
ಮೈಸೂರು: ನಂಜನಗೂಡು ತಾಲೂಕು ಆರೋಗ್ಯಾಧಿಕಾರಿ ಡಾ. ನಾಗೇಂದ್ರ ಆತ್ಮಹತ್ಯೆ ಪ್ರಕರಣ ಸಂಬಂಧ ಮೈಸೂರು ಜಿಲ್ಲಾ ಪಂಚಾಯತ್ ಸಿಇಒ ಪ್ರಶಾಂತ್ ಮಿಶ್ರಾ ಮೇಲೆ ಎಫ್ಐಆರ್ ದಾಖಲಾಗಿದೆ.
ಮೃತ ವೈದ್ಯಾಧಿಕಾರಿಯ ತಂದೆ ನೀಡಿದ ದೂರಿನ ಮೇರೆಗೆ ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ತಮ್ಮ ಮಗನ ಆತ್ಮಹತ್ಯೆಗೆ ಪ್ರಚೋದನೆ ನೀಡಿದ್ದರೆಂದು ಡಾ. ನಾಗೇಂದ್ರ ತಂದೆ ರಾಮಕೃಷ್ಣ ದೂರಿದ್ದರು.
ಜಿಲ್ಲಾ ಪಂಚಾಯತ್ನ ಮುಖ್ಯ ನಿರ್ವಹಣಾಧಿಕಾರಿಯವರು ನನ್ನ ಮಗನ ಮೇಲೆ ಒತ್ತಡ ಹೇರುತ್ತಿದ್ದರು. ವಿಪತ್ತು ನಿರ್ವಹಣಾ ಕಾಯ್ದೆಯಡಿ ಕ್ರಮ ಕೈಗೊಳ್ಳುತ್ತೇನೆ ಎಂದು ಹೆದರಿಸುತ್ತಿದ್ದರು ಎಂದು ರಾಮಕೃಷ್ಣ ತಮ್ಮ ದೂರಿನಲ್ಲಿ ಪ್ರಸ್ತಾಪಿಸಿದ್ದರು. ಇದೀಗ ಐಪಿಸಿ ಸೆಕ್ಷನ್ 306ರ ಅಡಿಯಲ್ಲಿ ಜಿ.ಪಂ. ಸಿಇಒ ಪ್ರಶಾಂತ್ ಮಿಶ್ರಾ ವಿರುದ್ಧ ಎಫ್ಐಆರ್ ದಾಖಲಾಗಿದೆ.
Comments are closed.