ಕರ್ನಾಟಕ

ಎಸ್ಸೆಸ್ಸೆಲ್ಸಿ ಫಲಿತಾಂಶ: ಕನ್ನಡ ಮಾಧ್ಯಮದಲ್ಲಿ ಬೆಳಗಾವಿಯ ಶೃತಿ, ಸಹನಾ ರಾಜ್ಯಕ್ಕೆ ಪ್ರಥಮ

Pinterest LinkedIn Tumblr


ಈ ಬಾರಿಯ ಎಸ್ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ಬೆಳಗಾವಿಯ ಇಬ್ಬರು ವಿದ್ಯಾರ್ಥಿನಿಯರಾದ ಸಹನಾ ಕಾಮಗೌಡರ ಮತ್ತು ಶ್ರುತಿ ಪಾಟೀಲ ಅವರು ತಲಾ 623 ಅಂಕ ಗಳಿಸಿ ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಬೆಳಗಾವಿ: ಕನ್ನಡ ಮಾಧ್ಯಮದಲ್ಲಿ ಬೆಳಗಾವಿಯ ನಾಲ್ವರು ವಿದ್ಯಾರ್ಥಿಗಳ ಸಾಧನೆ ಮಾಡಿದ್ದಾರೆ. 2019-20ನೇ ಸಾಲಿನಲ್ಲಿ ನಡೆದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ಕನ್ನಡ ಮಾಧ್ಯಮದಲ್ಲಿ ಜಿಲ್ಲೆಯ ನಾಲ್ವರು ವಿದ್ಯಾರ್ಥಿಗಳು ಉತ್ತಮ ಸಾಧನೆ ತೋರಿದ್ದಾರೆ.

ಚಿಕ್ಕೋಡಿಯ ಎಂ. ಕೆ. ಕವಟಗಿಮಠ ಪ್ರೌಢಶಾಲೆ ವಿದ್ಯಾರ್ಥಿನಿ ಸಹನಾ ಕಾಮಗೌಡರ, ಗೋಕಾಕ ತಾಲೂಕಿನ ಘಟಪ್ರಭಾದ ಕೆ. ಆರ್. ಹುಕ್ಕೇರಿ ಪ್ರೌಢಶಾಲೆಯ ವಿದ್ಯಾರ್ಥಿನಿ ಶ್ರುತಿ ಪಾಟೀಲ ತಲಾ 623 ಅಂಕ ಗಳಿಸಿ, ಕನ್ನಡ ಮಾಧ್ಯಮದಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಳಿಸಿದ್ದಾರೆ.

ಬೈಲಹೊಂಗಲ ತಾಲೂಕಿನ ಉಡಿಕೇರಿಯ ಎಸ್. ಆರ್. ಪ್ರೌಢಶಾಲೆ ವಿದ್ಯಾರ್ಥಿ ವೀರಭದ್ರ ಕಲಭಾವಿ, ರಾಯಬಾಗ ತಾಲೂಕಿನ ಹಾರೂಗೇರಿಯ ಪ್ರಗತಿ ಪ್ರೌಢಶಾಲೆ ವಿದ್ಯಾರ್ಥಿನಿ ದೀಪಾ ನಾಗನೂರ ತಲಾ 622 ಅಂಕ ಗಳಿಸಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ.

ಈ ಬಾರಿ ಬರೋಬ್ಬರಿ 6 ವಿದ್ಯಾರ್ಥಿಗಳು ಶೇ. 100 ಅಂಕ (625 ಅಂಕ) ಗಳಿಸುವ ಮುಲಕ ರಾಜ್ಯಕ್ಕೆ ಮೊದಲ ಸ್ಥಾನ ಪಡೆದಿದ್ದಾರೆ.

ರಾಜ್ಯದ ಅತಿದೊಡ್ಡ ಸರಕಾರಿ ಪ್ರೌಢ ಶಾಲೆಗಳಲ್ಲಿ ಒಂದಾಗಿರುವ ಉತ್ತರ ಕನ್ನಡದ ಶಿರಸಿಯ ಶ್ರೀ ಮಾರಿಕಾಂಬಾ ಪ್ರೌಢಶಾಲೆಯ ವಿದ್ಯಾರ್ಥಿನಿ ಸನ್ನಿಧಿ ಮಹಾಬಲೇಶ್ವರ ಹೆಗಡೆ ಈ ಸಲದ ಎಸ್ಎಸ್ಎಲ್ಸಿ ಪರೀಕ್ಷೆಯಲ್ಲಿ ರಾಜ್ಯಕ್ಕೆ ಪ್ರಥಮ ಸ್ಥಾನ ಗಿಟ್ಟಿಸಿದ್ದಾಳೆ.

Comments are closed.