ಕರ್ನಾಟಕ

ರಾಜ್ಯದಲ್ಲಿ ಕೊರೋನಾ ಪರೀಕ್ಷಾ ದರ ರೂ.500ಕ್ಕೆ ಇಳಿಸಿದ ಸರ್ಕಾರ

Pinterest LinkedIn Tumblr

ಬೆಂಗಳೂರು: ಕೊರೋನಾ ಪರೀಕ್ಷಾ ದರವನ್ನು ಮತ್ತಷ್ಟು ಕಡಿತಗೊಳಿಸಿ ರಾಜ್ಯ ಸರ್ಕಾರ ಮಹತ್ವದ ತೀರ್ಮಾನ ಕೈಗೊಂಡಿದೆ.

ವಿಧಾನಸೌಧದಲ್ಲಿ ಶುಕ್ರವಾರ ನಡೆದ ಟಾಸ್ಕ್ ಫೋರ್ಸ್ ಸಭೆಯಲ್ಲಿ ಈ ನಿರ್ಧಾರವನ್ನು ಕೈಗೊಳ್ಳಲಾಗಿದೆ. ಸಭೆ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಉಪ ಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವತ್ಥ ನಾರಾಯಣ ಅವರು, ಸರ್ಕಾರಿ ಆಶ್ಪತ್ರೆಗಳಿಂಗ ಖಾಸಗಿ ಪ್ರಯೋಗಾಲಗಳಿಗೆ ರೆಫರ್ ಮಾಡುವ ಸೋಂಕಿತರ ಆರ್’ಟಿಪಿಸಿಆರ್ (ಗಂಟಲ ದ್ರವ ಪರೀಕ್ಷೆ)ದರವನ್ನು ರೂ.2 ಸಾವಿರದಿಂದ ರೂ.1,500ಕ್ಕೆ ಇಳಿಕೆ ಮಾಡಲಾಗಿದೆ. ಅಂತೆಯೇ ನೇರವಾಗಿ ಖಾಸಗಿ ಪ್ರಯೋಗಾಲಯಗಳಿಗೆ ಹೋಗಿ ಪರೀಕ್ಷೆ ಮಾಡಿಸಿಕೊಂಡ ರೂ.3 ಸಾವಿರ ವಿಧಿಸಲಾಗುತ್ತಿತ್ತು. ಈ ದರವನ್ನು ರೂ.,500ಕ್ಕೆ ಇಳಿಕೆ ಮಾಡಲಾಗಿದೆ.

ದರ ಕಡಿತವು ಎಲ್ಲಾ ವರ್ಗದ ರೋಗಿಗಳಿಗೆ ಅನುಕೂಲವಾಗಲಿದೆ. ಅಲ್ಲದೇ ಹೊಸದಾಗಿ 20 ಲಕ್ಷ ರ್ಯಾಪಿಡ್ ಆ್ಯಂಟಿಜೆನ್ ಕಿಟ್ ಮತ್ತು 18 ಆರ್’ಟಿಪಿಸಿಆರ್ ಪರೀಕ್ಷೆ ಕಿಟ್ ಗಳನ್ನು ಖರೀದಿ ಮಾಡಲು ಸಭೆಯಲ್ಲಿ ತೀರ್ಮಾನಿಸಲಾಗಿದೆ. ರಾಜಧಾನಿಯಲ್ಲಿ ಸೋಂಕಿತರ ಸಂಖ್ಯೆ ಹೆಚ್ಚುವ ಬಗ್ಗೆ ಈಗಾಗಲೇ ಐಸಿಎಂಆರ್ ಎಚ್ಚರಿಕೆ ನೀಡಿದೆ. ಹೀಗಾಗಿ ಎಲ್ಲಾ ಮುನ್ನೆಚ್ಚರಿಕೆಗಳನ್ನು ಕೈಗೊಳ್ಳಲಾಗುತ್ತಿದೆ. ಬೆಂಗಳೂರಿನ ಕೆ.ಸಿಜನರಲ್ ಆಸ್ಪತ್ರೆಯಲ್ಲಿ 115 ಐಸಿಯು ಹಾಸಿಗೆ ಆರಂಭಿಸಲು ರೂ.12 ಕೋಟಿ ಮೊತ್ತದ ಉಪಕರಣ ಖರೀದಿ ಮಾಡಲು ಕೂಡ ನಿರ್ಧರಿಸಲಾಗಿದೆ ಎಂದು ತಿಳಿಸಿದರು.

ರಾಜ್ಯದಲ್ಲಿ ಸ್ಟಿರೋಲಜಿ ಪರೀಕ್ಷೆ ನಡೆಸಲು ತೀರ್ಮಾನಿಸಲಾಗಿದ್ದು, ಪ್ರಸ್ತುತ 18 ಸಾವಿರ ಜನಕ್ಕೆ ಸ್ಟಿರೋಲಜಿ ಪರೀಕ್ಷೆ ಮಾಡಲಾಗುವುದು. ಇದಕ್ಕಾಗಿ ರೂ.1.90 ಕೋಟಿ ವೆಚ್ಚವಾಗಲಿದೆ 18 ಸಾವಿರ ಆ್ಯಂಟಿಬಾಡಿ ಪರೀಕ್ಷೆ ಕೂಡ ಮಾಡಲಾಗುತ್ತಿದೆ. ಇಮ್ಯುನಾಲಜಿ ವಿಷಯದಲ್ಲಿ ಸಂಶೋಧನೆ ಮಾಡಲು ಹೆಚ್ಚಿನ ಒತ್ತು ನೀಡಲಾಗುತ್ತಿದೆ ಎಂದಿದ್ದಾರೆ.

ಮರಣ ಪ್ರಮಾಣ ಕಡಿಮೆ ಮಾಡಲು ಎಲ್ಲಾ ರೀತಿಯ ಪ್ರಯತ್ನಗಳನ್ನು ಮಾಡಲಾಗುತ್ತಿದೆ. ಅದಕ್ಕಾಗಿ ಕೆಲ ಪರೀಕ್ಷೆಗಳನ್ನು ನಡೆಸಲೇಬೇಕಿದೆ. ಸರ್ಕಾರಿ ಆಸ್ಪತ್ರೆಯಲ್ಲಿ ಇಂತಹ ಪರೀಕ್ಷೆಗಳನ್ನು ಮಾಡಲು ಸಮಸ್ಯೆಯಾದರೆ ಖಾಸಗಿ ಪ್ರಯೋಗಾಲಯಗಳನ್ನು ಮಾಡಲಾಗುವುದು. ಈ ಪರೀಕ್ಷೆ ಮಾಡುವುದರಿಂದ ರೋಗದ ಹಂತ ತಿಳಿದು ಚಿಕಿತ್ಸೆ ನೀಡಿ ಮರಣ ಪ್ರಮಾಣ ಕಡಿಮೆ ಮಾಡಬಹುದು. ಇದರಂತೆ ಪ್ಲಾಸ್ಮಾ ಥೆರಪಿ ರಾಜ್ಯದೆಲ್ಲೆಡೆ ವಿಸ್ತರಿಸಲಾಗುವುದು. ಈ ಥೆರಪಿ ಕೊಡಲು ಎಲ್ಲಾ ಕಡೆ ವ್ಯವಸ್ಥೆ ಮಾಡಲಾಗಿದೆ ಎಂದು ವಿವರಿಸಿದರು.

Comments are closed.