ಕರ್ನಾಟಕ

ಕುಷ್ಟಗಿ ತಹಶೀಲ್ದಾರನಿಂದ ‘ಕಿಸ್‌’ ಪಡೆದ ಸಂತ್ರಸ್ತೆಯಿಂದ ದೂರು

Pinterest LinkedIn Tumblr


ಕುಷ್ಟಗಿ: ಕೊಪ್ಪಳ ನಗರಾಭಿವೃದ್ಧಿ ಕೋಶ ಕಚೇರಿಯಲ್ಲಿ ಕೆಲಸ ಮಾಡುತ್ತಿರುವ ಗುರುಬಸವರಾಜ್‌ ಎರಡು ತಿಂಗಳ ಹಿಂದೆ ಕುಷ್ಟಗಿ ತಹಶೀಲ್ದಾರರಾಗಿದ್ದ ವೇಳೆ ಕಚೇರಿಯಲ್ಲಿ ನಡೆಸಿದ್ದ ಕಿಸ್ಸಿಂಗ್‌ ಪ್ರಕರಣ ಇದೀಗ ಬೆಳಕಿಗೆ ಬಂದು ಸಾಕಷ್ಟು ವೈರಲ್‌ ಆಗಿದೆ.

ಎರಡು ತಿಂಗಳ ಹಿಂದೆ ನಡೆದಿರುವ ಈ ಘಟನೆ ಇದೀಗ ವೈರಲ್‌ ಆಗುತ್ತಿದ್ದಂತೆಯೇ ಮಹಿಳೆ ಗುರುಬಸವರಾಜ್‌ ವಿರುದ್ಧ ದೂರು ದಾಖಲು ಮಾಡಿದ್ದಾರೆ.

ತಮ್ಮ ಕಚೇರಿಯ ಮಹಿಳಾ ಸಿಬ್ಬಂದಿಗೆ ಕಚೇರಿಯ ಒಳಗೇ ಮುತ್ತುಕೊಡುತ್ತಿರುವ ದೃಶ್ಯ ಸಿಸಿಟಿವಿಯಲ್ಲಿ ಸೆರೆಯಾಗಿದ್ದು, ಎರಡು ದಿನಗಳಿಂದ ಅದು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ. ಗುರುಬಸವರಾಜ್ ಕುಷ್ಟಗಿ ತಹಶೀಲ್ದಾರ್ ಆಗಿದ್ದ ಅವಧಿಯಲ್ಲಿ ಈ ಘಟನೆ ನಡೆದಿದ್ದು, ಅಲ್ಲಿಂದ ವರ್ಗಾವಣೆಯಾಗಿ ಈಗ ಅವರು ಕೊಪ್ಪಳ ನಗರಾಭಿವೃದ್ಧಿ ಕೋಶದಲ್ಲಿ ತಹಶೀಲ್ದಾರ್ ಆಗಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ.

ವೈರಲ್‌ ವಿಡಿಯೋ ಇಲ್ಲಿದೆ: VIDEO|ಕಚೇರಿಯಲ್ಲಿಯೇ ಕುಷ್ಟಗಿ ತಹಶೀಲ್ದಾರ್‌ ರಾಸಲೀಲೆ- ಕಿಸ್ಸಿಂಗ್‌ ವಿಡಿಯೋ ವೈರಲ್​

ವಿಡಿಯೋ ವೈರಲ್‌ ಆಗುತ್ತಿದ್ದಂತೆಯೇ ಮಹಿಳೆ ದೂರು ದಾಖಲಿಸಿದ್ದು ನ್ಯಾಯ ದೊರಕಿಸಿಕೊಡುವಂತೆ ಬೇಡಿಕೊಂಡಿದ್ದಾರೆ. ಗುರುಬಸವರಾಜ್ ಕುಷ್ಟಗಿ ತಹಶೀಲ್ದಾರ್ ಆಗಿ ಬಂದಾಗಿನಿಂದ ನನ್ನೊಂದಿಗೆ ಅಸಭ್ಯ ವರ್ತನೆ ತೋರುತ್ತಿದ್ದ. ಪ್ರತಿನಿತ್ಯ ಫೋನ್ ಮಾಡಿ ಕಿರುಕುಳ ನೀಡುತ್ತಿದ್ದ ಎಂದು ನೊಂದ ಮಹಿಳೆ ಪ್ರಕರಣದಲ್ಲಿ ದಾಖಲಿಸಿದ್ದಾರೆ.

ದೂರು ದಾಖಲಿಸಿ ಕೊಂಡ ಕುಷ್ಟಗಿ ಪೊಲೀಸರು ಐಪಿಸಿ ಕಲಂ 354(ಸ್ತ್ರೀ ಕಿರಿಕಿರಿ) 354(ಬಿ), 506 ಅಡಿಯಲ್ಲಿ ಪ್ರಕರಣ ದಾಖಲಿಸಿದ್ದು ತನಿಖೆ ಕೈಗೊಂಡಿದ್ದಾರೆ.

ಉನ್ನತ ಸ್ಥಾನದಲ್ಲಿರುವ ಅಧಿಕಾರಿಯೇ ತಮ್ಮ ಕಚೇರಿಯಲ್ಲಿ ಈ ರೀತಿ ಮಾಡಿ ಹುದ್ದೆಯ ಘನತೆಗೆ ಧಕ್ಕೆ ತಂದಿದ್ದಾರೆ ಎಂದು ಆರೋಪಿಸಿರುವ ಸಾರ್ವಜನಿಕರು, ಇವರ ವಿರುದ್ಧ ಕೂಡಲೇ ಕ್ರಮ ತೆಗೆದುಕೊಳ್ಳಬೇಕೆಂದು ಒತ್ತಾಯಿಸಿದ್ದಾರೆ.

Comments are closed.