ಬೆಂಗಳೂರು: ರಾಜ್ಯದಲ್ಲಿ ಕಳೆದ 24 ಗಂಟೆಯಲ್ಲಿ ಕೊರೋನಾ ಮಹಾಮಾರಿಗೆ 8,852 ಮಂದಿ ತುತ್ತಾಗಿದ್ದು ಇದರಿಂದ ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 3,35,928ಕ್ಕೇರಿಕೆಯಾಗಿದೆ.
ಶುಕ್ರವಾರ ಒಂದೇ ದಿನ ಬರೋಬ್ಬರಿ 106 ಮಂದಿ ಮಹಾಮಾರಿಗೆ ಬಲಿಯಾಗಿದ್ದಾರೆ. ಇದರೊಂದಿಗೆ ರಾಜ್ಯದಲ್ಲಿ ಸೋಂಕಿನಿಂದ ಮೃತಪಟ್ಟವರ ಸಂಖ್ಯೆ 5,589ಕ್ಕೆ ಏರಿಕೆಯಾಗಿದೆ.
ಕೊರೋನಾ ವೈರಸ್ ನಿಂದಾಗಿ ಕಳೆದ 24 ಗಂಟೆಯಲ್ಲಿ ಬೆಂಗಳೂರಿನಲ್ಲಿ 27 ಸೋಂಕಿತರು ಸೇರಿದಂತೆ ರಾಜ್ಯದಲ್ಲಿ ಒಟ್ಟು 106 ಮಂದಿ ಸಾವನ್ನಪ್ಪಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.
ರಾಜ್ಯದಲ್ಲಿ ಇಂದು 7,101 ಮಂದಿ ಗುಣಮುಖರಾಗಿದ್ದಾರೆ. ಈ ಮೂಲಕ ಒಟ್ಟು 2,42,229 ಮಂದಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ಧಾರೆ. 88,091 ಮಂದಿ ನಿಗದಿತ ಕೊವಿಡ್ ಆಸ್ಪತ್ರೆಗಳಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಆರೋಗ್ಯ ಇಲಾಖೆ ಮಾಹಿತಿ ನೀಡಿದೆ.
ಬೆಂಗಳೂರಿನಲ್ಲಿ ಕಳೆದ 24 ಗಂಟೆಯಲ್ಲಿ 2,821 ಮಂದಿಗೆ ಕೊರೋನಾ ವಕ್ಕರಿಸಿದ್ದು ಸೋಂಕಿತರ ಸಂಖ್ಯೆ 1,27,263ಕ್ಕೆ ಏರಿಕೆಯಾಗಿದೆ. ಇನ್ನು 27 ಮಂದಿ ಮೃತಪಟ್ಟಿದ್ದು ಸಿಲಿಕಾನ್ ಸಿಟಿಯಲ್ಲಿ ಒಟ್ಟಾರೆ ಕೊರೋನಾಗೆ 1,938ಕ್ಕೆ ಏರಿಕೆಯಾಗಿದೆ.
Comments are closed.