ಕರ್ನಾಟಕ

ಈ ಬಾರಿ SSLC ಯಲ್ಲಿ 625ಕ್ಕೆ 625 ಅಂಕ ಪಡೆಯುವ ಮೂಲಕ ಟಾಪರ್​ ಆಗಿ ಹೊರಹೊಮ್ಮಿದ ಆರು ಮಂದಿ ವಿದ್ಯಾರ್ಥಿಗಳು

Pinterest LinkedIn Tumblr

ಬೆಂಗಳೂರು: ಕೊರೋನಾ ಆತಂಕದ ನಡುವೆ ನಡೆಸಲಾಗಿದ್ದ 2019-20ನೇ ಸಾಲಿನ ಎಸ್​ಎಸ್​ಎಲ್​ಸಿ ಪರೀಕ್ಷೆಯ ಫಲಿತಾಂಶ ಇಂದು ಪ್ರಕಟವಾಗಿದೆ. ಶಿಕ್ಷಣ ಸಚಿವ ಎಸ್. ಸುರೇಶ್ ಕುಮಾರ್ ಅವರು ಫಲಿತಾಂಶ ಬಿಡುಗಡೆ ಮಾಡಿದ್ದು, ಈ ಬಾರಿ ಒಟ್ಟು ಶೇ.71.80 ಫಲಿತಾಂಶ ಬಂದಿದೆ. ಈ ಬಾರಿ ಆರು ಮಂದಿ ವಿದ್ಯಾರ್ಥಿಗಳು 625ಕ್ಕೆ 625 ಅಂಕ ಪಡೆಯುವ ಮೂಲಕ ಟಾಪರ್​ ಆಗಿ ಹೊರಹೊಮ್ಮಿದ್ದಾರೆ.

ಉತ್ತರಕನ್ನಡ ಜಿಲ್ಲೆಯ ಶಿರಸಿಯ ಮಾರಿಕಾಂಭ ಪಿಯು ಕಾಲೇಜ್ ಸರ್ಕಾರಿ ಶಾಲೆಯ ಸನ್ನಿಧಿ ಮಹಾಬಲೇಶ್ವರ ಹೆಗ್ಡೆ 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಬೆಂಗಳೂರಿನ ನಾಗಸಂಧ್ರದ ಸೆಂಟ್ ಮೇರಿಸ್ ಹೈಸ್ಕೂಲ್​ನ ಚಿರಾಯು ಕೆ.ಎಸ್. ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಬೆಂಗಳೂರಿನ ಪೂರ್ಣಪ್ರಜ್ಞಾ ಎಜುಕೇಷನ್ ಸೆಂಟರ್​ನ ನಿಖಿಲೇಶ್ ಎನ್​ ಮರಲಿ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಹಾಗೆಯೇ ಮಂಡ್ಯ ಜಿಲ್ಲೆಯ ಮಾರದೇವನಹಳ್ಳಿಯ ಶ್ರೀ ಸತ್ಯಸಾಯಿ ಸರಸ್ವತಿ ಇಂಗ್ಲಿಷ್ ಮೀಡಿಯಂ ಬಾಯ್ಸ್​ ಹೈಸ್ಕೂಲ್​ನ ಧೀರಜ್ ರೆಡ್ಡಿ ಎಂಪಿ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಮತ್ತು ದಕ್ಷಿಣ ಕನ್ನಡ ಜಿಲ್ಲೆಯ ಸುಳ್ಯಾ ತಾಲೂಕಿನ ಸುಬ್ರಹ್ಮಣ್ಯ ಪೋಸ್ಟ್​ನ ಕುಮಾರಸ್ವಾಮಿ ಇಂಗ್ಲಿಷ್ ಮೀಡಿಯಂ ಹೈಸ್ಕೂಲ್​ನ ಅನುಷಾ ಎ.ಎಲ್​ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ. ಹಾಗೂ ಚಿಕ್ಕಮಗಳೂರಿನ ಸೆಂಟ್ ಜೋಸೆಫ್ ಕಾನ್ವೆಂಟ್ ಗರ್ಲ್ಸ್​ ಹೈಸ್ಕೂಲ್​ನ ತನ್ಮಯಿ ಐಪಿ ಅವರು 625ಕ್ಕೆ 625 ಅಂಕ ಪಡೆದುಕೊಂಡಿದ್ದಾರೆ.

Comments are closed.