ಕರ್ನಾಟಕ

ಸಚಿವೆ ಶಶಿಕಲಾ ಜೊಲ್ಲೆಗೆ ಕೋವಿಡ್-19 ಪಾಸಿಟಿವ್ ದೃಢ

Pinterest LinkedIn Tumblr

ಬೆಳಗಾವಿ: ನಿಪ್ಪಾಣಿ ಶಾಸಕಿ ಹಾಗೂ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಸಚಿವೆ ಶಶಿಕಲಾ ಜೊಲ್ಲೆ ಅವರಿಗೆ ಕೋವಿಡ್ 19 ಸೋಂಕು ದೃಢವಾಗಿದೆ. ತನಗೆ ಕೋವಿಡ್ 19 ಸೋಂಕು ದೃಢಪಟ್ಟಿರುವ ವಿಚಾರವನ್ನು ಸಚಿವೆ ಜೊಲ್ಲೆ ಅವರು ತಮ್ಮ ಫೇಸ್ ಬುಕ್ ಪೋಸ್ಟ್ ನಲ್ಲಿ ದೃಢಪಡಿಸಿದ್ದಾರೆ.

‘ನನಗೆ ಕೊವಿಡ್ ಪಾಸಿಟಿವ್ ಧೃಡಪಟ್ಟಿದ್ದು, ವೈದ್ಯರ ಸಲಹೆಯ ಮೇರೆಗೆ 14 ದಿನಗಳ ಕಾಲ ಮನೆಯಲ್ಲಿಯೇ ಕ್ವಾರೆಂಟೈನ್ ಆಗಲಿದ್ದೇನೆ. ನನ್ನ ಪ್ರಾಥಮಿಕ ಹಾಗೂ ದ್ವಿತೀಯ ಸಂಪರ್ಕದಲ್ಲಿದ್ದವರು, ಕೋವಿಡ್ ಪರೀಕ್ಷೆ ಮಾಡಿಸಿಕೊಂಡು ಕ್ವಾರೆಂಟೈನ್ ಆಗಬೇಕು’ ಎಂದು ಸಚಿವೆ ಜೊಲ್ಲೆ ಅವರು ಮನವಿ ಮಾಡಿಕೊಂಡಿದ್ದಾರೆ.

ಸದ್ಯಕ್ಕೆ ನನ್ನ ಆರೋಗ್ಯ ಪರಿಸ್ಥಿತಿ ಸಹಜವಾಗಿದೆ, ನಿಮ್ಮೆಲ್ಲರ ಪ್ರೀತಿ, ಹಾರೈಕೆಗಳೊಂದಿಗೆ ಮತ್ತೆ ಜನಸೇವೆಗೆ ಮರಳುತ್ತೇನೆ ಎಂದು ಸಚಿವೆ ಶಶಿಕಲಾ ಜೊಲ್ಲೆ ಅವರು ತಮ್ಮ ಫೇಸ್‌ಬುಕ್‌ ಫೋಸ್ಟ್ ನಲ್ಲಿ ಬರೆದುಕೊಂಡಿದ್ದಾರೆ.

Comments are closed.