ಬೆಂಗಳೂರು: ಅಭಿನಯ ಚಕ್ರವರ್ತಿ ಕಿಚ್ಚ ಸುದೀಪ್ ಗೆ ಇಂದು ಹುಟ್ಟುಹಬ್ಬದ ಸಂಭ್ರಮ. 47ನೇ ವಸಂತಕ್ಕೆ ಕಾಲಿಟ್ಟಿರುವ ಸುದೀಪ್ ಈ ಬಾರಿ ಸರಳವಾಗಿ ಜನ್ಮದಿನಾಚರಣೆಯನ್ನು ಆಚರಿಸಿಕೊಳ್ಳುತ್ತಿದ್ದಾರೆ. ಕೊರೋನಾ ಹಿನ್ನೆಲೆಯಲ್ಲಿ ಈ ಬಾರಿಯ ಹುಟ್ಟುಹಬ್ಬ ಅದ್ದೂರಿಯಾಗಿ ಇಲ್ಲದಿದ್ದರೂ, ಅಭಿಮಾನಿಗಳು ಸಾಮಾಜಿಕ ಜಾಲತಾಣದ ಮೂಲಕವೇ ಸಂಭ್ರಮಿಸುತ್ತಿದ್ದಾರೆ. ಸುದೀಪ್ ಗೆ ಶುಭಾಶಯಗಳ ಸುರಿಮಳೆಯೇ ಹರಿದು ಬರುತ್ತಿದೆ.
ಸ್ನೇಹಜೀವಿ ಎನಿಸಿಕೊಂಡಿರುವ ಸ್ಯಾಂಡಲ್ ವುಡ್ ಹೆಬ್ಬುಲಿಗೆ ಚಿತ್ರರಂಗದ ಗಣ್ಯರು ಮತ್ತು ಸ್ನೇಹಿತರು ಪ್ರೀತಿಯಿಂದ ಶುಭ ಕೋರುತ್ತಿದ್ದಾರೆ. ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್, ಜಗ್ಗೇಶ್, ಗಣೇಶ್, ಪ್ರಿಯಾಂಕಾ ಉಪೇಂದ್ರ ಸೇರಿದಂತೆ ಅನೇಕ ಗಣ್ಯರು ಶುಭಾಶಯ ಕೋರಿದ್ದಾರೆ.
Comments are closed.