿಎಸ್ ಯಡಿಯೂರಪ್ಪನವರು ಆಸ್ಪತ್ರೆಗೆ ದಾಖಲಾಗಿದ್ದು ಇಂದು ಡಿಸ್ಚಾರ್ಜ್ ಆಗಿದ್ದಾರೆ.
Comments are closed.