ಕರ್ನಾಟಕ

ಆಸ್ಪತ್ರೆಯಲ್ಲಿನ ಎಸ್​ಪಿ ಬಾಲಸುಬ್ರಮಣ್ಯಂ ಸ್ಥಿತಿಯ ಫೋಟೋ ವೈರಲ್​

Pinterest LinkedIn Tumblr


ಕಳೆದ ವಾರವಷ್ಟೇ ಕರೊನಾ ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗಿದ್ದ ಹಿರಿಯ ಗಾಯಕ ಎಸ್​ಪಿ ಬಾಲಸುಬ್ರಮಣ್ಯಂ (74) ಆರೋಗ್ಯ ಸ್ಥಿತಿ ಗಂಭೀರವಾಗಿದೆಯೆಂದು ಆಸ್ಪತ್ರೆ ವೈದ್ಯರು ತಿಳಿಸಿದ್ದರು. ಇದೀಗ ಅವರ ಆರೋಗ್ಯದಲ್ಲಿ ಕೊಂಚ ಚೇತರಿಕೆ ಕಂಡು ಬಂದಿದೆ ಎಂಬ ಮಾಹಿತಿ ಲಭ್ಯವಾಗಿದೆ. ಜತೆಗೆ ಚಿಕಿತ್ಸೆಯಲ್ಲಿರುವ ಫೋಟೋವೊಂದು ಸೋಷಿಯಲ್​ ಮೀಡಿಯಾದಲ್ಲಿ ಹರಿದಾಡುತ್ತಿದ್ದು, ವೈರಲ್​ ಆಗುತ್ತಿದೆ.

ಚೆನ್ನೈನ ಎಂಜಿಎಂ ಹೆಲ್ತ್​ಕೇರ್​ನಲ್ಲಿ ಆಗಸ್ಟ್ 5ರಂದು ಕರೊನಾ ಪಾಸಿಟಿವ್​ ಬಂದ ಹಿನ್ನೆಲೆಯಲ್ಲಿ ಎಸ್​ಪಿಬಿ ಅವರನ್ನು ದಾಖಲಿಸಲಾಗಿತ್ತು. ಅಂದಿನಿಂದ ವಿಶೇಷ ವಾರ್ಡ್​ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಹೀಗಿರುವಾಗಲೇ ಗುರುವಾರ ಉಸಿರಾಟದ ಸಮಸ್ಯೆ ಹೆಚ್ಚಾಗಿದ್ದರಿಂದ ಶುಕ್ರವಾರ ತೀವ್ರ ನಿಗಾ ಘಟಕಕ್ಕೆ ಶಿಫ್ಟ್ ಮಾಡಲಾಗಿತ್ತು. ಇದೀಗ ಐಸಿಯುನಲ್ಲಿ ಚಿಕಿತ್ಸೆ ನೀಡುತ್ತಿದ್ದು, ಸ್ಪಂದಿಸುತ್ತಿದ್ದಾರೆ ಎಂದು ಕುಟುಂಬದವರು ಹೇಳಿದ್ದಾರೆ.

ಕಳೆದ ಎರಡು ದಿನಗಳಿಂದ ಅಪ್ಪನ ಆರೋಗ್ಯದಲ್ಲಿ ತುಂಬ ಏರುಪೇರಾಗಿತ್ತು. ಇದೀಗ ಚೇತರಿಕೆ ಕಂಡಿದೆ. ಶುಕ್ರವಾರ ರಾತ್ರಿಯಿಂದ ಸ್ಪಂದಿಸುತ್ತಿದ್ದಾರೆ. ಆರಂಭದಲ್ಲಿ ನಮಗೂ ಗಾಬರಿಯಾಗಿತ್ತು. ಅವರ ಚೇತರಿಕೆಗೆ ಪ್ರಾರ್ಥಿಸಿದ ಎಲ್ಲರಿಗೂ ಧನ್ಯವಾದ’ ಎಂದಿದ್ದಾರೆ ಎಸ್​ಪಿ ಬಾಲಸುಬ್ರಮಣ್ಯಂ ಪುತ್ರ ಎಸ್​ಪಿ ಚರಣ್​.

ಇನ್ನು ಆಗಸ್ಟ್ 5ರಂದು ಕರೊನಾ ಸೋಂಕು ತಗುಲಿರುವ ಬಗ್ಗೆ ಮಾಹಿತಿ ನೀಡಿದ್ದ ಎಸ್​ಪಿಬಿ, ಶೀಘ್ರದಲ್ಲಿ ಗುಣಮುಖನಾಗಿ ಆಚೆ ಬರುವೆ ಎಂದು ವಿಡಿಯೋ ಮಾಡಿ ಫೇಸ್​ಬುಕ್ನಲ್ಲಿ ಶೇರ್​ ಮಾಡಿಕೊಂಡಿದ್ದರು

Comments are closed.